ಸಿಎಂ ಯೋಗಿ ಆದಿತ್ಯನಾಥ್‌ಗೆ ಠಕ್ಕರ್ ನೀಡಲು ರೆಡಿಯಾದ ಆಮ್ ಆದ್ಮಿ ಪಾರ್ಟಿ!

By Suvarna News  |  First Published Dec 12, 2022, 7:44 PM IST

ದೆಹಲಿ ಮಹಾನಗರ ಪಾಲಿಕೆಯಲ್ಲಿ ಗಟ್ಟಿಯಾಗಿ ಬೇರೂರಿದ್ದ ಬಿಜೆಪಿಯನ್ನು ಸೋಲಿಸಿ ಆಮ್ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬಂದಿದೆ. ಈ ಗೆಲುವು ಆಪ್ ವಿಶ್ವಾಸ ಹೆಚ್ಚಿಸಿದೆ.ಹೀಗಾಗಿ ಉತ್ತರ ಪ್ರದೇಶಕ್ಕೆ ದಂಡೆತ್ತಿ ಹೋಗಲು ಕೇಜ್ರಿವಾಲ್ ತಂಡ ಸಜ್ಜಾಗಿದೆ
 


ನವದೆಹಲಿ(ಡಿ.12): ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಹೊಸ ಹುಮ್ಮಸ್ಸಿನಲ್ಲಿದೆ. ದೆಹಲಿ ಪಾಲಿಕೆಯಲ್ಲಿ ಅಭೂತಪೂರ್ವ ಗೆಲುವು, ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ 5 ಸ್ಥಾನದಲ್ಲಿ ಗೆಲುವು  ಆಪ್ ರಾಜಕೀಯ ಲೆಕ್ಕಾಚಾರಕ್ಕೆ ಹೊಸ ಪುಷ್ಠಿ ನೀಡಿದೆ. ದೆಹಲಿ ಪಾಲಿಕೆಯನ್ನು ಗೆದ್ದ ಬೆನ್ನಲ್ಲೇ ಇದೀಗ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಠಕ್ಕರ್ ನೀಡಲು ಅರವಿಂದ್ ಕೇಜ್ರಿವಾಲ್ ಮುಂದಾಗಿದ್ದಾರೆ. ಉತ್ತರ ಪ್ರದೇಶ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಪ್ ತಯಾರಿ ಮಾಡಿಕೊಳ್ಳುತ್ತಿದೆ. ಉತ್ತರ ಪ್ರದೇಶ ಆಮ್ ಆದ್ಮಿ ಪಾರ್ಟಿ ಉಸ್ತುವಾರಿ ಸಭಜಿತ್ ಸಿಂಗ್ ಈ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಮುಂಬರುವ ಉತ್ತರ ಪ್ರದೇಶ ಪಾಲಿಕೆ ಚುನಾವಣೆಯಲ್ಲಿ ಮೇಯರ್, ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಆಪ್ ಸ್ಪರ್ಧಿಸಲಿದೆ ಎಂದಿದ್ದಾರೆ.

ಉತ್ತರ ಪ್ರದೇಶ ಮಹಾನಗರ ಪಾಲಿಕೆ ಚುನಾವಣೆಯನ್ನು ಆಮ್ ಆದ್ಮಿ ಪಾರ್ಟಿ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ 800 ಸಭೆಗಳನ್ನು ನಡೆಸಲಾಗಿದೆ. ಅಭ್ಯರ್ಥಿಗಳ ಆಯ್ಕೆಗೆ ಚರ್ಚೆ ನಡೆಯುತ್ತಿದೆ. ಈಗಾಗಲೇ 77 ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ಸಭೆಗಳನ್ನು ನಡೆಸಲಿದ್ದಾರೆ. ಈ ಮೂಲಕ ನಗರ ಪಾಲಿಕೆ ಸೇರಿದಂತೆ ಎಲ್ಲಾ ಪಾಲಿಕೆಯ ಎಲ್ಲಾ ಸ್ಥಾನಗಳಲ್ಲಿ ಆಪ್ ಸ್ಪರ್ಧಿಸಲಿದೆ. ಉತ್ತರ ಪ್ರದೇಶದಲ್ಲಿ ಜನರು ಭ್ರಷ್ಟ ಸರ್ಕಾರಕ್ಕೆ ಪಾಠ ಕಲಿಸಲು ಮುಂದಾಗಿದ್ದಾರೆ ಎಂದು ಸಭಜಿತ್ ಸಿಂಗ್ ಹೇಳಿದ್ದಾರೆ.

Tap to resize

Latest Videos

 

ಗುಜರಾತ್‌ನಲ್ಲಿ ಆಪ್ ಸರ್ಕಾರ ರಚನೆ, ಫುಲ್ ಟ್ರೋಲ್ ಆಯ್ತು ಕೇಜ್ರಿವಾಲ್ ಐಬಿ ರಿಪೋರ್ಟ್!

ಭ್ರಷ್ಟ್ರರನ್ನು ದೂರವಿಡಿ, ಆಪ್ ಅಧಿಕಾರಕ್ಕೆ ತನ್ನಿ ಅನ್ನೋ ಘೋಷಣೆ ಮೂಲಕ ಆಮ್ ಆದ್ಮಿ ಪಾರ್ಟಿ ಪ್ರಚಾರ ಆರಂಭಿಸಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಜನರಿಗೆ ಮೂಲಭೂತ ಸೌಕರ್ಯ ನೀಡಲು ವಿಫಲವಾಗಿದೆ. ಭ್ರಷ್ಟ ವ್ಯವಸ್ಥೆಯನ್ನು ಪೋಷಿಸುತ್ತಿದೆ. ಪ್ರಾಥಮಿಕ ಶಾಲೆ ಆಡಳಿತದಲ್ಲಿ ಮಹತ್ತರ ಬದಲಾವಣೆಯಾಗಬೇಕಿದೆ ಎಂದು ಆಮ್ ಆದ್ಮಿ ಪಾರ್ಟಿ ಹೇಳಿದೆ.

ದಿಲ್ಲಿಗೆ ಆಪ್‌ನವರೇ ಮೇಯರ್‌: ಬಿಜೆಪಿ ಸ್ಪಷ್ಟನೆ
ಬಹುನಿರೀಕ್ಷಿತ ದೆಹಲಿ ಪಾಲಿಕೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಬಹುಮತ ಸಾಧಿಸಿದ ಹಿನ್ನೆಲೆಯಲ್ಲಿ ಆಪ್‌ನವರೇ ಮುಂದಿನ ಮೇಯರ್‌ ಆಗಲಿದ್ದಾರೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್‌ ಗುಪ್ತಾ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ‘ಪಾಲಿಕೆಯಲ್ಲಿ ಬಿಜೆಪಿ ಪ್ರಬಲ ಪ್ರತಿಪಕ್ಷದ ಪಾತ್ರ ನಿರ್ವಹಿಸಲಿದೆ. ದೆಹಲಿ ಅಭಿವೃದ್ಧಿಗೆ ಬಿಜೆಪಿ ಸಹ ಶ್ರಮಿಸಲಿದೆ’ ಎಂದು ಗುಪ್ತಾ ಹೇಳಿದ್ದಾರೆ. ಇತ್ತೀಚೆಗೆ ಆಪ್‌ ಗೆಲುವು ಬಳಿಕ ಮಾತನಾಡಿದ್ದ ಬಿಜೆಪಿ ವಕ್ತಾರ ಅಮಿತ್‌ ಮಾಳವೀಯ, ‘ಈ ಮೊದಲು ಚಂಡೀಗಢ ಪಾಲಿಕೆಯ ಚುನಾವಣೆಯಲ್ಲಿ ಆಪ್‌ ಬಹುಮತ ಸಾಧಿಸಿತ್ತು. ಆದರೆ ಮೇಯರ್‌ ಆಗಿ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿದ್ದರು. ದಿಲ್ಲಿಯಲ್ಲೂ ಇದೇ ಮಾದರಿ ಅನುಸರಿಸಬಹುದು’ ಎಂದಿದ್ದರು. ಹೀಗಾಗಿ ಗೊಂದಲ ಸೃಷ್ಟಿಯಾಗಿತ್ತು.,

Gujarat Election Results: ರಾಜ್ಯ ರಾಜಕೀಯದ ಮೇಲಾಗುವ ಪರಿಣಾಮವೇನು?

ಪಾಲಿಕೆ ಚುನಾವಣೆ ಸೋಲು: ದಿಲ್ಲಿ ಬಿಜೆಪಿ ಘಟಕದ ಅಧ್ಯಕ್ಷ ಆದೇಶ್‌ ರಾಜೀನಾಮೆ
ಸತತ 15 ವರ್ಷ ಆಡಳಿತ ನಡೆಸಿ ಈ ಬಾರಿ ದೆಹಲಿ ಪಾಲಿಕೆ ಚುನಾವಣೆಯಲ್ಲಿ ಆಪ್‌ ವಿರುದ್ಧ ಸೋಲು ಕಂಡ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಆದೇಶ್‌ ಗುಪ್ತಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಉಪಾಧ್ಯಕ್ಷರಾಗಿದ್ದ ವಿರೇಂದ್ರ ಸಚ್‌ದೇವ್‌ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಗುಪ್ತಾ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯಾವುದೇ ಚುನಾವಣೆಯಲ್ಲೂ ಬಿಜೆಪಿ ಗೆದ್ದಿರಲಿಲ್ಲ. ಹೀಗಾಗಿ ಅವರ ಮೇಲೆ ಪದಚ್ಯುತಿ ತೂಗುಗತ್ತಿ ನೇತಾಡುತ್ತಿತ್ತು. ಅದರ ಮೊದಲೇ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

click me!