
ದೇವನಹಳ್ಳಿ(ಅ.08): ಕಾಂಗ್ರೆಸ್ ಸರ್ಕಾರದಲ್ಲಿ ಸಾಲು ಸಾಲಾಗಿ ಭ್ರಷ್ಟಾಚಾರ ಪ್ರಕರಣಗಳಿವೆ. ಬಹುತೇಕರು ಬೇಲ್ ಮೇಲೆ ಓಡಾಡುತ್ತಿದ್ದಾರೆ. ಬೇಲ್ ಅಂದರೂ ಒಂದೇ, ಜೈಲಂದರೂ ಒಂದೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
ಬಿಜೆಪಿ ಸದಸ್ಯತ್ವ ಅಭಿಯಾನ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ರಾಜೀನಾಮೆ ಕೊಡಬೇಕಿತ್ತು. ಅವರು ಒಂದೂ ಕಪ್ಪು ಚುಕ್ಕೆಯಿಲ್ಲ ಎಂದು ಹೇಳುತ್ತಾರೆ, ಆದರೆ ಕಪ್ಪು ಕಾಗೆಗೆ ಕಪ್ಪು ಚುಕ್ಕೆ ಹುಡುಕುವವರು ಯಾರು? ಸಿದ್ದರಾಮಯ್ಯ ದೆಹಲಿಯ ಅರವಿಂದ್ ಕೇಜ್ರಿವಾಲರನ್ನು ಮಾದರಿಯಾಗಿ ಇಟ್ಟುಕೊಂಡಿದ್ದಾರೆ. ಏಕೆಂದರೆ ಅವರು ರಾಜೀನಾಮೆ ನೀಡದೆ ಜೈಲಿನಿಂದಲೇ ಆಡಳಿತ ನಡೆಸಿದ್ದಾರೆ. ಅದೇ ಇವರಿಗೆ ಪ್ರೇರಣೆಯಾಗಿದೆ ಎಂದರು.
ಸಿದ್ದು ಮಾಡಿಸಿದ್ದು ಜಾತಿ ಗಣತಿಯಲ್ಲ, ಅದು ಸಮೀಕ್ಷೆಯಷ್ಟೆ: ಶಾಸಕ ಬೆಲ್ಲದ್
ನಮ್ಮ ರಾಜ್ಯ ಕೇಂದ್ರಾಡಳಿತ ಪ್ರದೇಶವಲ್ಲ, ಆದ್ದರಿಂದ ತನಿಖೆ ಮಾಡುವ ಸಂಸ್ಥೆಗಳು ಮುಖ್ಯಮಂತ್ರಿಗಳ ಅಧೀನದಲ್ಲಿರುತ್ತವೆ. ಸರಿಯಾದ ತನಿಖೆ ನಡೆಯುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳ ಮೇಲಿರುವ ಪ್ರಕರಣಗಳನ್ನು ಸಿಬಿಐಗೆ ವರ್ಗಾವಣೆ ಮಾಡಬೇಕು. ತಾಲೂಕಿನಲ್ಲಿ 50 ಸಾವಿರ ಸದಸ್ಯತ್ವದ ಗುರಿ ಹೊಂದಿದ್ದು, ಎಲ್ಲ ಮುಖಂಡರು ಕೇಂದ್ರದ ಸಾಧನೆಗಳನ್ನು ತಿಳಿಸಿ ಸದಸ್ಯತ್ವ ಹೆಚ್ಚು ಮಾಡಬೇಕು ಎಂದರು.
ಈ ವೇಳೆ ತಾಲೂಕು ಅಧ್ಯಕ್ಷ ಸುಂದರೇಶ್, ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಜಿಲ್ಲಾ ಕಾರ್ಯದರ್ಶಿ ಎಚ್.ಎಂ.ರವಿಕುಮಾರ್, ಮಾಜಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ಮುಖಂಡರಾದ ಎಕೆಪಿ ನಾಗೇಶ್, ಬುಳ್ಳಹಳ್ಳಿ ರಾಜಪ್ಪ, ಚನ್ನಕೇಶವ ಮಹಿಳಾ ಮುಖಂಡರಾದ ನಾಗವೇಣಿ ಹಾಗೂ ಆರ್.ಪುನೀತಾ ಇತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.