
ನವದೆಹಲಿ(ಮಾ.07): ಬಿಜೆಪಿ ಪಾಲಿಗೆ ಮಹತ್ವದ್ದಾಗಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿಯನ್ನು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ನೀಡಲಾಗಿದೆ.
ಮಾ.27ರಿಂದ ನಡೆಯಲಿರುವ ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ನಿರ್ದೇಶನದಂತೆ ದಿಢೀರ್ ದೆಹಲಿಗೆ ತೆರಳಿರುವ ಅರವಿಂದ ಲಿಂಬಾವಳಿ ಅವರು ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವು ಮುಖಂಡರ ಜತೆಗೆ ಶನಿವಾರ ಚರ್ಚೆ ನಡೆಸಿದ್ದರು.
ಲಿಂಬಾವಳಿಗೆ ಬಂಗಾಳ ಚುನಾವಣೆ ಹೊಣೆ ಸಾಧ್ಯತೆ
ಲಿಂಬಾವಳಿ ಅವರು ಕರ್ನಾಟಕದಲ್ಲಿ ಸಾಮಾಜಿಕ ಜಾಲತಾಣವನ್ನು ಸಮರ್ಪಕವಾಗಿ ಪಕ್ಷ ಸಂಘಟನೆಗೆ ಬಳಸಿಕೊಂಡಿರುವುದು ಮತ್ತು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಹಿನ್ನೆಲೆಯಲ್ಲಿ ಈ ಹೊಣೆಗಾರಿಕೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.