ಲಿಂಬಾವಳಿಗೆ ಬಂಗಾಳ ಚುನಾವಣೆ ಹೊಣೆ ಸಾಧ್ಯತೆ

Kannadaprabha News   | Asianet News
Published : Mar 06, 2021, 12:42 PM IST
ಲಿಂಬಾವಳಿಗೆ ಬಂಗಾಳ ಚುನಾವಣೆ ಹೊಣೆ ಸಾಧ್ಯತೆ

ಸಾರಾಂಶ

ಬಿಜೆಪಿ ಹೈಕಮಾಂಡ್‌ ಆಹ್ವಾನದ ಮೇರೆಗೆ ಕಲಬುರ್ಗಿ ಪ್ರವಾಸ ರದ್ದುಗೊಳಿಸಿ ಶನಿವಾರ ದೆಹಲಿಗೆ ತೆರಳಲಿದ ಲಿಂಬಾವಳಿ| ಈ ಹಿಂದೆ ತೆಲಂಗಾಣ ರಾಜ್ಯದ ಉಸ್ತುವಾರಿಯಾಗಿ ಕೆಲಸ ನಿರ್ವಹಿಸಿದ್ದ ಲಿಂಬಾವಳಿ| ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಾಧನೆ ಹೆಚ್ಚಳಗೊಳ್ಳುವಲ್ಲಿ ಶ್ರಮಿಸಿದ್ದ ಲಿಂಬಾವಳಿ| 

ಬೆಂಗಳೂರು(ಮಾ.06): ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ್‌ ಲಿಂಬಾವಳಿ ಅವರಿಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಜವಾಬ್ದಾರಿ ನೀಡುವ ಸಾಧ್ಯತೆಯಿದೆ. 

ಬಿಜೆಪಿ ಹೈಕಮಾಂಡ್‌ ಆಹ್ವಾನದ ಮೇರೆಗೆ ಲಿಂಬಾವಳಿ ಅವರು ತಮ್ಮ ಕಲಬುರ್ಗಿ ಪ್ರವಾಸ ರದ್ದುಗೊಳಿಸಿ ಶನಿವಾರ ದೆಹಲಿಗೆ ತೆರಳಲಿದ್ದು, ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ್ ಲಿಂಬಾವಳಿ ರಾಜೀನಾಮೆ...!

ಈ ಹಿಂದೆ ತೆಲಂಗಾಣ ರಾಜ್ಯದ ಉಸ್ತುವಾರಿಯಾಗಿ ಕೆಲಸ ನಿರ್ವಹಿಸಿರುವ ಲಿಂಬಾವಳಿ ಅವರು ಅಲ್ಲಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಾಧನೆ ಹೆಚ್ಚಳಗೊಳ್ಳುವಲ್ಲಿ ಶ್ರಮಿಸಿದ್ದರು. ಇದೀಗ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಉಸ್ತುವಾರಿ ತಂಡದಲ್ಲಿ ಜವಾಬ್ದಾರಿ ನೀಡುವ ನಿರೀಕ್ಷೆಯಿದೆ ಎನ್ನಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!