ಬಿಬಿಎಂಪಿಗೆ ಹಲವು ಹಳ್ಳಿ ಸೇರಿಸಿದ್ದಕ್ಕೆ ಈಗ ಡಾಂಬರೀಕರಣ: ಎಚ್‌.ಡಿ.ಕುಮಾರಸ್ವಾಮಿ

Published : Apr 09, 2023, 09:04 AM IST
ಬಿಬಿಎಂಪಿಗೆ ಹಲವು ಹಳ್ಳಿ ಸೇರಿಸಿದ್ದಕ್ಕೆ ಈಗ ಡಾಂಬರೀಕರಣ: ಎಚ್‌.ಡಿ.ಕುಮಾರಸ್ವಾಮಿ

ಸಾರಾಂಶ

‘2006ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಯಶವಂತಪುರ ಕ್ಷೇತ್ರದ ಹಲವು ಹಳ್ಳಿಗಳು ಸೇರಿದಂತೆ ಏಳು ನಗರಸಭೆ, ಒಂದು ಪಟ್ಟಣ ಪಂಚಾಯಿತಿಯನ್ನು ಬಿಬಿಎಂಪಿ ವ್ಯಾಪ್ತಿಗೆ ತಂದಿದ್ದೇನೆ. ಹೀಗಾಗಿ ಈಗ ಡಾಂಬರೀಕರಣ ಆಗಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 

ಬೆಂಗಳೂರು (ಏ.09): ‘2006ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಯಶವಂತಪುರ ಕ್ಷೇತ್ರದ ಹಲವು ಹಳ್ಳಿಗಳು ಸೇರಿದಂತೆ ಏಳು ನಗರಸಭೆ, ಒಂದು ಪಟ್ಟಣ ಪಂಚಾಯಿತಿಯನ್ನು ಬಿಬಿಎಂಪಿ ವ್ಯಾಪ್ತಿಗೆ ತಂದಿದ್ದೇನೆ. ಹೀಗಾಗಿ ಈಗ ಡಾಂಬರೀಕರಣ ಆಗಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಚೇನಹಳ್ಳಿ, ಶ್ರೀನಿವಾಸಪುರ ಸೇರಿದಂತೆ ವಿವಿಧೆಡೆ ಪಂಚರತ್ನ ರಥಯಾತ್ರೆ ನಡೆಯಿತು. ಈ ವೇಳೆ ಪಕ್ಷದ ಅಭ್ಯರ್ಥಿ ಜವರಾಯಿಗೌಡ ಪರ ಮತಯಾಚಿಸಿದರು. ಆಗ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪಕ್ಷದ ಅಭ್ಯರ್ಥಿ ಜವರಾಯಿಗೌಡ ಅವರು ಅತ್ಯಂತ ಪ್ರಾಮಾಣಿಕ ವ್ಯಕ್ತಿಯಾಗಿದ್ದು, 2-3 ಬಾರಿ ನಿಂತು ಅತ್ಯಲ್ಪ ಮತದಿಂದ ಸೋತಿದ್ದಾರೆ. 

ನಮ್ಮ ಒತ್ತಾಯಕ್ಕೆ ಮತ್ತೊಮ್ಮೆ ಸ್ಪರ್ಧಿಸುತ್ತಿದ್ದಾರೆ. ಅವರನ್ನು ಗೆಲ್ಲಿಸಿಕೊಡುವ ಮೂಲಕ ಪಕ್ಷಕ್ಕೆ ಒಂದು ಅವಕಾಶ ನೀಡಬೇಕು. ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಬಡತನ ನಿವಾರಿಸುವ ಕಾರ್ಯಕ್ರಮಗಳನ್ನು ನೀಡುತ್ತೇವೆ’ ಎಂದು ಅಶ್ವಾಸನೆ ನೀಡಿದರು. ಈ ಹಿಂದೆ 100ಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ನೀಡುವ ತೀರ್ಮಾನ ಕೈಗೊಂಡಿದ್ದು, ಈ ಭಾಗದ ಕುಟುಂಬಗಳಿಗೂ ಹಕ್ಕುಪತ್ರ ದೊರೆತಿದೆ. ಯಾರಿಗೆ ಹಕ್ಕುಪತ್ರ ದೊರೆತಿಲ್ಲ ಅವರು ಹೆದರುವ ಅವಶ್ಯಕತೆ ಇಲ್ಲ. ಅವರಿಗೆ ಹಕ್ಕುಪತ್ರ ನೀಡುವ ಜವಾಬ್ದಾರಿ ನಮಗೆ ಬಿಡಿ. ಬ್ಯಾಂಕ್‌ ಸಾಲ ಕೊಡಿಸುವ ಕೆಲಸ ಮಾಡಲಿದ್ದೇವೆ. ಬಡ, ಮಧ್ಯಮವರ್ಗದವರಿಗೆ ಆರೋಗ್ಯ, ಶಿಕ್ಷಣ ಒದಗಿಸಲಾಗುವುದು. 

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್‌ ಮೊಪೆಡ್‌: ಎಚ್‌ಡಿಕೆ ಭರವಸೆ

ಬಡವರ ಕಾಯಿಲೆಗೆ ಎಷ್ಟೇ ವೆಚ್ಚವಾದರೂ ಸರ್ಕಾರವೇ ಭರಿಸುವ ಕಾರ್ಯಕ್ರಮ ತರಲಾಗುವುದು. ಕ್ಷೇತ್ರದ ಹಲವೆಡೆ ಕಸ ವಿಲೇವಾರಿ ಸಮಸ್ಯೆ ಇದ್ದು, ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಕಳೆದ ನಾಲ್ಕು ತಿಂಗಳಿನಿಂದ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಸ್ಪಷ್ಟಬಹುಮತ ಸರ್ಕಾರ ತರಲು ಕೆಲಸ ಮಾಡುತ್ತಿದ್ದೇನೆ. ಒಂದು ಅವಧಿಗೆ ಅವಕಾಶ ನೀಡಿ. ಐದು ವರ್ಷದಲ್ಲಿ ಪಂಚರತ್ನ ಯೊಜನೆ ಜತೆ ಸಾಮಾಜಿಕ ಕಳಕಳಿ ಯೋಜನೆ ಜಾರಿಗೆ ತರುತ್ತೇನೆ ಎಂದರು. ಯಶವಂತಪುರ ಕ್ಷೇತ್ರದ ಕೆಂಚೇನಹಳ್ಳಿಯಿಂದ ರೋಡ್‌ ಶೋ ನಡೆಸಿದ ಎಚ್‌.ಡಿ.ಕುಮಾರಸ್ವಾಮಿ, ಪಟ್ಟಣಗೆರೆ, ಗಾಣಕಲ್ಲು, ವಾಜರಹಳ್ಳಿ, ಶ್ರೀನಿವಾಪುರ, ಚಿಕ್ಕೇಗೌಡನಪಾಳ್ಯ, ಹೆಮ್ಮಿಗೆಪುರ, ಕೆಂಗೇರಿ ಕೋಟೆ, ಕೆ.ಗೊಲ್ಲಹಳ್ಳಿ, ಗೋಣಿಪುರ ಭಾಗದಲ್ಲಿ ಪ್ರಚಾರ ಕೈಗೊಂಡರು.

ನಂದಿನಿ ಬ್ರ್ಯಾಂಡ್‌ ಹಾಳುಗೆಡವಲು ವ್ಯವಸ್ಥಿತ ಸಂಚು: ಗುಜರಾತಿನ ಅಮುಲ್‌ ರಾಜ್ಯದ ಹಾಲು ಉತ್ಪಾದಕರ ಅನ್ನ ಕಸಿದುಕೊಳ್ಳುತಿದೆ. ನಂದಿನಿ ಬ್ರ್ಯಾಂಡ್‌ ಹಾಳುಗೆಡವಲು ವ್ಯವಸ್ಥಿತ ಸಂಚು ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಕರ್ನಾಟಕ ಋುಣಿಯಾಗಿರಬೇಕಾದ ಅಮುಲ್‌, ಕೆಎಂಎಫ್‌ಗೆ ಅನಾರೋಗ್ಯಕರ ಪೈಪೋಟಿ ಸಹಕಾರ ಒಡ್ಡುವ ಮೂಲಕ ಸಹಕಾರ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ ಸಂಚು ನಡೆದಿದೆ. ಅಮುಲ್‌ ಜತೆ ನಂದಿನಿ ವಿಲೀನ ಮಾಡುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ಮೊದಲ ಸಂಚು, ಮೊಸರು ಪಾಕೆಚ್‌ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ ಎರಡನೇ ಸಂಚು. 

ಖರ್ಗೆ ಸಿಎಂ ಆಗುವುದಾದರೆ ನನ್ನ ಅವಕಾಶ ಬಿಡುವೆ: ಡಿ.ಕೆ.ಶಿವಕುಮಾರ್‌

ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚುಗಳು ವಿಫಲವಾಗಿವೆ. 3ನೇ ಸಂಚು ಸಫಲಗೊಳಿಸಲು ಅಮುಲ್‌ ಮೂಲಕ ಕೇಂದ್ರ ಸರಕಾರ ಹೊರಟಿದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ. ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್‌ ದುರಾಲೋಚನೆ. ಒಂದು ದೇಶ, ಒಂದು ಅಮುಲ್‌, ಒಂದೇ ಹಾಲು, ಒಂದೇ ಗುಜರಾತ್‌ ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್‌ಗೆ ಒತ್ತಾಸೆಯಾಗಿ ನಿಂತು ಕೆಎಂಎಫ್‌ ಕತ್ತು ಹಿಸುಕುತ್ತಿದೆ. ಈಗ ಅಮುಲ್‌ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ