* ಸಿಂದಗಿ,ಹಾನಗಲ್ ಉಪ ಚುನಾವಣೆಯ ದಿನಾಂಕ ಪ್ರಕಟ
* ಇದರ ಬೆನ್ನಲ್ಲೇ ಸಿಂದಗಿ ಬೈ ಎಲೆಕ್ಷನ್‌ಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
* ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಅವರಿಂದ ಅಭ್ಯರ್ಥಿ ಹೆಸರು ಪ್ರಕಟ
ಬೆಂಗಳೂರು, (ಸೆ.28): ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (By Election) ಘೋಷಣೆಯಾಗುತ್ತಿದ್ದಂತೆಯೇ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಇಂದು (ಸೆ.28) ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ (Eshwar Khandre) ಅವರು ಸುದ್ದಿಗೋಷ್ಠಿ ನಡೆಸಿ, ಅಶೋಕ್ ಮನಗೂಳಿ ಕಾಂಗ್ರೆಸ್ (Congress) ಪಕ್ಷದ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.
ಬೈಎಲೆಕ್ಷನ್ ದಿನಾಂಕ ನಿಗದಿ: ಹಾನಗಲ್ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಘೋಷಣೆ
ಹಾನಗಲ್ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಪಕ್ಷದ ವರಿಷ್ಠರು ಘೋಷಣೆ ಮಾಡಲಿದ್ದಾರೆ. ಈ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಹಾನಗಲ್ನಲ್ಲಿ ಮನೋಹರ್ ತಹಶಿಲ್ದಾರ್, ಶ್ರೀನಿವಾಸ್ ಮಾನೆ ಆಕಾಂಕ್ಷಿಗಳಾಗಿದ್ದಾರೆ. ಇವರಿಬ್ಬರಷ್ಟೇ ಅಲ್ಲ, ಇನ್ನು ಕೆಲವರೂ ಟಿಕೆಟ್ ಕೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರು, ವಿಪಕ್ಷ ನಾಯಕರು ಹಾಗೂ ಹೈಕಮಾಂಡ್ ನಾಯಕರು ಅಭ್ಯರ್ಥಿ ಫೈನಲ್ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ಈ ಹಿಂದೆ ಬಿಜೆಪಿಗೆ ಸಹಾಯ ಮಾಡಿತ್ತು. ಬಸವಕಲ್ಯಾಣ, ಮಸ್ಕಿ ಉಪಚುನಾವಣೆ ವೇಳೆ ಬಿಜೆಪಿಗೆ ಸಹಾಯ ಮಾಡಿತ್ತು. ಈ ಬಾರಿ ನಾವು ನಮ್ಮ ಗೆಲುವಿನ ಬಗ್ಗೆ ಗಮನದಲ್ಲಿಟ್ಟುಕೊಂಡು ತಂತ್ರ ರೂಪಿಸುತ್ತೇವೆ ಎಂದರು.
ದಳಪತಿಗಳಿಗೆ ಬಿಗ್ ಶಾಕ್: ಜೆಡಿಎಸ್ ಅಭ್ಯರ್ಥಿಯಾಗಬೇಕಿದ್ದ ನಾಯಕ ಕಾಂಗ್ರೆಸ್ ಸೇರ್ಪಡೆ
ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ಸಿಂದಗಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಅ.30 ರಂದು ಸಿಂದಗಿ ಮತ್ತು ಹಾನಗಲ್ ಎರಡು ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಅ.1 ರಿಂದ ಅಧಿಸೂಚನೆ ಪ್ರಕಟವಾಗಲಿದೆ. ನ. 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಅ.8 ರಂದು ನಾಮ ಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ. ಅ.11 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. ಅ.13 ನಾಮಪತ್ರ ಹಿಂಪಡೆಯುವ ಕೊನೆಯ ದಿನವಾಗಿರಲಿದೆ. ನ. 2 ಮತ ಎಣಿಕೆ.