
ಆರ್ ಎಸ್ಎಸ್ ಪ್ರಾರ್ಥನಾ ಗೀತೆ 'ನಮಸ್ತೇ ಸದಾ ವತ್ಸಲೇ ಮಾತೃಭೂಮೇ' ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಟೀಕೆ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ನಮಸ್ತೇ ಸದಾ ವತ್ಸಲೇ ಮಾತೃಭೂಮೇ' ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಪ್ರಶ್ನೆ ಮಾಡಿದ್ದಾರೆ. ಮುಂದುವರೆದು ಪ್ರಾರ್ಥನಾ ಗೀತೆಯ ಸಾರಾಂಶವನ್ನೂ ತಿಳಿಸಿದ್ದಾರೆ.
ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. 'ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು. ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ? ಎಂದು ಕೇಳಿದ್ದಾರೆ.
ಒಂದು ಕಡೆ ವಿಧಾನಸೌಧದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ? ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಬಿ.ಕೆ. ಹರಿಪ್ರಸಾದ್ ಅವರು ಹೇಳಿದ್ದಕ್ಕೆ ಕ್ಷಮೆ ಕೇಳಿದರಾ? ಎಂದು ಪ್ರಶ್ನಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು. 'He who loves not his country can love nothing. ಅಂದರೆ 'ತನ್ನ ಮಾತೃಭೂಮಿಯನ್ನು ಪ್ರೀತಿಸದವನು ಏನನ್ನೂ ಪ್ರೀತಿಸಲಾರ' ಎನ್ನುವ ಮಾತಿದೆ.
ಆದರೆ ಕಾಂಗ್ರೆಸ್ ಪಕ್ಷದಲ್ಲಿ 'ಕುರ್ಚಿಯ ಮೇಲೆ ಪ್ರೀತಿ ಇದ್ದರೆ, ದೇಶಪ್ರೇಮವನ್ನು ಬಿಡಬೇಕು' ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ. ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂದು ನಾಡಗೀತೆ ಹಾಡುವ ಮೂಲಕ ಕಾಂಗ್ರೆಸ್ ನಾಯಕರಿಗೆ ಟೀಕೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.