5 ವರ್ಷ ಸಿಎಂ ಹುದ್ದೆ ಬಗ್ಗೆ ಸಚಿವ ಮಹದೇವಪ್ಪನ ಕೇಳಿ: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Jun 19, 2023, 3:20 AM IST

ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ಸ್ವತಃ ಸಿದ್ದರಾಮಯ್ಯ ಹಾಗೂ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ನಿರಾಕರಿಸಿದ್ದು, ಅವರನ್ನೇ ಕೇಳಿ ಎಂದಿದ್ದಾರೆ.


ಬೆಂಗಳೂರು (ಜೂ.19): ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ಸ್ವತಃ ಸಿದ್ದರಾಮಯ್ಯ ಹಾಗೂ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ನಿರಾಕರಿಸಿದ್ದು, ಅವರನ್ನೇ ಕೇಳಿ ಎಂದಿದ್ದಾರೆ. ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಮಹದೇವಪ್ಪ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ. ಆ ಬಗ್ಗೆ ಅವರನ್ನೇ ಕೇಳಿ ಎಂದರು.

ಇನ್ನು ಎಂ.ಬಿ.ಪಾಟೀಲ್‌ ಮಾತನಾಡಿ, ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿ ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದೆ. ಈಗಲೂ ನಾನು ಆ ಮಾತಿಗೆ ಬದ್ಧನಾಗಿದ್ದೇನೆ. ನನಗೆ ಆ ಬಗ್ಗೆ ಮಾತನಾಡಬಾರದು ಎಂದು ಯಾರೂ ಹೇಳಿಲ್ಲ. ಆದರೆ ಸಚಿವ ಮಹದೇವಪ್ಪ ನೀಡಿರುವ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅದನ್ನು ಅವರ ಬಳಿಯೇ ಕೇಳಿ ಎಂದು ಹೇಳಿದರು. ಶಾಸಕಾಂಗ ಪಕ್ಷದ ಸಂದರ್ಭದಲ್ಲಿ ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಹೈಕಮಾಂಡ್‌ ಯಾವ ಸೂಚನೆಯನ್ನೂ ಕೊಟ್ಟಿಲ್ಲ. ಕೆ.ಸಿ ವೇಣುಗೋಪಾಲ್‌ ಸುದ್ದಿಗೋಷ್ಠಿಯಲ್ಲಿ ಏನು ಮಾಹಿತಿ ಕೊಟ್ಟಿದ್ದರೋ ಅಷ್ಟುಮಾತ್ರ ನಮಗೆ ಗೊತ್ತಿದೆ. ಉಳಿದದ್ದು ಅವರವರ ವೈಯಕ್ತಿಕ ಹೇಳಿಕೆ ಎಂದರು.

Tap to resize

Latest Videos

‘ಅಕ್ಕಿಭಾಗ್ಯ​’ದಲ್ಲಿ ಕಾಂಗ್ರೆಸ್‌ ಬಣ್ಣ ಬಯ​ಲು: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ

ಎಫ್‌ಕೆಸಿಸಿಐ ಜೊತೆ ಮಾತನಾಡುತ್ತೇನೆ: ವಿದ್ಯುತ್‌ ದರ ಹೆಚ್ಚಳ ಸಂಬಂಧ ಅಸಮಧಾನ ವ್ಯಕ್ತಪಡಿಸಿರುವ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಒಕ್ಕೂಟ (ಎಫ್‌ಕೆಸಿಸಿಐ) ಸಂಸ್ಥೆಗಳ ಪ್ರತಿನಿಧಿಗಳನ್ನು ಕರೆಸಿ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಮ್ಮ ಅಧಿಕಾರಿಗಳು ಎಫ್‌ಕೆಸಿಸಿಐ ಪ್ರತಿನಿಧಿಗಳನ್ನು ಕರೆಸಿ ವಾಸ್ತವಾಂಶಗಳೇನು ಎಂಬ ಬಗ್ಗೆ ವಿವರಿಸಿದ್ದಾರೆ. ಅವರಿಗೂ ವಸ್ತುಸ್ಥಿತಿ ಏನಿದೆ ಸತ್ಯಾಂಶ ಏನು ಎಂಬುದು ಅರ್ಥವಾಗಿರುತ್ತದೆ ಎಂದು ಭಾವಿಸಿದ್ದೇನೆ. ಆದರೂ ತಾವೂ ಕೂಡ ಮತ್ತೊಮ್ಮೆ ಅವರನ್ನು ಕರೆಸಿ ಮಾತನಾಡುತ್ತೇನೆ. ಎರಡು ತಿಂಗಳ ವಿದ್ಯುತ್‌ ಬಳಕೆ ಬಿಲ್‌ ಒಂದೇ ಬಾರಿ ಬಂದಿರುವುದಕ್ಕೆ ಅವರಿಗೆ ಶುಲ್ಕ ಭಾರವಾಗಿ ಕಾಣುತ್ತಿದೆ. ಆದರೆ, ಮುಂದಿನ ತಿಂಗಳಿಂದ ಒಂದೇ ತಿಂಗಳ ಬಿಲ್‌ ಬರುವುದರಿಂದ ಕಡಿಮೆಯಾಗಲಿದೆ ಎಂದರು.

ಉತ್ತರದಾಯಿತ್ವ ಇಲ್ಲದವರು ಹುದ್ದೆಯಲ್ಲಿರಲು ಅನರ್ಹರು: ಉತ್ತರದಾಯಿತ್ವ ಇರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಅಗತ್ಯ ನಮ್ಮ ದೇಶಕ್ಕೆ ಹೆಚ್ಚಾಗಿದೆ. ಉತ್ತರದಾಯಿತ್ವ ಇಲ್ಲದಿದ್ದರೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ತಮ್ಮ ಸ್ಥಾನ, ಹುದ್ದೆಯಲ್ಲಿರಲು ಅನರ್ಹರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ರಾಜಾಜಿನಗರದಲ್ಲಿ ಭಾನುವಾರ ಇನ್‌ ಸೈಟ್‌ ಐಎಎಸ್‌ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಪಿಎಸ್‌ಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕೆಲಸ ಮಾಡುವ ಹೊಣೆಗಾರಿಕೆ ಐಎಎಸ್‌, ಕೆಎಎಸ್‌ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಮೇಲಿರುತ್ತದೆ ಎಂದು ತಿಳಿಸಿದರು.

ಸಾಂಸ್ಕೃತಿಕ, ಚಾರಿತ್ರಿಕ, ಬೌದ್ಧಿಕ ನೆಲೆಗಟ್ಟಿನಲ್ಲಿ ಮೈಸೂರು ಅಭಿವೃದ್ಧಿ: ಸಚಿವ ಮಹದೇವಪ್ಪ

ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ. ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ. ಈ ಅಸಮಾನತೆಯನ್ನು ಅಳಿಸಲು ಸಾಧ್ಯವಾಗದಿದ್ದರೆ, ಆ ದಿಕ್ಕಿನಲ್ಲಿ ಶ್ರಮಿಸದಿದ್ದರೆ ನಾವು ಜನಪ್ರತಿನಿಧಿಗಳಾಗಿ, ಐಎಎಸ್‌-ಕೆಎಎಸ್‌ ಅಧಿಕಾರಿಗಳಾಗಿ ಏನು ಪ್ರಯೋಜನ ಎಂದು ಪ್ರಶ್ನಿಸಿದರಲ್ಲದೆ, ಈ ಅಸಮಾನತೆ, ತಾರತಮ್ಯ ಅಳಿಸಲು ಯತ್ನಿಸದೇ ಹೋದರೆ ಈ ದೇಶದ ಜನರೇ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡುತ್ತಾರೆ ಎನ್ನುವ ಎಚ್ಚರಿಕೆಯ ಮಾತನ್ನು ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಹೇಳಿದ್ದರು ಎಂದು ಸ್ಮರಿಸಿದರು.

click me!