ಸತೀಶ್ ಜಾರಕಿಹೊಳಿ ಅವರು ನಾಲ್ವರನ್ನಷ್ಟೇ ಭೋಜನ ಕೂಟಕ್ಕೆ ಆಹ್ವಾನಿಸಿದ್ದು, ನಾವು ತೆರಳಿದ್ದೇವೆ. ಇಷ್ಟೇ ಜನರಿಗೆ ಏಕೆ ಆಹ್ವಾನ ನೀಡಲಾಯಿತು ಎಂದು ಅವರನ್ನೇ ಕೇಳಿ. ಅಲ್ಲಿ ರಾಜಕೀಯ ಚರ್ಚೆ ನಡೆದಿಲ್ಲ ಎಂದ ಸಿದ್ದರಾಮಯ್ಯ ಅವರು
ಬೆಂಗಳೂರು(ಜ.07): 'ಸಚಿವ ಸತೀಶ್ ಜಾರಕಿಹೊಳಿ ಅವರು ಯಾರಾರಿಗೆ ಆಹ್ವಾನ ನೀಡಿದ್ದರೋ ಅವರೆಲ್ಲಾ ಗುರುವಾರಭೋಜನಕೂಟದಲ್ಲಿ ಪಾಲ್ಗೊಂಡಿದ್ದಾರೆ. ಉಳಿದವರಿಗೆ ಏಕೆ ಆಹ್ವಾನ ನೀಡಿಲ್ಲ ಎಂದು ನೀವು ಅವರನ್ನೇ ಕೇಳಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
'ಗುರುವಾರ ಸಚಿವ ಸಂಪುಟ ಸಭೆ ಆಯೋಜನೆಯಾಗಿದ್ದು ಬಹುತೇಕ ಸಚಿವರು ನಗರದಲ್ಲೇ ಇದ್ದರೂ ಸೀಮಿತ ಸಂಖ್ಯೆಯ ವರಿಗೆ ಮಾತ್ರ ಭೋಜನಕೂಟಕ್ಕೆ ಆಹ್ವಾನ ನೀಡಲಾಯಿತೇ' ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, 'ಸತೀಶ್ ಜಾರಕಿಹೊಳಿ ಅವರು ನಾಲ್ವರನ್ನಷ್ಟೇ ಭೋಜನ ಕೂಟಕ್ಕೆ ಆಹ್ವಾನಿಸಿದ್ದು, ನಾವು ತೆರಳಿದ್ದೇವೆ. ಇಷ್ಟೇ ಜನರಿಗೆ ಏಕೆ ಆಹ್ವಾನ ನೀಡಲಾಯಿತು ಎಂದು ಅವರನ್ನೇ ಕೇಳಿ. ಅಲ್ಲಿ ರಾಜಕೀಯ ಚರ್ಚೆ ನಡೆದಿಲ್ಲ' ಎಂದು ಪ್ರತಿಕ್ರಿಯಿಸಿದರು.
ವಿಧಾನ ಪರಿಷತ್‌ಗೆ ನಾಮ ನಿರ್ದೇಶನ ಮಾಡುವ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಾಗುವುದು. ಸಿನಿಮಾ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ನಾಮ ನಿರ್ದೇಶನಕ್ಕೆ ಪರಿಗಣಿಸಲಾಗುವುದು. ವಿವಿಧ ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾ ಗುವುದು ಎಂದು ತಿಳಿಸಿದರು.
2028ಕ್ಕೆ ನಾನೇ ಮುಖ್ಯಮಂತ್ರಿ ಅಭ್ಯರ್ಥಿ: ಸಚಿವ ಸತೀಶ್ ಜಾರಕಿಹೊಳಿ
ರಾಯಚೂರು: ರಾಜ್ಯದಲ್ಲಿ ಶೇ.60 ಪರ್ಸೇಂಟ್ ಸರ್ಕಾರವಿದೆ ಎಂದು ಬಿಜೆಪಿಗರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಗತ್ಯ ದಾಖಲೆಗಳೊಂದಿಗೆ ಸಾಬೀತುಪಡಿಸಬೇಕೆ ಹೊರತು ಸುಮ್ಮನೇ ಹೇಳಿಕೆಗಳನ್ನು ನೀಡಿದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದರು.
ಸ್ಥಳೀಯ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ ಎನ್.ಎಸ್.ಬೋಸರಾಜು ಅವರ ನಿವಾ ಸದಲ್ಲಿ ಉಪಹಾರ ಸೇವಿಸಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ ಎಂದು ಅವರು ಹೇಳಿದರು.
ಬೀದರ್‌ನ ಗುತ್ತಿಗೆದಾರರ ಡೆತ್ ನೋಟ್‌ನಲ್ಲಿ ಖರ್ಗೆ ಅವರ ಆಪ್ತರ ಹೆಸರಿದೆ. ಈಶ್ವರಪ್ಪನವರದ್ದು ನೇರವಾಗಿ ಪತ್ರದಲ್ಲಿ ಹೆಸರಿತ್ತು. ಆಪ್ತರ, ಪಿಎಂಗಳ ಹೆಸರು ಇದೆ ಎಂದ ಮಾತ್ರಕ್ಕೆ ಸಚಿವರು ನೇರವಾಗಿ ಹೊಣೆಗಾರರು ಆಗುವುದಿಲ್ಲ, ಪ್ರಕರಣದ ತನಿಖೆ ನಡೆಯುತ್ತಿದೆ ಎಂದರು.
ಸಾರಿಗೆ ಬಸ್ ದರ ಹೆಚ್ಚಳ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯವರು ಕೇಂದ್ರದ ಜಿಎಸ್‌ಟಿ ಹೇರಿಕೆ ಬಗ್ಗೆಯೂ ಮಾತನಾಡಬೇಕು, ಕೇಂದ್ರ ಹಣಕಾಸು ಸಚಿವ ಹಳೆಯ ಗಾಡಿಗಳಿಗೆ ಶೇ.18 ರಷ್ಟು ಜಿಎಸ್‌ಟಿ ಹಾಕಿದ್ದಾರೆ. ಸಕ್ಕರೆ, ಕಾರ್ ಸೇರಿ ಇತರೆ ವಸ್ತುಗಳಿಗೆ ಶೇ.12 ರಷ್ಟು ಜಿಎಸ್‌ಟಿ ಹೇರಿದ್ದಾರೆ. ಇದರ ವಿರುದ್ಧ ಬಿಜೆಪಿಗರು ಮಾತ ನಾಡುವುದಿಲ್ಲ. ಬರೀ ಬಸ್ ದರದ ಕುರಿತು ವಿರೋಧ ವ್ಯಕ್ತಪಡಿಸಿದರೆ ಹೇಗೆ ಎಂದು ಪ್ರಶ್ನಿಸಿದರು.
ಸಿಎಂ ಸಿದ್ದರಾಮಯ್ಯಗೆ ಮುಂದಿನ 6 ತಿಂಗಳೇ ನಿರ್ಣಾಯಕ, ಏನಿದು ನಾಯಕತ್ವ ಬದಲಾವಣೆ ಕೌಂಟರ್
ಡಿಸಿಎಂ ಡಿಕೆಶಿ ಅವರನ್ನು ಬಿಟ್ಟು ರಹಸ್ಯ ಸಭೆಯನ್ನು ಮಾಡಿಲ್ಲ. ಅದು ರಹಸ್ಯ ಸಭೆಯಲ್ಲ, ಎಲ್ಲರೂ ಕೂಡಿಯೇ ಸಭೆ ಮಾಡಿದ್ದು, ಅದು ಊಟದ ಸಭೆಯಾಗಿತ್ತು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯಂತಹ ಚರ್ಚೆಗಳ್ಯಾವು ನಡೆಸಿಲ್ಲ, ಸಚಿವ ಸಂಪುಟದ ವಿಸ್ತರಣೆಯೂ ಇಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿಗಳು ಇದ್ದು ಅವರನ್ನು ಬದಲಾಯಿಸುವ ಅವಶ್ಯಕತೆ ಬರಲ್ಲ. ಈ ಅವಧಿಗೆ ನಾನು, ಸಿಎಂ ಆಗುವುದಿಲ್ಲ, ಮುಂದಿನ ಅವಧಿಗೆ ನಾನು ಸಿಎಂ ಅಂತ ಹೇಳಿದ್ದು, 2028 ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಹೇಳಿದರು.