Hubballi BJP Meeting: ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳ ಹತ್ಯೆ: ಅರುಣ್ ಸಿಂಗ್

By Suvarna News  |  First Published Dec 29, 2021, 12:33 PM IST

*  ಸಿದ್ದು- ಡಿಕೆಶಿ ತಿರುಕನ ಕನಸು ಕಾಣೋದು ಬೇಡ
*  ಕೇಂದ್ರ ಸರ್ಕಾರದ ವಿವಿಧ ಸಾಧನೆಗಳಿಗೆ ಅಭಿನಂದನಾ ನಿರ್ಣಯ
* ಬಿಜೆಪಿ ವರಿಷ್ಠರು ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರಿಗೆ ಧನ್ಯವಾದ 
 


ಹುಬ್ಬಳ್ಳಿ(ಡಿ.29): ನಮ್ಮ ಸರ್ಕಾರದ(BJP Government) ಮೇಲೆ ವಿಶ್ವಾಸವಿಟ್ಟು ನಿರ್ಣಯ ಕೈಗೊಂಡ ಕಾರ್ಯಕಾರಿಣಿ ಸಮಿತಿ ಸದಸ್ಯರಿಗೆ ಧನ್ಯವಾದಗಳು. ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮುನ್ನಡೆಯಿರಿ ಎಂದು ಬೆನ್ನು ತಟ್ಟಿದ್ದಾರೆ. ಬಿಜೆಪಿ ವರಿಷ್ಠರು ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರಿಗೆ ಧನ್ಯವಾದಗಳನ್ನ ತಿಳಿಸುತ್ತೇನೆ. ಪಕ್ಷ ಬಲಿಷ್ಠವಾಗಬೇಕೆಂಬ ಅವರ ನಿರೀಕ್ಷೆಯನ್ನು ಹುಸಿಗೊಳಿಸಲ್ಲ. ಮುಂಬರುವ ಚುನಾವಣೆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋಗಬೇಕೆಂಬ ಅವರ ನಿರೀಕ್ಷೆಯನ್ನು ಸಾಕಾರ ಮಾಡ್ತೇವೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.

Tap to resize

Latest Videos

ಇಂದು(ಬುಧವಾರ) ನಗರದಲ್ಲಿ ನಡೆಯುತ್ತಿರುವ ಬಿಜೆಪಿ(BJP) ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಸಚಿವ ಸಂಪುಟ ವಿಸ್ತರಣೆ(Cabinet Expansion) ಬಗ್ಗೆ ಚರ್ಚೆಯಾಗಿಲ್ಲ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್(Arun Singh) ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್(Nalin Kumar Kateel) ನೇತೃತ್ವದಲ್ಲಿ ಕಾರ್ಯಕಾರಿಣಿ ಯಶಸ್ವಿಯಾಗಿ ನಡೆಯುತ್ತಿದೆ ಅಂತ ತಿಳಿಸಿದ್ದಾರೆ. 

BJP Meeting: ಬಿಜೆಪಿ ಕಾರ್ಯಕಾರಣಿ ಸಭೆ ಮಾಹಿತಿ ಬಿಚ್ಚಿಟ್ಟ ಯತ್ನಾಳ್, ಬೊಮ್ಮಾಯಿ ಸೇಫ್...!

ಶಾಸಕ ಅರವಿಂದ ಬೆಲ್ಲದ ಮಹಾನಗರ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರೋ ವಿಚಾರ ನನಗೆ ಗೊತ್ತಿಲ್ಲ. ಅವರು ಸಿಕ್ಕ ಕೂಡಲೇ ಅದರ ಬಗ್ಗೆ ವಿಚಾರಿಸುತ್ತೇನೆ. ವರಿಷ್ಠರಿಗೆ ಇರೋ ಸ್ಪಷ್ಟತೆಯನ್ನು ಅರುಣ್ ಸಿಂಗ್ ಅವರು ಕಾರ್ಯಕಾರಿಣಿಯಲ್ಲಿ ವ್ಯಕ್ತಪಡಿಸಿದ್ದಾರೆ. ಮೊದಲಿನಿಂದಲೂ ನನ್ನ ಮೇಲೆ ವರಿಷ್ಠರಿಗೆ ವಿಶ್ವಾಸವಿದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ರಮೇಶ್ ಜಾರಕಿಹೊಳಿ(Ramesh Jarkiholi) ದೆಹಲಿ ಪ್ರವಾಸ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಯಾರು ಎಲ್ಲಿಗೆ ಬೇಕಾದ್ರೂ ಹೋಗೋ ಸ್ವಾತಂತ್ರ್ಯವಿದೆ ಎಂದಷ್ಟೇ ಹೇಳಿದ್ದಾರೆ. 

ಸಿದ್ದರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು

ಈ ಹಿಂದೆ ಸಿದ್ದರಾಮಯ್ಯ(Siddaramaiah) ಸರ್ಕಾರ ಇದ್ದಾಗ ಹಿಂದೂಗಳ(Hindu) ಹತ್ಯೆಯಾಗುತ್ತಿತ್ತು. ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹೀಗಾಗಿ ಕಾಂಗ್ರೆಸ್(Congress) ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ. ಕಾಂಗ್ರೆಸ್‌ನಲ್ಲಿ ಒಳಜಗಳು ನಡೆಯುತ್ತಿವೆ. ಬಿಜೆಪಿ ಮೇಲೆ ಇಲ್ಲ ಸಲ್ಲದ ಆರೋಪಗಳನ್ನ ಕಾಂಗ್ರೆಸ್ ಮಾಡುತ್ತಿದೆ. ನಾವು ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರ(Narendra Modi) ನೇತೃತ್ವದಲ್ಲಿ ಮುನ್ನಡೆಯುತ್ತೇವೆ. ಅವರ ಸಾಧನೆ ಸೇರಿದಂತೆ ಮೋದಿಯವರ ಮಾರ್ಗದರ್ಶನದಲ್ಲಿ ಚುನಾವಣೆ(Election) ಎದುರಿಸಲಿದ್ದೇವೆ. ರಾಜ್ಯದಲ್ಲಿ 150 ಕ್ಕೂ ಅಧಿಕ ಸ್ಥಾನಗಳನ್ನ ಗೆಲ್ಲುವ ಸಂಕಲ್ಪವನ್ನ ಮಾಡಿದ್ದೇವೆ. ಚುನಾವಣೆಗೆ ನಾವೆಲ್ಲರೂ ಸನ್ನದ್ಧರಾಗಿದ್ದೇವೆ ಅಂತ ಸ್ಪಷ್ಟಪಡಿಸಿದ್ದಾರೆ. 

Congress Padayatra: ಮೇಕೆದಾಟು ರ‍್ಯಾಲಿಗೆ ಬಂದವರಿಗೆ ಕಾಂಗ್ರೆಸ್ಸಿಂದ ಪ್ರಮಾಣಪತ್ರ: ಡಿಕೆಶಿ

ಸಿದ್ದು- ಡಿಕೆಶಿ ತಿರುಕನ ಕನಸು ಕಾಣೋದು ಬೇಡ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯಿದೆ(Anti Conversion Bill) ವಾಪಾಸ್ ತೆಗೆದುಕೊಳ್ಳೋದಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ(DK Shivakumar) ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಸಚಿವ ಆರ್.ಅಶೋಕ್(R Ashok), ಸಿದ್ದರಾಮಯ್ಯ ಹಾಗೂ ಡಿಕೆಶಿ ಅಧಿಕಾರಕ್ಕೆ ಬರುತ್ತೇವೆ ಎಂಬ ತಿರುಕನ ಕನಸು ಕಾಣೋದು ಬೇಡ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರೋದಿಲ್ಲ. ಕಾಂಗ್ರೆಸ್ ಈಗಾಗಲೇ ಧೂಳಿಪಟ ಆಗೋಗಿದೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ದಿನ ಬಾವುಟವೇ ಬಿದ್ದೋಗಿದೆ. ಕಾಂಗ್ರೆಸ್ ಈಗ ಬಿದ್ದೋಗಿರುವ ಬಾವುಟವಾಗಿದೆ. ಕಾಂಗ್ರೆಸ್‌ನದ್ದು ಹಾರದೇ ಇರೋ ಬಾವುಟವಾಗಿದೆ. ದಲಿತರು ಹಾಗೂ ಹಿಂದೂಗಳು ಮತಾಂತರ ಆಗಲಿ ಅನ್ನೋದಾದರೆ ಜನಾನೇ ಇವರಿಗೆ ಪಾಠ ಕಲಿಸುತ್ತಾರೆ. ಹಿಂದೆ ಲಿಂಗಾಯತ ವೀರಶೈವ ಅಂತ ಧರ್ಮ ಒಡೆಯಲು ಹೋಗಿ ಕಾಂಗ್ರೆಸ್ ಚುನಾವಣೆಯಲ್ಲಿ ಸೋಲಬೇಕಾಯಿತು ಅಂತ ಕಾಂಗ್ರೆಸ್‌ ವಿರುದ್ಧ ವೇವಡಿ ಮಾಡಿದ್ದಾರೆ. 

ಕೇಂದ್ರ ಸರ್ಕಾರದ ವಿವಿಧ ಸಾಧನೆಗಳಿಗೆ ಅಭಿನಂದನಾ ನಿರ್ಣಯ

ಬಿಜೆಪಿ ರಾಜ್ಯ ಕಾರ್ಯಕಾರಣಿಯ ಎರಡನೆಯ ದಿನದ ಕಾರ್ಯಕ್ರಮದಲ್ಲಿ ದಿವ್ಯ ಕಾಶಿ- ಭವ್ಯ ಕಾಶಿ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸಾಧನೆಗಳಿಗೆ ಅಭಿನಂದನಾ ನಿರ್ಣಯ ಕೈಗೊಂಡಿದೆ.

ದಿವ್ಯ ಕಾಶಿ- ಭವ್ಯ ಕಾಶಿ, ಪೆಟ್ರೋಲ್- ಡೀಸೆಲ್ ಬೆಲೆ ಇಳಿಸಿದಕ್ಕೆ, ದಾಖಲೆ ಪ್ರಮಾಣದಲ್ಲಿ ಕೊರೋನಾ ಲಸಿಕೆ ನೀಡಿ ಭಾರತವನ್ನು ವಿಶ್ವ ಗುರುವಾಗಿಸಿದ್ದಕ್ಕೆ, ಜಾಗತಿಕ ಮಟ್ಟದಲ್ಲಿ ಯುದ್ಧ ಸಾಮಗ್ರಿಗಳ ರಫ್ತು ವಹಿವಾಟು ಮಾಡಿದ್ದಕ್ಕೆ ಬಿಜೆಪಿ ಕಾರ್ಯಕಾರಣಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.
 

click me!