ಸಿಂದಗಿ, ಹಾನಗಲ್‌ ಉಪಸಮರ ಇಂದು : ನ.2ರಂದು ಮತ ಎಣಿಕೆ, ಫಲಿತಾಂಶ

Kannadaprabha News   | Asianet News
Published : Oct 30, 2021, 06:17 AM ISTUpdated : Oct 30, 2021, 06:32 AM IST
ಸಿಂದಗಿ, ಹಾನಗಲ್‌ ಉಪಸಮರ ಇಂದು :  ನ.2ರಂದು ಮತ ಎಣಿಕೆ, ಫಲಿತಾಂಶ

ಸಾರಾಂಶ

 ಸಿಂದಗಿ ಮತ್ತು ಹಾನಗಲ್‌ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ  ಮತದಾನ ಇಂದು ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ನಡೆಯಲಿದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

 ಸಿಂದಗಿ/ಹಾನಗಲ್‌  (ಅ.30):  ಸಿಂದಗಿ (sindagi) ಮತ್ತು ಹಾನಗಲ್‌ (Hanagal) ವಿಧಾನಸಭೆ (Assemblu election) ಕ್ಷೇತ್ರಗಳಿಗೆ ಉಪ ಚುನಾವಣೆಯ ಮತದಾನ ಇಂದು ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ನಡೆಯಲಿದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎರಡೂ ಕ್ಷೇತ್ರಗಳಲ್ಲಿ ನ.2ರಂದು ಮತಎಣಿಕೆ (Counting) ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ (Result) ಪ್ರಕಟವಾಗಲಿದೆ.

ಜೆಡಿಎಸ್‌ (JDS) ಮಾಜಿ ಸಚಿವ ಎಂ.ಸಿ.ಮನಗೂಳಿ ಅವರ ನಿಧನದಿಂದಾಗಿ ಸಿಂದಗಿಯಲ್ಲಿ ಉಪಚುನಾವಣೆ ನಡೆಯುತ್ತಿದೆ. ಸಿಂದಗಿಯಲ್ಲಿ ಕಾಂಗ್ರೆಸ್‌ನಿಂದ ಮನಗೂಳಿ ಪುತ್ರ ಅಶೋಕ ಮನಗೂಳಿ (ashok Manuguli), ಬಿಜೆಪಿಯಿಂದ (BJP) ರಮೇಶ್‌ ಭೂಸನೂರ (Ramesh Bhusanur), ಜೆಡಿಎಸ್‌ನಿಂದ ನಾಜಿಯಾ ಅಂಗಡಿ ಸೇರಿದಂತೆ 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಕ್ಕಾ : ಉಪ ಚುನಾವಣೆ ಬಗ್ಗೆ ವಿಶ್ವಾಸ

ಒಟ್ಟು 2,34,584 ಮತದಾರರು ಮತ ಚಲಾಯಿಸಲಿದ್ದಾರೆ. ಈ ಪೈಕಿ ಪುರುಷರು 1,20,844, ಮಹಿಳೆಯರು (woman) 1,13,561 ಹಾಗೂ ಇತರೆ 32 ಮತದಾರರು ಮತ ಚಲಾಯಿಸಲಿದ್ದಾರೆ. ಕ್ಷೇತ್ರದ ಎರಡು ಕಡೆ ಸಖಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 892 ಮತದಾರರು 80 ವರ್ಷಕ್ಕಿಂತ ಮೇಲ್ಪಟ್ಟವರು ಇದ್ದಾರೆ. 402 ಅಂಗವಿಕಲ (handicapts) ಮತದಾರರು ಇದ್ದಾರೆ. ಒಟ್ಟು 297 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು 1,308 ಸಿಬ್ಬಂದಿಯನ್ನು ಚುನಾವಣೆ (election) ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ.

ಇನ್ನು ಎಂ.ಸಿ.ಉದಾಸಿ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತಿರುವ ಹಾನಗಲ್‌ನಲ್ಲಿ (Hanagal) ಬಿಜೆಪಿಯಿಂದ ಶಿವರಾಜ ಸಜ್ಜನರ, ಕಾಂಗ್ರೆಸ್‌ನಿಂದ ಶ್ರೀನಿವಾಸ ಮಾನೆ, ಬಿಜೆಪಿಯಿಂದ ನಿಯಾಜ್‌ ಶೇಖ್‌ ಸೇರಿ 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕ್ಷೇತ್ರದಲ್ಲಿ 1,05,525 ಪುರುಷ ಹಾಗೂ 98,953 ಮಹಿಳೆ ಹಾಗೂ ಮೂರು ಜನ ಇತರ ಮತದಾರರು ಸೇರಿದಂತೆ 2,04,481 ಮತದಾರರಿದ್ದಾರೆ. 83 ಸೇವಾ ಮತದಾರರಿದ್ದಾರೆ. ಅಂಚೆ ಮತಪತ್ರಗಳಲ್ಲಿ ಮತ ಚಲಾಯಿಸದ ಅಂಗವಿಕಲರಿಗೆ ಮತಗಟ್ಟೆಗಳಿಗೆ ತೆರಳಲು ವಾಹನ ಸೌಕರ್ಯ ಕಲ್ಪಿಸಲಾಗಿದೆ. ಒಂದು ಅಂಗವಿಕಲಸ್ನೇಹಿ ಮತಗಟ್ಟೆಹಾಗೂ ಎರಡು ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 263 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು 1155 ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಪ್ರಚಾರ ಅಬ್ಬರದಿ ಕೊನೆ

 

 ಕುತೂಹಲಕ್ಕೆ ಕಾರಣವಾಗಿರುವ ಹಾಗೂ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಸಾಕ್ಷಿಯಾಗಿರುವ ಸಿಂದಗಿ ಮತ್ತು ಹಾನಗಲ್‌ ಉಪ ಚುನಾವಣೆಯ (Hanagal By Election) ಅಬ್ಬರದ ಪ್ರಚಾರಕ್ಕೆ ಬುಧವಾರ ಸಂಜೆ ತೆರೆಬಿದ್ದಿದೆ. ಚುನಾವಣಾ ಆಯೋಗದ (Election Commission) ಮಾರ್ಗಸೂಚಿಯಂತೆ ಮತದಾನಕ್ಕಿಂತ 72 ಗಂಟೆ ಪೂರ್ವದಲ್ಲೇ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಇನ್ನೆರಡು ದಿನ ಕೇವಲ ಮನೆ ಮನೆ ಪ್ರಚಾರಕ್ಕಷ್ಟೇ ಅವಕಾಶ ಇದ್ದು, ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಕೊನೇಕ್ಷಣದ ಕಸರತ್ತು ನಡೆಸಲಿದ್ದಾರೆ. ಎರಡೂ ಕ್ಷೇತ್ರಗಳಿಗೆ ಅ.30ರಂದು ಮತದಾನ ನಡೆಯಲಿದ್ದು, ನ.2ರಂದು ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿಯ ಸಿ.ಎಂ.ಉದಾಸಿ (CM Udasi) ನಿಧನದಿಂದ ಹಾವೇರಿ ಜಿಲ್ಲೆಯ ಹಾನಗಲ್‌ ಹಾಗೂ ಜೆಡಿಎಸ್‌ನ ಎಂ.ಸಿ.ಮನಗೂಳಿ ಅವರ ನಿಧನದಿಂದ ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರ ತೆರವಾಗಿದ್ದು, ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೂರೂ ಪಕ್ಷಗಳು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಮುಖ್ಯಮಂತ್ರಿಯಾದಿಯಾಗಿ ಆಡಳಿತಾರೂಢ ಪಕ್ಷದ ಪ್ರಮುಖ ಸಚಿವರು ಹಲವು ದಿನಗಳಿಂದ ಕ್ಷೇತ್ರದಲ್ಲೇ ಬೀಡುಬಿಟ್ಟು ಚುನಾವಣಾ ತಂತ್ರಗಾರಿಕೆ ಹೆಣೆದಿದ್ದಾರೆ. ಅವರಿಗೆ ಪೈಪೋಟಿ ನೀಡಲು ಪ್ರತಿಪಕ್ಷಗಳ ಪ್ರಮುಖ ನಾಯಕರೂ ಪ್ರತಿತಂತ್ರ ರೂಪಿಸಿದ್ದಾರೆ. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮುಖ್ಯಮಂತ್ರಿ ಎರಡೂ ಕ್ಷೇತ್ರಗಳಲ್ಲಿ ಸುತ್ತಾಡಿದರೆ, ಇವರಿಗೆ ಸ್ಪರ್ಧೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಭೆ, ಸಮಾವೇಶ, ರೋಡ್‌ ಶೋ ನಡೆಸಿದ್ದಾರೆ. ಇನ್ನು ಜೆಡಿಎಸ್‌ ಮುಖಂಡರಾದ ಎಚ್‌.ಡಿ.ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಹಲವು ದಿನ ಸ್ಥಳದಲ್ಲೇ ಉಳಿದು ಮನೆ-ಮನ ತಲುಪುವ ಪ್ರಯತ್ನ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ