ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಿದ ಕೆಲಸ ಡಬಲ್ ಎಂಜಿನ್ ಸರ್ಕಾರ ಮಾಡುತ್ತಿಲ್ಲ. ಹೀಗಾಗಿ ಈ ಬಗ್ಗೆ ಜನರಿಗೆ ತಿಳಿವು ಮೂಡಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶಕ್ತಿಮೀರಿ ಶ್ರಮಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ತುಮಕೂರು (ಜೂ.27): ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಿದ ಕೆಲಸ ಡಬಲ್ ಎಂಜಿನ್ ಸರ್ಕಾರ ಮಾಡುತ್ತಿಲ್ಲ. ಹೀಗಾಗಿ ಈ ಬಗ್ಗೆ ಜನರಿಗೆ ತಿಳಿವು ಮೂಡಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶಕ್ತಿಮೀರಿ ಶ್ರಮಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ನಗರದಲ್ಲಿ ಭಾನುವಾರ ನಡೆದ ಕಾಂಗ್ರೆಸ್, ನವಸಂಕಲ್ಪ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ ರೈತರು ಬೆಳೆದ ಹಣ್ಣು, ತರಕಾರಿ, ಹಾಲಿನ ದರ ಮಾತ್ರ ಏರಿಕೆ ಮಾಡುತ್ತಿಲ್ಲ.
ಕೇಂದ್ರ ಸರ್ಕಾರ ಅಗ್ನಿಪಥ್ ಮೂಲಕ ದೇಶದ ಯುವ ಜನರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಕೊಟ್ಟಮಾತಿನಂತೆ ಕೆಲಸ ಮಾಡಲಿಲ್ಲ, ಎರಡು ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ. ಇವುಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಹೇಳಿದರು. ತುಮಕೂರು ಜಿಲ್ಲೆಯನ್ನು ಗೆದ್ದರೆ, ಇಡೀ ರಾಜ್ಯವನ್ನು ಗೆದ್ದಂತೆ ಎನ್ನುವ ಮಾತಿದೆ. ಜಿಲ್ಲೆಯಲ್ಲಿ ಎರಡಂಕಿಯ ಶಾಸಕರನ್ನು ಹೊಂದಬೇಕು. ಬಿಜೆಪಿ, ಜೆಡಿಎಸ್ ಸರ್ಕಾರದ ಆಡಳಿತವನ್ನು ಜಿಲ್ಲೆಯ ಜನರು ನೋಡಿದ್ದಾರೆ. ಸಮರ್ಥ ಆಡಳಿತ ನೀಡಿರುವ ಕಾಂಗ್ರೆಸ್ ಯೋಜನೆ ಬಗ್ಗೆ ಮನೆ-ಮನೆಗೆ ತಿಳಿಸಬೇಕೆಂದರು.
ಬಚ್ಚೇಗೌಡರಿಗೆ ಗಾಳ ಹಾಕಿದ್ರೆ ಮರಿ ಮೀನು ಶರತ್ ಗಾಳಕ್ಕೆ ಸಿಕ್ರು: ಡಿಕೆಶಿ
78 ಲಕ್ಷ ಕಾರ್ಯಕರ್ತರ ನೋಂದಣಿ: ರಾಜ್ಯದಲ್ಲಿ 78 ಲಕ್ಷ ಕಾಂಗ್ರೆಸ್ ಕಾರ್ಯಕರ್ತರಿದ್ದು, ಇಡೀ ದೇಶದಲ್ಲೇ ಅತಿ ಹೆಚ್ಚು ಸದಸ್ಯತ್ವ ನೊಂದಣಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಸ್ಯತ್ವ ನೊಂದಣಿಯಿಂದ ಪಕ್ಷ ತಳಮಟ್ಟವನ್ನು ತಲುಪುವಲ್ಲಿ ಯಶಸ್ವಿಯಾಗಿದೆ. ಪ್ರತಿಯೊಂದು ಬೂತ್ ಮಟ್ಟದಲ್ಲಿ ನೈಜ ಸಮಿತಿಯನ್ನು ರಚಿಸಲಾಗುವುದು. ಪ್ರತಿಯೊಂದು ಗ್ರಾಪಂನಲ್ಲಿ ಕುಳಿತು ಕೆಲಸ ಮಾಡಬೇಕು. ಶಾಸಕರು, ಮಾಜಿ ಶಾಸಕರ ಮನೆಯಲ್ಲಿ ಕುಳಿತು ಕೆಲಸ ಮಾಡುವವರ ಸಮಿತಿಯ ಅವಶ್ಯಕತೆ ಇಲ್ಲ. ಯುವಕರು ಮತ್ತು ಮಹಿಳೆಯರನ್ನು ಪಕ್ಷದ ಕಡೆ ಸೆಳೆಯುವ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸಿದ್ದು, ನಿರುದ್ಯೋಗಿಗಳು ಮತ್ತು ಮಹಿಳೆಯರ ಪ್ರತ್ಯೇಕ ಸಮ್ಮೇಳನವನ್ನು ನಡೆಸಬೇಕು ಎಂದರು.
ದ್ವೇಷದ ಕೇಸಿಂದ ಕಾಂಗ್ರೆಸ್ ಧ್ವನಿ ಅಡಗಿಸಲು ಅಸಾಧ್ಯ: ಡಿಕೆಶಿ
ದಲಿತ ಸಿಎಂ ಕೂಗು ತಪ್ಪೇನಿಲ್ಲ: ದಲಿತ ಸಿಎಂ ಕೂಗು ತಪ್ಪೇನಿಲ್ಲ. ಪಕ್ಷಕ್ಕೆ ಏನೆಲ್ಲ ಅನುಕೂಲ ಆಗುತ್ತದೆಯೋ ಅದು ಚರ್ಚೆ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು. ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದಲಿತ ಸಿಎಂ ಏಕೆ ಆಗಬಾರದು ಎಂದು ಪ್ರಶ್ನಿಸಿದರು. ಇದೇವೇಳೆ ಪಠ್ಯಪುಸ್ತಕ ಹರಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ವೇದಿಕೆಯಲ್ಲಿ ಸ್ವಾಮೀಜಿಗಳು ಇದ್ದುದ್ದರಿಂದ ಪಠ್ಯ ಪುಸ್ತಕ ಪ್ರತಿ ಹರಿದು ಹಾಕಿದೆ. ಇಲ್ಲದಿದ್ದರೆ ಸುಟ್ಟು ಹಾಕುತ್ತಿದೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.