ಜ.9ಕ್ಕೆ ಮತ್ತೆ ಕೋಲಾರಕ್ಕೆ ಸಿದ್ದರಾಮಯ್ಯ ಭೇಟಿ: ಸ್ಪರ್ಧೆ ಬಗ್ಗೆ ಘೋಷಣೆ?

By Govindaraj S  |  First Published Dec 22, 2022, 12:59 PM IST

ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಮುಂದುವರೆಸಿರುವ ಕೋಲಾರ ಕೈ ನಾಯಕರು ಬುಧವಾರ ಮತ್ತೊಮ್ಮೆ ಸುವರ್ಣಸೌಧದಲ್ಲಿ ಕೋಲಾರಕ್ಕೆ ಬರುವಂತೆ ಒತ್ತಾಯಿಸಿದ್ದಾರೆ.


ಬೆಳಗಾವಿ (ಡಿ.22): ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಮುಂದುವರೆಸಿರುವ ಕೋಲಾರ ಕೈ ನಾಯಕರು ಬುಧವಾರ ಮತ್ತೊಮ್ಮೆ ಸುವರ್ಣಸೌಧದಲ್ಲಿ ಕೋಲಾರಕ್ಕೆ ಬರುವಂತೆ ಒತ್ತಾಯಿಸಿದ್ದಾರೆ. ಪರಿಣಾಮ ಜ.9ರಂದು ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡಲಿದ್ದು, ಸ್ಪರ್ಧೆ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಲಿದ್ದಾರೋ ಅಥವಾ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿ ಬೇರೊಬ್ಬ ಅಭ್ಯರ್ಥಿಯ ಹೆಸರು ಘೋಷಿಸಲಿದ್ದಾರೋ ಎಂಬುದು ಕುತೂಹಲ ಕೆರಳಿಸಿದೆ. ಬುಧವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕೆ.ಆರ್‌. ರಮೇಶ್‌ ಕುಮಾರ್‌, ಕೃಷ್ಣಬೈರೇಗೌಡ, ನಂಜೇಗೌಡ, ಸುನಿಲ್‌ ಕುಮಾರ್‌ ಸೇರಿದಂತೆ ಹಲವು ನಾಯಕರು ಕೋಲಾರದಿಂದಲೇ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ. ನೀವು ಸ್ಪರ್ಧಿಸದಿದ್ದರೆ ನಾವೂ ಸ್ಪರ್ಧಿಸುವುದಿಲ್ಲ ಎಂದು ಬ್ಲ್ಯಾಕ್‌ ಮೇಲ್‌ ಮಾಡುವ ಮೂಲಕ ಪ್ರೀತಿ ಪೂರ್ವಕ ಒತ್ತಾಯ ಮಾಡಿದರು ಎಂದು ತಿಳಿದು ಬಂದಿದೆ. 

Tap to resize

Latest Videos

ಕ್ಷೇತ್ರ ಹುಡುಕಾಟ ಸಿದ್ದುಗೆ ಅನಿವಾರ್ಯವೇ?: ಮಾಜಿ ಎಂಎಲ್ಸಿ ರಮೇಶ್‌ ಬಾಬು

ಇತ್ತೀಚೆಗೆ ಕೋಲಾರಕ್ಕೆ ಭೇಟಿ ನೀಡಿ ಸರ್ವಧರ್ಮ ಪ್ರಾರ್ಥನಾ ಮಂದಿರಗಳಿಗೆ ಭೇಟಿ ನೀಡಿದ್ದರು. ಬಳಿಕ ಮಾತನಾಡಿದ್ದ ಅವರು, ಇದೇ ಸಂದರ್ಭದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಪ್ರಯತ್ನಿಸಬೇಕು. ಮತ್ತೊಮ್ಮೆ ನಾಮಿನೇಷನ್‌ ಮಾಡಲು ಬರುತ್ತೇನೆ ಎಂದು ಹೇಳಿ ಕುತೂಹಲ ಮೂಡಿಸಿದ್ದರು. ಇದೀಗ ಜ.9 ರಂದು ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡುತ್ತಿರುವುದು ಮತ್ತಷ್ಟುಕುತೂಹಲ ಕೆರಳಿಸಿದೆ. ಕುತೂಹಲಕಾರಿ ಸಂಗತಿಯೆಂದರೆ ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕೂಡ ಭಾಗವಹಿಸಿದ್ದರು.

ಹಣೆಗೆ ತಿಲಕ ಇಟ್ಟುಕೊಂಡ ಸಿದ್ದರಾಮಯ್ಯ: ತಿಲಕ ಕಂಡರೆ ಭಯವಾಗುತ್ತದೆ ಎಂದು ಹಣೆಗೆ ತಿಲಕ ಅಥವಾ ಕುಂಕುಮ ಇಟ್ಟುಕೊಳ್ಳಲು ಹಿಂದೇಟು ಹಾಕುತ್ತಿದ್ದ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇತಿಹಾಸ ಪ್ರಸಿದ್ಧ ಮಳೆಕರ್ಣ ದೇವಾಲಯಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ಮಾತ್ರವಲ್ಲ, ಹಣೆಗೆ ಕುಂಕುಮ ತಿಲಕವನ್ನು ಕೂಡ ಇಟ್ಟುಕೊಂಡರು.

Bus Yatra: ಜ.11ಕ್ಕೆ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ಬಸ್‌ ಯಾತ್ರೆ

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇತಿಹಾಸ ಪ್ರಸಿದ್ಧ ಶ್ರೀ ಮಳೆಕರ್ಣ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ, ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ ಅವರು ನಂತರ ಹಣೆಗೆ ತಿಲಕ ಇಟ್ಟುಕೊಂಡರು. ಡಿ.ಕೆ.ಶಿವಕುಮಾರ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ್‌ ಹಟ್ಟಿಹೊಳಿ ಸೇರಿದಂತೆ ಇತರರು ಇದ್ದರು.

click me!