ಯಾದಗಿರಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಾ.ಭೀಮಣ್ಣ ಮೇಟಿಯಿಂದ ಗಿಫ್ಟ್ ಪಾಲಿಟಿಕ್ಸ್!

Published : Feb 12, 2023, 09:08 AM ISTUpdated : Feb 12, 2023, 09:50 AM IST
ಯಾದಗಿರಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಾ.ಭೀಮಣ್ಣ ಮೇಟಿಯಿಂದ  ಗಿಫ್ಟ್ ಪಾಲಿಟಿಕ್ಸ್!

ಸಾರಾಂಶ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜಿಲ್ಲೆಯಲ್ಲಿ ಮತದಾರರನ್ನು ಸೆಳೆಯಲು ಟಿಕೆಟ್ ಆಕಾಂಕ್ಷಿಗಳು ಗಿಫ್ಟ್ ಪಾಲಿಟಿಕ್ಸ್ ಶುರು ಮಾಡಿದ್ದಾರೆ.

ಯಾದಗಿರಿ (ಫೆ.12) : ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜಿಲ್ಲೆಯಲ್ಲಿ ಮತದಾರರನ್ನು ಸೆಳೆಯಲು ಟಿಕೆಟ್ ಆಕಾಂಕ್ಷಿಗಳು ಗಿಫ್ಟ್ ಪಾಲಿಟಿಕ್ಸ್ ಶುರು ಮಾಡಿದ್ದಾರೆ.

ಕಾಂಗ್ರೆಸ್(Congress) ಟಿಕೆಟ್ ಆಕಾಂಕ್ಷಿ ಡಾ.ಭೀಮಣ್ಣ ಮೇಟಿ(Dr.Bhimanna Meti) ಅವರಿಂದ ಗಿಫ್ಟ್ ಪಾಲಿಟಿಕ್ಸ್(Gift politics)ಭರ್ಜರಿಯಾಗಿ ನಡೆದಿದೆ. ಈ ಬಾರಿ ಟಿಕೆಟ್ ಸಿಕ್ಕರೆ ಗೆಲ್ಲಲು ಪಣ ತೊಟ್ಟಿರುವ ಡಾ.ಭೀಮಣ್ಣ ಅದಕ್ಕಾಗಿ ಈಗಿನಿಂದಲೇ ಮತದಾರರನ್ನು ತನ್ನತ್ತ ಸೆಳೆದುಕೊಳ್ಳಲು ಗಿಫ್ಟ್ ಕೊಡುವ ಮೂಲಕ ಕಸರತ್ತು ನಡೆಸಿದ್ದಾರೆ.

 

Yadgir: ಸುರಪುರದಲ್ಲಿ ಕಾಂಗ್ರೆಸ್‌ ಗೆಲ್ಲೋದು ಖಚಿತ: ಪ್ರಿಯಾಂಕ್‌ ಖರ್ಗೆ

ಡಾ.ಭೀಮಣ್ಣ ಫೌಂಡೇಶನ್(Dr. Bhimanna Foundation) ವತಿಯಿಂದ ಯಾದಗಿರಿ ವಿಧಾನಸಭಾ ಕ್ಷೇತ್ರ(Yadagiri Assembly Constituency) ವ್ಯಾಪ್ತಿಯಲ್ಲಿ ಮತದಾರರಿಗೆ ಕಿಟ್‌ ವಿತರಣೆ ಮಾಡಲಾಗಿದೆ. ಅಪೌಷ್ಟಿಕ ನಿವಾರಣೆಗೆ ಆಹಾರ ಕಿಟ್ ವಿತರಣೆ ಎಂದು ಹೇಳಲಾಗುತ್ತಿದೆಯಾದರೂ ಇಲ್ಲಿ ಮುಂಬರುವ ಚುನಾವಣೆಗೆ ಡಾ.ಭೀಮಣ್ಣ ಮೇಟಿ ತಯಾರಿ ನಡೆಸುತ್ತಿರುವುದು ಎದ್ದು ಕಾಣುತ್ತಿದೆ.  

ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ:

ಡಾ.ಭೀಮಣ್ಣ ಫೌಂಡೇಶನ್ ಮೂಲಕ ಕಳೆದ ನಾಲ್ಕು ದಿನಗಳಿಂದ ಮನೆ ಮನೆಗಳಿಗೆ ಆಹಾರ ಕಿಟ್ ವಿತರಣೆ ಮಾಡುತ್ತಿದ್ದಾರೆ. ಅದರಲ್ಲೂ ಗರ್ಭಿಣಿಯರು, ಮಕ್ಕಳ ಇರುವ ಮನೆಗೆ  ಶೇಂಗಾ, ಬೆಲ್ಲ, ಹೆಸರು, ಗೋಧಿ ರವಾ ಇರುವ ಪೌಷ್ಟಿಕ ಆಹಾರ ಕೀಟ್ ವಿತರಣೆ ಮಾಡಲಾಗುತ್ತಿದೆ. ಈಗಾಗಲೇ ವಡಗೇರಾ, ಹಯ್ಯಾಳ, ದೋರನಹಳ್ಳಿ ಸೇರಿದಂತೆ ಮೊದಲಾದ ಕಡೆ ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಕಿಟ್ ವಿತರಣೆ ಮಾಡಲಾಗಿದೆ.

ಫೆ.10ರಂದು ಯಾದಗಿರಿಗೆ ಪ್ರಜಾಧ್ವನಿ ಯಾತ್ರೆ ಆಗಮನ: ಬಿಜೆಪಿಗೆ ಟಕ್ಕರ್ ನೀಡಲು ಕಾಂಗ್ರೆಸ್ 'ಸಿದ್ಧು' ಅಸ್ತ್ರ!

ಕಳೆದ ತಿಂಗಳು ಡಾ.ಭೀಮಣ್ಣ ಮೇಟಿ ಅವರಿಂದ ಆರೋಗ್ಯ ತಪಾಸಣೆ ಶಿಬಿರ, ಕೊವೀಡ್  ಸಂದರ್ಭದಲ್ಲಿ ಬಡಜನರಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿತ್ತು. ಇದೀಗ ಚುನಾವಣೆ ಸಮೀಪಿಸುತ್ತಿರುವುದರಿಂದ ಮತ್ತೊಮ್ಮೆ ಆಹಾರ ಕಿಟ್ ವಿತರಿಸುವ ಮೂಲಕ ಮತದಾರರನ್ನು ತನ್ನತ್ತ ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ ಎಂದೇ ಹೇಳಲಾಗುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!