ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ ಸಹೋದರಿ ಹಾಗೂ ಕೋಲಾರ ಜಿಲ್ಲಾ ಪಂಚಾಯತ್‌ನ ಕೆಡಿಪಿ ಸದಸ್ಯೆ ಗಗನ ಸುಕನ್ಯಾರವರು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಬೆಂಗಳೂರು (ಫೆ.05): ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ ಸಹೋದರಿ ಹಾಗೂ ಕೋಲಾರ ಜಿಲ್ಲಾ ಪಂಚಾಯತ್‌ನ ಕೆಡಿಪಿ ಸದಸ್ಯೆ ಗಗನ ಸುಕನ್ಯಾರವರು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, ಕೋಲಾರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೂ ಗಗನ ಸುಕನ್ಯಾರವರು ಜನರ ಕಷ್ಟಗಳಿಗೆ ನಿರಂತರವಾಗಿ ನೆರವಾಗುತ್ತಾ ಬಂದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ರೇಷನ್ ಕಿಟ್ ವಿತರಣೆ ನೀಡಿ ಬಡವರಿಗೆ ನೆರವಾಗಿದ್ದಾರೆ. ಕೆಜಿಎಫ್ ವಿಧಾನಸಭಾ ಕ್ಷೇತ್ರದ ನೂರಾರು ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳು, ಬ್ಯಾಗ್‌ಗಳು, ನೋಟ್ ಪುಸ್ತಕಗಳನ್ನು ವಿತರಿಸಿದ್ದಾರೆ. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಗಡಿ ಭಾಗದ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಪರಿಚಯಿಸಿದರು.
ಭಿನ್ನಾಭಿಪ್ರಾಯ ಇದೆ, ಅಸಮಾಧಾನ ಅಲ್ಲ: ಪರಮೇಶ್ವರ್ ಮೊದಲ ಬಹಿರಂಗ ಹೇಳಿಕೆ
ಅನುಭವಿ ನಾಯಕರ ಆಗಮನ ಬಲ ತಂದಿದೆ: ಗಗನ ಸುಕನ್ಯಾರವರು ಕೋಲಾರ ಜಿಲ್ಲಾ ಸಹಕಾರಿ ಒಕ್ಕೂಟದ ಚುನಾಯಿತ ನಿರ್ದೇಶಕರಾಗಿ, ಜಿಲ್ಲೆಯ ನೂರಾರು ಮಹಿಳೆಯರನ್ನು ಸಹಕಾರಿ ಕ್ಷೇತ್ರಕ್ಕೆ ಕರೆತಂದಿದ್ದಾರೆ. ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದ ಇವರು ಬಿಜೆಪಿಯ ರಾಜ್ಯ ಪರಿಶಿಷ್ಟ ಜಾತಿ ಘಟಕದ ಕಾರ್ಯದರ್ಶಿಯಾಗಿ ಐದು ವರ್ಷ ಸೇವೆ ಸಲ್ಲಿಸಿದ ಅನುಭವವನ್ನೂ ಹೊಂದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಕೆಇಆರ್‌ಸಿ, ಬೆಸ್ಕಾಂ, ಸಿಜಿಆರ್‌ಎಫ್ ಸಂಸ್ಥೆಗಳ ಗ್ರಾಹಕರ ಕುಂದುಕೊರತೆಗಳ ಪರಿಹಾರ ವೇದಿಕೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಅನುಭವಿ ನಾಯಕರು ಆಮ್ ಆದ್ಮಿ ಪಾರ್ಟಿ ಸೇರುತ್ತಿರುವುದು ಸಂತಸ ತಂದಿದೆ ಎಂದು ಪೃಥ್ವಿ ರೆಡ್ಡಿ ಹೇಳಿದರು.
ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಅಭಿವೃದ್ಧಿಗೆ ಸೀಮಿತ: ಪಕ್ಷ ಸೇರಿ ಮಾತನಾಡಿದ ಗಗನ ಸುಕನ್ಯಾ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ರಾಜಕಾರಣಿಗಳು ಗೆಲುವು ಸಾಧಿಸಿ ಅವರು ಮಾತ್ರ ಅಭಿವೃದ್ಧಿಯಾಗಿದ್ದಾರೆಯೇ ವಿನಃ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಿಲ್ಲ. ಕೋಲಾರ ಜಿಲ್ಲೆಯ ಜನಸಾಮಾನ್ಯರಿಗೆ ಗುಣಮಟ್ಟದ ಮೂಲ ಸೌಕರ್ಯಗಳು ದೊರೆಯಬೇಕು ಹಾಗೂ ಇಲ್ಲಿನ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಅಭಿವೃದ್ಧಿಯಾಗಬೇಕು. ಇವೆಲ್ಲ ಸಾಧ್ಯವಾಗಬೇಕೆಂದರೆ ಈ ಭಾಗದಲ್ಲಿ ಆಮ್ ಆದ್ಮಿ ಪಾರ್ಟಿ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆ ಗೆಲುವು ಸಾಧಿಸಿ, ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು. ಈ ಸಂಕಲ್ಪದೊಂದಿಗೆ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು. ಈ ವೇಳೆ ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, ಕೋಲಾರದ ಮಾಜಿ ಸಂಸದ ಹಾಗೂ ಎಎಪಿ ಮುಖಂಡ ಡಾ.ವೆಂಕಟೇಶ್, ಕೋಲಾರದ ಎಎಪಿ ಜಿಲ್ಲಾಧ್ಯಕ್ಷ ಸುರೇಶ್ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರದ ಎಎಪಿ ಸ್ಪರ್ಧಾಕಾಂಕ್ಷಿ ದಿಲ್ ನವಾಜ್ ಭಾಗವಹಿಸಿದ್ದರು.
ಬ್ರಾಹ್ಮಣ ಸಿಎಂ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಬ್ಯಾಟಿಂಗ್: ಕುಮಾರಸ್ವಾಮಿಗೆ ಸಿ.ಟಿ.ರವಿ ಟಾಂಗ್
ಟ್ರಾಫಿಕ್ ದಂಡ ಪಾವತಿ ಶೇ.50 ವಿನಾಯಿತಿ ಮೂರು ತಿಂಗಳಿಗೆ ವಿಸ್ತರಿಸಿ:
ಸಂಚಾರಿ ನಿಯಮ ಉಲ್ಲಂಘನೆಯ ದಂಡದ ಬಾಕಿ ಮೊತ್ತ ಪಾವತಿಯ ಶೇ. 50 ವಿನಾಯಿತಿಯ ಕಾಲಮಿತಿಯನ್ನು ಮೂರು ತಿಂಗಳು ವಿಸ್ತರಿಸಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್.ವಿ. ಸದಂ ಆಗ್ರಹಿಸಿದರು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ ಜಗದೀಶ್.ವಿ.ಸದಂ ಅವರು, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಶಿಫಾರಸಿನಂತೆ, ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ದಂಡವನ್ನು ಫೆಬ್ರವರಿ 11ರೊಳಗೆ ಪಾವತಿಸಿದಲ್ಲಿ ಶೇ. 50% ವಿನಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗೆ ವಿನಾಯಿತಿ ನೀಡುವ ಮೂಲಕ ವಾಹನಸವಾರರಿಗೆ ನೆರವಾಗುವುದು ಸ್ವಾಗತಾರ್ಹ. ಆದರೆ ಅತ್ಯಲ್ಪ ಅವಧಿಯ ಕಾಲಮಿತಿ ನಿಗದಿಪಡಿಸುವ ಮೂಲ ಕೇವಲ ಶ್ರೀಮಂತ ವಾಹನ ಸವಾರರಿಗೆ ಮಾತ್ರ ನೆರವಾಗಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಹೇಳಿದರು.
Assembly election: ಬಿಜೆಪಿಗೆ ಕರೆದಾಗ ಹೋಗದಿದ್ದರೆ ಹೊಡೆಯುವುದೇ ಗುಜರಾತ್ ಮಾಡೆಲ್: ಬ್ರಿಜೇಶ್ ಕಾಳಪ್ಪ ಆರೋಪ
ಒಂದು ವಾರದ ಗಡುವು ಬಡವರಿಗೆ ಸಂಕಷ್ಟ: ಕೇವಲ ಒಂದು ವಾರಗಳ ಸಮಯಾವಕಾಶ ನೀಡುವುದರಿಂದ ಬಡ ಮತ್ತು ಮಧ್ಯಮ ವರ್ಗದ ವಾಹನ ಸವಾರರಿಗೆ ಹಣ ಹೊಂದಿಸಲು ಕಷ್ಟವಾಗುತ್ತದೆ. ಅಲ್ಲದೇ, ಅನೇಕ ವಾಹನ ಸವಾರರು ತಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಸುವುದು ಸೇರಿದಂತೆ ನಾನಾ ರೀತಿಯ ಅಗತ್ಯ ಖರ್ಚುಗಳು ಈ ಸಮಯದಲ್ಲಿರುತ್ತದೆ. ವಿನಾಯಿತಿಯನ್ನು ಯೋಜನೆಯನ್ನು ದಿಢೀರ್ ಘೋಷಿಸಿರುವುದರಿಂದ ಮೊದಲೇ ಹಣವನ್ನು ಕೂಡಿಟ್ಟುಕೊಳ್ಳಲೂ ವಾಹನ ಸವಾರರಿಗೆ ಅವಕಾಶ ಸಿಕ್ಕಿರುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿಯವರು ಈ ವಿನಾಯಿತಿ ಯೋಜನೆಯ ಕಾಲಮಿತಿಯನ್ನು ಮೂರು ತಿಂಗಳ ತನಕ ವಿಸ್ತರಿಸಬೇಕು. ಈ ಮೂಲಕ ಬಡ ಹಾಗೂ ಮಧ್ಯಮ ವರ್ಗದ ವಾಹನ ಸವಾರರಿಗೂ ವಿನಾಯಿತಿಯ ಫಲಾನುಭವ ಸಿಗುವಂತೆ ಮಾಡಬೇಕು ಎಂದು ಜಗದೀಶ್.ವಿ. ಸದಂ ಆಗ್ರಹಿಸಿದರು.