Assembly election: ಇಂದು ಕೋಲಾರದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

Published : Feb 03, 2023, 10:56 AM ISTUpdated : Feb 03, 2023, 10:57 AM IST
Assembly election: ಇಂದು ಕೋಲಾರದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ರಾಜ್ಯ ನಾಯಕರ ಹಾಗೂ ಜಿಲ್ಲೆಯ ಶಾಸಕರು, ಎಂಎಲ್‌ಸಿಗಳ ನೇತೃತ್ವದಲ್ಲಿ ’ಪ್ರಜಾದ್ವನಿ’ ಬಸ್‌ ಯಾತ್ರೆಯು ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾರಂಭವಾಗಲಿದ್ದು, ಪ್ರಥಮವಾಗಿ ಫೆ.3ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮುಳಬಾಗಿಲು ತಾಲೂಕಿನ ಕುರುಡುಮಲೆ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಲಾಗುವುದು.

ಕೋಲಾರ (ಫೆ.3) : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ರಾಜ್ಯ ನಾಯಕರ ಹಾಗೂ ಜಿಲ್ಲೆಯ ಶಾಸಕರು, ಎಂಎಲ್‌ಸಿಗಳ ನೇತೃತ್ವದಲ್ಲಿ ’ಪ್ರಜಾದ್ವನಿ’ ಬಸ್‌ ಯಾತ್ರೆಯು ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾರಂಭವಾಗಲಿದ್ದು, ಪ್ರಥಮವಾಗಿ ಫೆ.3ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮುಳಬಾಗಿಲು ತಾಲೂಕಿನ ಕುರುಡುಮಲೆ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಲಾಗುವುದು.

ಮುಳಬಾಗಿಲು ತಾಲೂಕಿನ ಪ್ರಜಾಧ್ವನಿ ಯಾತ್ರೆಯ ಸಮಾವೇಶ ಕಪ್ಪಲಮಡಗು ಗ್ರಾಮದ ಬಳಿಯ ಎಂ.ಜಿ- 6 ಮಾರ್ಕೆಟ್‌ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದ ನಂತರ ಸಂಜೆ 4 ಗಂಟೆಗೆ ಕೆ.ಜಿ.ಎಫ್‌ ವಿಧಾನ ಸಭಾ ಕ್ಷೇತ್ರದ ಪ್ರಜಾದ್ವನಿ ಯಾತ್ರೆ(Prajadhwaniyatre) ಸಮಾವೇಶ ಕೆ.ಜಿ.ಎಫ್‌ ನಗರದ ಮುನಿಸಿಪಲ್‌ ಸ್ಟೇಡಿಯಂ ನಲ್ಲಿ ಸಮಾವೇಶ ನಡೆಯಲಿದೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಲಕ್ಷ್ಮೀನಾರಾಯಣ್‌ ತಿಳಿಸಿದ್ದಾರೆ.

 

ಡಬಲ್‌ ಇಂಜಿನ್‌ ಸರ್ಕಾರಗಳಿಂದ ಕೃಷಿ ಕ್ಷೇತ್ರವೇ ನಾಶ: ಮಾಜಿ ಸಚಿವ ಆಂಜನೇಯ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಮತ್ತಿತರರು ಭಾಗಿ

ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ(KPCC President) ಡಿ.ಕೆ. ಶಿವಕುಮಾರ್‌(DK Shivakumar), ಮಾಜಿ ಕೇಂದ್ರ ಸಚಿವ ಕೆ.ಎಚ್‌.ಮುನಿಯಪ್ಪ(KH Muniyappa), ಮಾಜಿ ಉಪಮುಖ್ಯ ಮಂತ್ರಿ ಜಿ. ಪರಮೇಶ್ವರ್‌(Dr G Parameshwar), ಮಾಜಿ ಸಚಿವ ರಾಮಲಿಂಗಾರೆಡ್ಡಿ(Ramalingareddy) ಸೇರಿದಂತೆ 20 ಜನರ ಕಾಂಗ್ರೆಸ್‌ ನಾಯಕರ ತಂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್‌ ನಾಯಕತ್ವದಲ್ಲಿ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಕಾರ್ಯಕರ್ತರು ಭಾಗವಹಿಸುವ ಹಿನ್ನಲೆಯಲ್ಲಿ ಬೃಹತ್‌ ವೇದಿಕೆ ಸಿದ್ದಪಡಿಸಿದ್ದು, ಸಮಾವೇಶದಲ್ಲಿ ಭಾಗವಹಿಸುವ ಕಾರ್ಯಕರ್ತರಿಗೆ 200 ಬಸ್‌ಗಳ ವ್ಯವಸ್ಥೆ ಜೊತೆಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಸಮಾವೇಶಕ್ಕೆ ಆಗಮಿಸುವ ಎಲ್ಲ ಕಾರ್ಯಕರ್ತರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ವಾಹನ ನಿಲುಗಡೆ ಮಾಡಲು ವ್ಯವಸ್ಥಿತವಾಗಿ ಸ್ಥಳವನ್ನು ನಿರ್ಮಾಣ ಮಾಡಲಾಗಿದೆ. ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಕಾರ್ಯಕರ್ತರನ್ನು ಆಹ್ವಾನಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾಜಿ ಶಾಸಕ ಕೊತ್ತೂರು ಜಿ ಮಂಜುನಾಥ್‌ ತಮ್ಮ ಬೆಂಬಲಿಗರಿಗೆ ತಾಲೂಕಿನ ಒಂದು ಪಂಚಾಯತ್‌ನಿಂದ ಕನಿಷ್ಠ 1000 ಜನರು ಬರಬೇಕು ಎಂದು ಸೂಚನೆ ನೀಡಿದ್ದಾರೆ. 30 ಗ್ರಾಪಂಗಳಿಂದ ಹಾಗೂ ನಗರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ

ಪ್ರಜಾಧ್ವನಿ ಕಾರ್ಯಕ್ರಮ ಬಹಿರಂಗ ಸಭೆಯಲ್ಲ, ವೇದಿಕೆ ಸಭೆಯಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬರಲಿದೆ. ಆಗ ಈ ದಿನ ಜನಸಾಮಾನ್ಯರಿಂದ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದು ಅಧಿಕಾರ ಬಂದ ನಂತರದಲ್ಲಿ ಈ ಎಲ್ಲಾ ಅಂಶಗಳನ್ನು ಅನುಮೋದನೆ ತರಲು ಶ್ರಮಿಸಲಾಗುತ್ತದೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ವಿವರಿಸಿದರು.

ಪ್ರಜಾಧ್ವನಿ ಯಾತ್ರೆಯಲ್ಲಿ ಸುವರ್ಣ ನ್ಯೂಸ್: ಡಿಕೆಶಿ-ಸಿದ್ದು ಪಿಸುಮಾತು ಏನು ಗೊತ್ತಾ?

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹಾಗೂ ಇತರೆ ಗಣ್ಯರು ಮೊದಲಿಗೆ ತಾಲೂಕಿನ ಪುರಾಣ ಪ್ರಸಿದ್ಧ ಕುರುಡುಮಲೆ ವಿನಾಯಕ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಮುಳಬಾಗಿಲಿನ ದರ್ಗಾ ಮತ್ತು ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪೊಲೀಸ್‌ ಇಲಾಖೆಯಿಂದ ಸೂಕ್ತ ಬಂದೋಬಸ್‌್ತ ವ್ಯವಸ್ಥೆ ಕಲ್ಪಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ