Bengaluru: ಬಿಜೆಪಿಗರು ಮೂರುವರೆ ವರ್ಷದಿಂದ ಕಡ್ಲೇಪುರಿ ತಿಂತಿದ್ರಾ?: ಡಿಕೆಶಿ

By Kannadaprabha NewsFirst Published Jan 25, 2023, 1:55 AM IST
Highlights

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ 35 ಸಾವಿರ ಕೋಟಿ ರು. ಭ್ರಷ್ಟಾಚಾರ ನಡೆದಿದೆ ಎಂದು ಈಗ ಆರೋಪಿಸುತ್ತಿರುವ ಬಿಜೆಪಿ ನಾಯಕರು ಕಳೆದ ಮೂರೂವರೆ ವರ್ಷದಿಂದ ತಮ್ಮದೇ ಆಡಳಿತವಿದ್ದರೂ ತನಿಖೆ ನಡೆಸದೆ ಕಡ್ಲೇಪುರಿ ತಿನ್ನುತ್ತಿದ್ದರಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು (ಜ.25) : ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ 35 ಸಾವಿರ ಕೋಟಿ ರು. ಭ್ರಷ್ಟಾಚಾರ ನಡೆದಿದೆ ಎಂದು ಈಗ ಆರೋಪಿಸುತ್ತಿರುವ ಬಿಜೆಪಿ ನಾಯಕರು ಕಳೆದ ಮೂರೂವರೆ ವರ್ಷದಿಂದ ತಮ್ಮದೇ ಆಡಳಿತವಿದ್ದರೂ ತನಿಖೆ ನಡೆಸದೆ ಕಡ್ಲೇಪುರಿ ತಿನ್ನುತ್ತಿದ್ದರಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ನಗರದಲ್ಲಿ ಮಂಗಳವಾರ ಕೆಪಿಸಿಸಿ ಕಚೇರಿ ಹಾಗೂ ತಮ್ಮ ನಿವಾಸದಲ್ಲಿ ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಧಿಕಾರದಿಂದ ಇಳಿಯುವ ಕಾಲ ಬಂದಾಗ ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರಲ್ಲಾ ಇಲ್ಲಿಯವರೆಗೆ ಬಿಜೆಪಿಯವರು ಆಡಳಿತ ಮಾಡುತ್ತಿದ್ದರಾ ಕಡ್ಲೆಪುರಿ ತಿನ್ನುತ್ತಿದ್ದರಾ? ಈ ಸರ್ಕಾರದ ಆಯಸ್ಸು ಇನ್ನು 40 ದಿನ ಮಾತ್ರ. ಮುಖ್ಯಮಂತ್ರಿಗಳು, ಸಚಿವರುಗಳು, ಗಂಟುಮೂಟೆ ಕಟ್ಟಿಕೊಂಡು ಹೊರಡಲಿ. ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿ ಬಿಜೆಪಿಯವರು ರಾಜ್ಯಕ್ಕೆ ಕಳಂಕ ತಂದಿರುವುದರಿಂದ ವಿಧಾನಸೌಧವನ್ನು ಗಂಜಲ ಹಾಕಿ ತೊಳೆಯುತ್ತೇವೆ’ ಎಂದರು.

ಬಿಜೆಪಿ ಸೇರಲು ಕಾಂಗ್ರೆಸ್‌ ಶಾಸಕರೂ ತುದಿಗಾಲಲ್ಲಿ: ಸಿ.ಟಿ. ರವಿ

‘ಕಾಂಗ್ರೆಸ್‌ ವಿರುದ್ಧ ಆರೋಪ ಮಾಡುವ ನೈತಿಕತೆ ಬಿಜೆಪಿಯವರಿಗಿಲ್ಲ. ಹೀಗಾಗಿಯೇ ಈ ಹಿಂದೆ ನಮ್ಮೊಂದಿಗಿದ್ದ ಸಚಿವ ಸುಧಾಕರ್‌ ಮೂಲಕ ಆರೋಪ ಮಾಡಿಸುತ್ತಾರೆ. ಸಿಎಜಿ ವರದಿಯಲ್ಲಿ ಕಾಮಗಾರಿ ವೆಚ್ಚ ಹೆಚ್ಚಾಗಿದೆ ಎಂದು ಹೇಳಿದೆಯೇ ಹೊರತು 35 ಕೋಟಿ ರು. ಅವ್ಯವಹಾರ ನಡೆದಿದೆ ಎಂದು ಹೇಳಿಲ್ಲ. ಇಂತಹ ಆರೋಪ ಮಾಡುವ ಸುಧಾಕರ್‌ಗೆ ಸರ್ಕಾರ ಹೇಗೆ ನಡೆಯುತ್ತದೆ ಎಂಬುದೇ ಗೊತ್ತಿಲ್ಲ’ ಎಂದು ಟೀಕಿಸಿದರು.

‘ಕಾಂಗ್ರೆಸ್‌ ಪಕ್ಷ ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ಮುಂದೆ ಅಧಿಕಾರಕ್ಕೆ ಬಂದರೆ 200 ಯುನಿಟ್‌ ಉಚಿತ ವಿದ್ಯುತ್‌ ಮತ್ತು ಗೃಹಿಣಿಯರಿಗೆ ಮಾಸಿಕ 2 ಸಾವಿರ ಪ್ರೋತ್ಸಾಹ ಧನ ನೀಡುವ ಖಚಿತ ಯೋಜನೆ ಘೋಷಿಸಿದ್ದರಿಂದ ಬಿಜೆಪಿಯವರ ತಲೆ ಕೆಟ್ಟು ಹೋಗಿದೆ. ಇನ್ನಷ್ಟುಯೋಜನೆಗಳನ್ನು ಮುಂದಿನ ದಿನಗಳಲ್ಲಿ ಘೋಷಿಸುತ್ತೇವೆ. ಬಿಜೆಪಿ ಸರ್ಕಾರಕ್ಕೆ 40 ಪರ್ಸೆಂಟ್‌ ಕಮಿಷನ್‌ ಸರ್ಕಾರ ಎಂಬ ಬ್ರ್ಯಾಂಡ್‌ ಬಂದಿದ್ದು, ಅದನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್‌ ವಿರುದ್ಧ ಚುನಾವಣೆ ಸಂದರ್ಭದಲ್ಲಿ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಕಾಲದಲ್ಲಿ 35 ಸಾವಿರ ಕೋಟಿ ಅಕ್ರಮವಾಗಿದೆ ಎಂದು ಹೇಳಿಸಿದ್ದಾರೆ. ನಿಮ್ಮದೇ ಅಧಿಕಾರ ಇತ್ತಲ್ಲ ತನಿಖೆ ಮಾಡದಂತೆ ತಡೆದಿದ್ದವರು ಯಾರು? ಬಿಜೆಪಿಯವರು ಲಂಚ ತಿಂದು ಕಾಂಗ್ರೆಸ್‌ ಪಕ್ಷದ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಏನೂ ಆಗುವುದಿಲ್ಲ. ಜನರು ಇದನ್ನು ಅರ್ಥಮಾಡಿಕೊಳ್ಳದಷ್ಟುದಡ್ಡರಲ್ಲ’ ಎಂದರು.

ಸಮೀಕ್ಷೆಗಳಲ್ಲಿ ಬಿಜೆಪಿಗೆ ಸೋಲು:

ಜನರ ಮನದಲ್ಲಿ ಕಾಂಗ್ರೆಸ್‌ ಪರ ಒಲವು ಮೂಡಿದೆ. ಬಿಜೆಪಿಯವರು ತಾವೇ ನಡೆಸಿದ ಸಮೀಕ್ಷೆಯಲ್ಲಿ, ಖಾಸಗಿ ಸಂಸ್ಥೆಗಳು, ಮಾಧ್ಯಮಗಳ ಸಮೀಕ್ಷೆಯಲ್ಲೂ ಬಿಜೆಪಿ ಮುಂದಿನ ಚುನಾವಣೆಯಲ್ಲಿ 60 ಸ್ಥಾನ ಕೂಡ ಗೆಲ್ಲುವ ನಿರೀಕ್ಷೆ ಇಲ್ಲ. ಆದರೆ, ಕಾಂಗ್ರೆಸ್‌ 120ರಿಂದ 130 ಕ್ಷೇತ್ರಗಳನ್ನು ಗೆಲ್ಲುವುದು ಖಚಿತವಾಗಿದೆ. ಇದರಿಂದ ಬಿಜೆಪಿಯಲ್ಲಿ ಯಡಿಯೂರಪ್ಪ- ಬೊಮ್ಮಾಯಿ, ಯತ್ನಾಳ್‌ - ನಿರಾಣಿ, ಸಿ.ಪಿ. ಯೋಗೇಶ್ವರ್‌- ಆರ್‌.ಅಶೋಕ್‌ ಹೀಗೆ ಬೇರೆ ಬೇರೆ ನಾಯಕರ ನಡುವೆ ಆಂತರಿಕ ಜಗಳ ಹೆಚ್ಚಾಗುತ್ತಿದೆ. ನಮ್ಮ ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾತನಾಡುತ್ತೀರಲ್ಲ, ಬಿಜೆಪಿ ಪಕ್ಷದಲ್ಲಿ 32 ಗುಂಪುಗಳಿವೆ. ಹೀಗಾಗಿ ಅವರು ಬಹಿರಂಗವಾಗಿ ಮಾತನಾಡಲು ಹೆದರುತ್ತಿದ್ದಾರೆ. ಈ ಕಾರಣಕ್ಕೆ ನಮ್ಮ ಪಕ್ಷದಲ್ಲಿದ್ದವರಿಂದ ಕಾಂಗ್ರೆಸ್‌ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿಸಿದ್ದಾರೆ ಎಂದು ಟೀಕಿಸಿದರು.

ಬಿಜೆಪಿಗರು ಬೊಮ್ಮಾಯಿ ಬಿಟ್ಟು ಮೋದಿ ಮುಖ ತೋರಿಸ್ತಿದ್ದಾರೆ: ಡಿ.ಕೆ.ಶಿವಕುಮಾರ್‌

ಬಿಜೆಪಿ ನಾಯಕನೊಬ್ಬ ಪ್ರತಿ ಮತದಾರನಿಗೆ ಹಣ ಕೊಟ್ಟು ಕಾಂಗ್ರೆಸ್‌ ಅಭ್ಯರ್ಥಿ ಸೋಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾನೆ. ಆದರೂ ಚುನಾವಣಾ ಆಯೋಗ ಏನು ಮಾಡುತ್ತಿದೆ? ಆದಾಯ ತೆರಿಗೆ ಇಲಾಖೆ ಏನು ಮಾಡುತ್ತಿದೆ? ಬಿಜೆಪಿಯವರು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರತಿ ಮತಕ್ಕೆ 6 ಸಾವಿರ ರು. ನೀಡಿ ಮತಗಳನ್ನು ಖರೀದಿ ಮಾಡುತ್ತಾರಾ? ಇದೇನಾ ಬಿಜೆಪಿ ಸಂಸ್ಕೃತಿ?

- ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ

click me!