ಕಳೆದ ಐದು ವರ್ಷದ ಅಧಿಕಾರದ ಅವಧಿಯಲ್ಲಿ ಕಾರ್ಯಕರ್ತರು ತಲೆತಗ್ಗಿಸುವ ಕೆಲಸ ಎಂದಿಗೂ ಮಾಡಿಲ್ಲ. ಬಿಜೆಪಿಗೆ ನಿಷ್ಠಾವಂತ ಕಾರ್ಯಕರ್ತರೇ ಶ್ರೀರಕ್ಷೆ. ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಮತ್ತೊಮ್ಮೆ ಶಾಸಕನಾಗುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಸುನೀಲ್ ಬಿ. ನಾಯ್ಕ್ ಹೇಳಿದರು.
ಭಟ್ಕಳ (ಏ.15) : ಕಳೆದ ಐದು ವರ್ಷದ ಅಧಿಕಾರದ ಅವಧಿಯಲ್ಲಿ ಕಾರ್ಯಕರ್ತರು ತಲೆತಗ್ಗಿಸುವ ಕೆಲಸ ಎಂದಿಗೂ ಮಾಡಿಲ್ಲ. ಬಿಜೆಪಿಗೆ ನಿಷ್ಠಾವಂತ ಕಾರ್ಯಕರ್ತರೇ ಶ್ರೀರಕ್ಷೆ. ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಮತ್ತೊಮ್ಮೆ ಶಾಸಕನಾಗುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಸುನೀಲ್ ಬಿ. ನಾಯ್ಕ್ (Sunil kumar naik) ಹೇಳಿದರು.
ಶುಕ್ರವಾರ ಸಂಜೆ ಮಣ್ಕುಳಿಯಲ್ಲಿ ಪಕ್ಷದ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಸಾಕಷ್ಟುಅಭಿವೃದ್ಧಿ ಕಾರ್ಯ ಮಾಡಿಸಿದ್ದೇನೆ. ಬಿಜೆಪಿ ಗೆದ್ದರೆ ಕಾರ್ಯಕರ್ತರು ಗೆದ್ದಂತೆ. ಪಕ್ಷದ ಟಿಕೆಟ್‌ಗಾಗಿ ಯಾರ ಮೇಲೂ ಒತ್ತಡ ಹೇರಿಲ್ಲ. ಹಿಂದುತ್ವ, ಪಕ್ಷದ ತತ್ವ- ಸಿದ್ಧಾಂತದ ಆಧಾರದಲ್ಲಿ ಕಳೆದೈದು ವರ್ಷದಿಂದ ಶಾಸಕನಾಗಿ ಕಾರ್ಯನಿರ್ವಹಿಸಿದ್ದೇನೆ. ಹಿಂದುತ್ವದ ವಿಚಾರಕ್ಕೆ ಎಂದಿಗೂ ರಾಜೀ ಮಾಡಿಕೊಂಡಿಲ್ಲ ಎಂದು ಹೇಳಿದರು.
undefined
ಅಭ್ಯರ್ಥಿ ಆಯ್ಕೆಯ ವೇಳೆ ಅಸಮಾಧಾನ ಇದ್ದದ್ದೆ: ಸುನಿಲ್ ಕುಮಾರ್
ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷ ಯಾವುದೇ ನಿರ್ಧಾರ ಕೈಗೊಂಡಿದ್ದರೂ ಅದಕ್ಕೆ ನಾನು ಬದ್ಧನಿದ್ದೆ. ಟಿಕೆಟ್ ನೀಡದಿದ್ದಲ್ಲಿ ನಾನು ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂದು ಅಪಪ್ರಚಾರ ಮಾಡಲಾಯಿತು. ಆದರೆ, ಈ ಅಪಪ್ರಚಾರವೆಲ್ಲವೂ ಸುಳ್ಳು. ಕ್ಷೇತ್ರದಲ್ಲಿ ಪಕ್ಷ ಮತ್ತು ನನ್ನ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದ್ದು, ಇದಕ್ಕೆ ಚುನಾವಣೆಯಲ್ಲಿ ಕಾರ್ಯಕರ್ತರು ತಕ್ಕ ಉತ್ತರ ನೀಡಬೇಕು. ಕಾರ್ಯಕರ್ತರು ಸರ್ಕಾರದ ಸಾಧನೆ ಮತ್ತು ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನೆಮನೆಗೆ ತೆರಳಿ ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಕಾರ್ಯಕರ್ತರಿಗೆ ಯಾವುದೇ ರೀತಿಯ ತೊಂದರೆ, ದೌರ್ಜನ್ಯ ಆಗಲು ಬಿಡುವುದಿಲ್ಲ. ಪ್ರತಿ ಬೂತ್‌ನಲ್ಲೂ ಹೆಚ್ಚು ಮತ ಲಭಿಸುವಂತೆ ಮಾಡಬೇಕು ಎಂದು ಮನವಿ ಮಾಡಿದರು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ್ , ಪ್ರತಿಯೊಬ್ಬರೂ ತಮಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ, ಭಟ್ಕಳ ಕ್ಷೇತ್ರದ ಉಸ್ತುವಾರಿ ಪ್ರಶಾಂತ ನಾಯ್ಕ್ , ಭಟ್ಕಳದ ಕ್ಷೇತ್ರದ ಬಿಜೆಪಿ ಚುನಾವಣಾ ಸಂಚಾಲಕ ಕೇಶವ ನಾಯ್ಕ್ ಬಳ್ಕೂರು, ನಿಕಟಪೂರ್ವ ಅಧ್ಯಕ್ಷ ರಾಜೇಶ ನಾಯ್ಕ್ , ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ರವಿ ನಾಯ್ಕ್ , ಮಾಜಿ ಸೈನಿಕರ ಪ್ರಕೋಷ್ಟದ ಸಂಚಾಲಕ ಶ್ರೀಕಾಂತ ನಾಯ್ಕ್ , ಹೊನ್ನಾವರ ಮಂಡಲಾಧ್ಯಕ್ಷ ರಾಜು ಭಂಡಾರಿ, ಸುಬ್ರಾಯ ನಾಯ್ಕ್ ಮುಂತಾದವರಿದ್ದರು.
ಚುನಾವಣೆ ಹಿನ್ನೆಲೆ: ಮತದಾನ ಜಾಗೃತಿಗೆ ಬಾಗಲಕೋಟೆ ಅಧಿಕಾರಿಣಿಯೊಬ್ಬರ ವಿನೂತನ ಪ್ರಯೋಗ!
ಭಟ್ಕಳ ಬಿಜೆಪಿ ಮಂಡಲಾಧ್ಯಕ್ಷ ಸುಬ್ರಾಯ ದೇವಡಿಗ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಉಮೇಶ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಶ್ರೇಯಾ ಮಹಾಲೆ ವಂದೇ ಮಾತರಂ ಗೀತೆ ಹಾಡಿದರು. ಪ್ರಧಾನ ಕಾರ್ಯದರ್ಶಿ ಭಾಸ್ಕರ ದೈಮನೆ ವಂದಿಸಿದರು.