: ವಿಧಾನಸಭಾ ಕ್ಷೇತ್ರ ಚುನಾವಣೆಗೆ ಜೆಡಿಎಸ್ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಪ್ರಕಟಿಸಿದ್ದು, ಅದರಲ್ಲಿ ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ಕಡೆ ಅಭ್ಯರ್ಥಿಗಳ ಆಯ್ಕೆಯನ್ನು ವರಿಷ್ಠರು ಮಾಡಿದ್ದಾರೆ.
ರಾಮಕೃಷ್ಣ ದಾಸರಿ
ರಾಯಚೂರು (ಡಿ.20) : ವಿಧಾನಸಭಾ ಕ್ಷೇತ್ರ ಚುನಾವಣೆಗೆ ಜೆಡಿಎಸ್ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಪ್ರಕಟಿಸಿದ್ದು, ಅದರಲ್ಲಿ ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ಕಡೆ ಅಭ್ಯರ್ಥಿಗಳ ಆಯ್ಕೆಯನ್ನು ವರಿಷ್ಠರು ಮಾಡಿದ್ದಾರೆ.
undefined
ಸಾಮಾನ್ಯ ವರ್ಗಕ್ಕೆ ಮೀಸಲಿರುವ ರಾಯಚೂರು ನಗರ, ಪರಿಶಿಷ್ಟಪಂಗಡದ ಮೀಸಲಿನ ಮಸ್ಕಿ ವಿಧಾನಸಭಾ ಕ್ಷೇತ್ರಗಳನ್ನು ಬಿಟ್ಟು ಉಳಿದ ರಾಯಚೂರು ಗ್ರಾಮೀಣ, ಮಾನ್ವಿ, ದೇವದುರ್ಗ, ಸಿಂಧನೂರು ಮತ್ತು ಲಿಂಗಸುಗೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಮಾಡಲಾಗಿದೆ.
ರಾಜ್ಯದಲ್ಲಿ ಬಿಜೆಪಿ ಸಂಘಟಿಸಿ, ಬಲಿಷ್ಠಗೊಳಿಸಿದ್ದು ಬಿಎಸ್‌ವೈ: ಶಂಕರ ಪಾಟೀಲ್ ಮುನೇನಕೊಪ್ಪ
ಯಾರಾರಯರಿಗೆ ಟಿಕೆಟ್:
ಪರಿಶಿಷ್ಟಪಂಗಡಕ್ಕೆ ಮೀಸಲಿರುವ ರಾಯಚೂರು ಗ್ರಾಮೀಣಕ್ಕೆ ಸಣ್ಣ ನರಸಿಂಹ ನಾಯಕ, ಮಾನ್ವಿಗೆ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ, ದೇವದುರ್ಗಕ್ಕೆ ಕರೆಮ್ಮ ಜಿ.ನಾಯಕ, ಸಾಮಾನ್ಯ ವರ್ಗಕ್ಕೆ ಮೀಸಲಿರುವ ಸಿಂಧನೂರಿಗೆ ಹಾಲಿ ಶಾಸಕ ವೆಂಕಟರಾವ್ ನಾಡಗೌಡ ಮತ್ತು ಪರಿಶಿಷ್ಟಜಾತಿಗೆ ಮೀಸಲಿನ ಲಿಂಗಸುಗೂರು ಸಿದ್ದು ವೈ.ಬಂಡಿ ಅವರಿಗೆ ಟಿಕೆಟ್ ನೀಡಲಾಗಿದೆ. ರಾಯಚೂರು ನಗರ ಮತ್ತು ಮಸ್ಕಿ ಅಭ್ಯರ್ಥಿಗಳ ಘೋಷಣೆಯ ಕುತೂಹಲ ಮೂಡಿಸಿದೆ.
5 ಜನರ ಫೆä್ರೕಫೈಲ್:
ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ಘೋಷಿತಗೊಂಡಿರುವ ಅಭ್ಯರ್ಥಿ ಸಣ್ಣ ನರಸಿಂಹ ನಾಯಕ ಅವರು ಹಿಂದೆ ಬಿಜೆಪಿಯಲ್ಲಿದ್ದರು. ಅಲ್ಲಿ ಪಕ್ಷದ ಗಮನಕ್ಕೆ ತಾರದೆಯೇ ಚುನಾವಣೆ ತಯಾರಿ ನಡೆಸಿ ಉಚ್ಛಾಟನೆಗೊಂಡಿದ್ದರಿಂದ ಜೆಡಿಎಸ್ ಕದತಟ್ಟಿಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಾನ್ವಿಯ ರಾಜಾ ವೆಂಕಟಪ್ಪ ನಾಯಕ ಈಗಾಗಲೇ ಜೆಡಿಎಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಿಂಧನೂರಿನ ವೆಂಕಟರಾವ್ ನಾಡಗೌಡ ಅವರು ಸಹ ಅದೇ ಪಕ್ಷದ ಹಾಲಿ ಶಾಸಕರಾಗಿದ್ದು, ಅವರಿಗೂ ಟಿಕೆಟ್ ನೀಡಲಾಗಿದೆ. ಇನ್ನು ದೇವದುರ್ಗ ಕ್ಷೇತ್ರಕ್ಕೆ ಆಯ್ಕೆಯಾಗಿರುವ ಕರೆಮ್ಮ ಜಿ.ನಾಯಕ ಅವರಿಗೆ ಕಳೆದ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ನೀಡದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಹೆಚ್ಚು ಮತಗಳನ್ನು ಪಡೆದು ರಾಷ್ಟ್ರೀಯ ಪಕ್ಷಗಳಿಗೆ ಶಾಕ್ ಕೊಟ್ಟಿದ್ದರಿಂದ ಈ ಬಾರಿ ಅವರಿಗೆ ಟಿಕೆಟ್ ನೀಡಿದೆ. ಅದೇ ರೀತಿ ಲಿಂಗಸುಗೂರು ಕ್ಷೇತ್ರದ ಅಭ್ಯರ್ಥಿ ಸಿದ್ದು ವೈ.ಬಂಡಿ ಅವರು ಸಹ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲುಂಡಿದ್ದರಿಂದ ಮತ್ತೊಮ್ಮೆ ಅವರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಕಾದು ನೋಡುವ ತಂತ್ರ:
ಜಿಲ್ಲೆ ಉಳಿದ ರಾಯಚೂರು ನಗರ ಮತ್ತು ಮಸ್ಕಿ ಕ್ಷೇತ್ರಗಳಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಜೆಡಿಎಸ್ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ. ರಾಯಚೂರು ನಗರ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಬಲವಾದ ಕೂಗು ಕೇಳಿಬರುತ್ತಿದೆ. ಅದೇ ರೀತಿ ಮಸ್ಕಿಯಲ್ಲಿ ಮಾಜಿ ಶಾಸಕ ಪ್ರತಾಪಗೌಡ ಅವರ ನಡೆಯನ್ನು ಗಮನಿಸಿ ಟಿಕೆಟ್ ಘೋಷಣೆ ಮಾಡುವ ಉದ್ದೇಶ ಪಕ್ಷದ್ದಾಗಿದೆ.
Ticket Fight: ಸಿಂಧನೂರಿನಲ್ಲೂ ಗಣಿ ರೆಡ್ಡಿ ಸ್ಪರ್ಧೆ ವದಂತಿ: ಕಾಂಗ್ರೆಸ್-ಬಿಜೆಪಿ ಟಿಕೆಟ್‌ಗೆ ತೀವ್ರ ಕದನ
ಜೆಡಿಎಸ್ ಪ್ರಕಟಿಸಿರುವ ಮೊದಲ ಪಟ್ಟಿಯಲ್ಲಿ ಜಿಲ್ಲೆಯ ಐದು ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಉಳಿದ ರಾಯಚೂರು ನಗರ ಮತ್ತು ಮಸ್ಕಿ ಕ್ಷೇತ್ರಗಳಿಗೂ ಅರ್ಹರನ್ನು ಆಯ್ಕೆ ಮಾಡಲಾಗುವುದು. ಗಮನಕ್ಕೆ.. ಜೆಡಿಎಸ್ ಪಕ್ಷದ ಚಿಹ್ನೆ ಬಳಿಸಿಕೊಳ್ಳಬಹುದು.