ಕಾಂಗ್ರೆಸ್, ಆರ್.ಅಶೋಕ್ ಅವರು ಶಾಸಕರನ್ನು ಸಭಾಧ್ಯಕ್ಷರ ಪೀಠಕ್ಕೆ ನುಗ್ಗುವಂತೆ ಪ್ರಚೋದಿಸಿದರು ಎಂದು ಆರೋಪಿಸಿದೆ. ಸ್ಪೀಕರ್ ಯು.ಟಿ.ಖಾದರ್ ಅವರ ಕ್ರಮವನ್ನು ಬೆಂಬಲಿಸಿ, ಅಶೋಕ್ ಮೇಲೂ ಕ್ರಮಕ್ಕೆ ಆಗ್ರಹಿಸಿದೆ.
ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ 18 ಶಾಸಕರ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್ ಉತ್ತಮ ನಿರ್ಧಾರ ತೆಗೆದುಕೊಂಡಿದ್ದು, ಶಾಸಕರ ವರ್ತನೆಗೆ ಪ್ರೇರೇಪಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಮೇಲೂ ಅದೇ ರೀತಿಯ ಕ್ರಮ ಕೈಗೊಳ್ಳಬೇಕಿತ್ತು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ತಿಳಿಸಿದ್ದಾರೆ.
ಸಂವಿಧಾನದ ಆಶಯ ಮತ್ತು ನಿಯಮಾವಳಿಗಳಿಗೆ ಅನುಗುಣವಾಗಿ ಯಾವುದೇ ಶಾಸಕರು ಸದನದಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರ ತೋರಲು ಅವಕಾಶವಿರುವುದಿಲ್ಲ. ಹೀಗಾಗಿಯೇ ಶುಕ್ರವಾರ ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಕಾರಣಕ್ಕಾಗಿ ಶಾಸಕರನ್ನು ಅಮಾನತು ಮಾಡಲಾಗಿದೆ. ಆದರೆ, ಆ ಶಾಸಕರಿಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಚೋದನೆ ನೀಡಿದ್ದು, ಸಭಾಧ್ಯಕ್ಷರ ಪೀಠಕ್ಕೆ ನುಗ್ಗುವಂತೆ ಪ್ರಚೋದಿಸಿದ್ದು ಸ್ಪಷ್ಟವಾಗಿ ದಾಖಲಾಗಿದೆ. ವಿರೋಧ ಪಕ್ಷದ ನಾಯಕರಾಗಿ ಸಭಾಧ್ಯಕ್ಷರ ಪೀಠದ ಗೌರವ ಎತ್ತಿ ಹಿಡಿಯಬೇಕಾದವರೇ, ಸದನದಲ್ಲಿ ಗದ್ದಲಕ್ಕೆ ಕಾರಣರಾಗಿದ್ದಾರೆ.
ಇದನ್ನೂ ಓದಿ: ತಿಮ್ಮಪ್ಪನ ದರ್ಶನಕ್ಕೆ ಶಿಫಾರಸು ಬಗ್ಗೆ ಆಂಧ್ರ ಸಿಎಂ ಜತೆ ಚರ್ಚೆ: ಸಚಿವ ರಾಮಲಿಂಗಾರೆಡ್ಡಿ
ಸದನವು ಶಿಸ್ತುಕ್ರಮದ ಪ್ರಸ್ತಾವನೆಯನ್ನು ಮಂಡಿಸುವ ಸಂದರ್ಭದಲ್ಲಿ ಇವರ ಹೆಸರನ್ನು ಪರಿಗಣಿಸದೆ ಇರುವುದು ಸರಿ ಅಲ್ಲವೆಂದು ಮತ್ತು ಲೋಪದಿಂದ ಕೂಡಿದೆ ಎಂದು ಜನಸಾಮಾನ್ಯರು ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟವರು ತಮ್ಮ ಅನಿಸಿಕೆಯನ್ನು ಹೇಳುತ್ತಿದ್ದಾರೆ. ಹೀಗಾಗಿ ಸಚಿವ ಎಚ್.ಕೆ. ಪಾಟೀಲ್, ಶಿಸ್ತುಕ್ರಮದ ಪ್ರಸ್ತಾವನೆ ಮಂಡಿಸಿದಾಗ ಆರ್.ಅಶೋಕ್ ಹೆಸರನ್ನೂ ಪ್ರಸ್ತಾಪಿಸಬೇಕಿತ್ತು. ಹೀಗಾಗಿ 348ರ ಅಡಿಯಲ್ಲಿ ಆರ್.ಅಶೋಕ್ ಅವರ ಮೇಲೂ ಶಿಸ್ತು ಕ್ರಮ ಕೈಗೊಂಡು ಸಭಾಧ್ಯಕ್ಷರು ಆದೇಶ ಹೊರಡಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ: ತೀವ್ರ ವಿರೋಧದ ನಡುವೇ ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು ಮಸೂದೆ ಪಾಸ್, ಗೌರ್ನರ್ ಒಪ್ಪಿದರೆ ಜಾರಿ!
Congress led by crosses all limits of insulting both democracy and the constitution!
How can MLAs be punished for protesting against an unconstitutional appeasement tactic?
Strongly condemn this high-handedness of suspending our MLAs for exercising… pic.twitter.com/tZqwpmCmtj