
ಬೆಂಗಳೂರು(ಏ.12): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್‌ಇಡಿ ವಾಹನದ ಮೂಲಕ ಚುನಾವಣಾ ಪ್ರಚಾರ ಕೈಗೊಳ್ಳುವ ಆಡಿಯೋ, ವಿಡಿಯೋವನ್ನು ರಾಜ್ಯ ಬಿಜೆಪಿ ಚುನಾವಣಾ ಸಂಚಾಲಕ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು.
ಗುರುವಾರ ಬಿಜೆಪಿ ಕಚೇರಿ ಮುಂಭಾಗ ಈ ಪ್ರಚಾರದ ವಾಹನಗಳಿಗೆ ಚಾಲನೆ ನೀಡಲಾಯಿತು. ಕೇಂದ್ರದ ಸಾಧನೆ ಪ್ರಚಾರವನ್ನು ರೀಲ್ಸ್ ಹಾಡಿನ ಮೂಲಕ ಕೈಗೊಳ್ಳಲಾಗುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಲ್‌ಇಡಿ ವಾಹನ ಮೂಲಕ ಪ್ರಚಾರ ಮಾಡಲಾಗುತ್ತದೆ. ಸಾಂಸ್ಕೃತಿಕ ಭಾರತ, ಸುಧಾರಿತ ಭಾರತದ ಪರಿಕಲ್ಪನೆಯಡಿ ಪ್ರಚಾರ ಕೈಗೊಳ್ಳಲಾಗುತ್ತದೆ.
ಕಾಂಗ್ರೆಸ್‌ಗೆ ಕುಟುಂಬ ಮೊದಲು, ನನಗೆ ಭಾರತ ಮತ್ತು ನೀವು: ನರೇಂದ್ರ ಮೋದಿ
ಮುದ್ರಾ ಯೋಜನೆ ಕುರಿತು ವಿಡಿಯೋ ಹರಿಕಥೆ ಮಾಡಲಾಗಿದೆ. ಅಲ್ಲದೇ, ಕಾಂಗ್ರೆಸ್ ವೈಫಲ್ಯತೆ ಬಗ್ಗೆಯೂ ಪ್ರಚಾರ ಕಾರ್ಯ ನಡೆಸಲಾಗುತ್ತದೆ. ಭಾರತದ ಹೆಮ್ಮೆಯ ಪುತ್ರ ಮೋದಿ.. ಎಂಬ ಹಾಡಿನ ಬಗ್ಗೆಯೂ ಪ್ರಚಾರ ಮಾಡಲಾಗುತ್ತದೆ. ಪ್ರಚಾರ ವಾಹನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗುವುದು. 10 ವರ್ಷಗಳ ಸಾಧೆನಗಳ ಕುರಿತು ವಿಡಿಯೋ ತಯಾರಿಸಲಾಗಿದೆ. ಆಡಿಯೋ, ವಿಡಿಯೋ ಮೂಲಕ ಜನರ ಬಳಿ ಬಿಜೆಪಿ ತೆರಳಿ ಮತಯಾಚಿಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.