ನರೇಂದ್ರ ಮೋದಿ ಬಂದ ನಂತರ ಪ್ರಶಸ್ತಿ ಮೌಲ್ಯ ಹೆಚ್ಚಳ: ಕೆಂದ್ರ ಸಚಿವ ಎ ನಾರಾಯಣಸ್ವಾಮಿ

Published : Mar 12, 2023, 11:35 AM IST
ನರೇಂದ್ರ ಮೋದಿ ಬಂದ ನಂತರ ಪ್ರಶಸ್ತಿ ಮೌಲ್ಯ ಹೆಚ್ಚಳ: ಕೆಂದ್ರ ಸಚಿವ ಎ ನಾರಾಯಣಸ್ವಾಮಿ

ಸಾರಾಂಶ

ನರೇಂದ್ರ ಮೋದಿ ಪ್ರಧಾನಿಯಾದ ಆನಂತರ ದೇಶದಲ್ಲಿನ ಪ್ರಶಸ್ತಿಗಳ ಮೌಲ್ಯ ಹೆಚ್ಚಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ(A Narayanaswamy) ಹೇಳಿದ್ದಾರೆ.

ಹರಪನಹಳ್ಳಿ (ಮಾ.12) : ನರೇಂದ್ರ ಮೋದಿ ಪ್ರಧಾನಿಯಾದ ಆನಂತರ ದೇಶದಲ್ಲಿನ ಪ್ರಶಸ್ತಿಗಳ ಮೌಲ್ಯ ಹೆಚ್ಚಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ(A Narayanaswamy) ಹೇಳಿದ್ದಾರೆ.

ಅವರು ಪಟ್ಟಣದ ಡಾ. ಬಾಬುಜಗಜೀವನ ರಾಂ ಸಮುದಾಯ ಭವನದಲ್ಲಿ ಎ. ನಾರಾಯಣಸ್ವಾಮಿ ಅಭಿಮಾನಿ ಬಳಗದ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಜನಪದ ತಮಟೆ ಕಲಾವಿದ ಪಿಂಡಿಪಾಪನಹಳ್ಳಿ ನಾಡೋಜ ಮುನಿವೆಂಕಟಪ್ಪ ಅವರ ಸನ್ಮಾನ ಸಮಾರಂಭ ಉದ್ಘಾಟಿಸಿ ಶನಿವಾರ ಮಾತನಾಡಿದರು. ಮೋದಿ ಅವರು ಪದ್ಮಶ್ರೀ, ಪದ್ಮಭೂಷಣ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶೋಷಿತ ವರ್ಗದವರು ಹಾಗೂ ಇತರ ಜನಸಾಮಾನ್ಯರನ್ನು ಗುರುತಿಸಿ ಆಯ್ಕೆ ಮಾಡುತ್ತಿದ್ದಾರೆ. ಸಮಾಜದ ಬಂಧು ಮುನಿವೆಂಕಟಪ್ಪ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ರಾಜ್ಯ ಸರ್ಕಾರದ ಹೃದಯ ಗೆದ್ದಿದ್ದಾರೆ ಎಂದರು.

Karnataka election 2023: ಕೊಪ್ಪಳಕ್ಕಿಂದು ವಿಜಯ ಸಂಕಲ್ಪ ಯಾತ್ರೆ ಆಗಮನ

ಡಾ. ಬಿ.ಆರ್‌. ಅಂಬೇಡ್ಕರ್‌(Dr BR Ambedkar) ಸಂವಿಧಾನ ಕೊಟ್ಟನಂತರದ ದಿನಗಳಲ್ಲಿ 22 ಶಾಸಕರಿದ್ದ ಮಾದಿಗ ಸಮುದಾಯ(Madiga community)ದವರು ಇಂದು 5 ಜನಕ್ಕೆ ಸೀಮಿತರಾಗಿದ್ದಾರೆ. ಶೋಷಿತ ವರ್ಗದವರು ಮತ ಮಾರಿಕೊಂಡಿದ್ದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಿದರು.

ದಲಿತರ ವೋಟು ಮಾರುಕಟ್ಟೆಯಲ್ಲಿಲ್ಲ ಎಂದು ಹೇಳಿದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವ ಬರುತ್ತದೆ ಎಂದ ಅವರು, ನಿಮ್ಮ ಬದುಕನ್ನು ನೀವೇ ರೂಪಿಸಿಕೊಳ್ಳಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಹಾಗೂ ಸಂಸ್ಕಾರ ಕೊಡಬೇಕು ಎಂದು ತಿಳಿಸಿದರು.

ದೇವದಾಸಿ ಪದ್ಧತಿ ನಿರ್ಮೂಲನೆಯಾಗಬೇಕು. ಅಂತಹ ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೌಲಭ್ಯ ಒದಗಿಸುತ್ತವೆ ಎಂದು ಹೇಳಿದರು.

ಸಹಕಾರ ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ಜಿ. ನಂಜನಗೌಡ ಮಾತನಾಡಿ, ಜಾತಿ ವ್ಯವಸ್ಥೆ ನಿರ್ಮೂಲನೆಯಾಗಬೇಕು. ಸಮ ಸಮಾಜ ನಿರ್ಮಾಣವಾಗಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಕೆಲಸ ಮಾಡುತ್ತಿವೆ ಎಂದರು.

ಜಿಪಂ ಮಾಜಿ ಸದಸ್ಯೆ ಸುವರ್ಣ ನಾಗರಾಜ ಮಾತನಾಡಿ, ತಮ್ಮಲ್ಲಿ ಒಗ್ಗಟ್ಟು ಮೂಡಿಸಿಕೊಂಡು ಮುಂದಿನ ದಿನಗಳಲ್ಲಿ ಮಾದಿಗ ಸಮಾಜದ ಹೆಚ್ಚಿನ ಶಾಸಕರು ಗೆಲ್ಲುವಂತಾಗಬೇಕು ಎಂದು ಸಲಹೆ ನೀಡಿದರು.

ಬಿಜೆಪಿ ವಿಜಯನಗರ ಜಿಲ್ಯಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್‌ ಮಾತನಾಡಿ, ಕೆಳ ಸಮುದಾಯದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಕೊಡುವ ಕೆಲಸವನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಲಿದೆ ಎಂದು ಹೇಳಿದರು.

ಸಭಾಪತಿಯಾಗಿ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ: ಬಸವರಾಜ ಹೊರಟ್ಟಿ

ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಿಂಡಿಪಾಪನಹಳ್ಳಿ ನಾಡೋಜ ಮುನಿವೆಂಕಟಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ದಲಿತ ಮುಖಂಡ ತೆಲಿಗಿ ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು.

ಮುಖಂಡ ಪಿ.ಮಹಾಬಲೇಶ್ವರಗೌಡ ಮಾತನಾಡಿದರು. ಬಿಜೆಪಿ ಮುಖಂಡ ಕಣವಿಹಳ್ಳಿ ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖಂಡರಾದ ಆರುಂಡಿ ನಾಗರಾಜ, ಎ.ಪಿ.ನಾಯ್ಕ, ಸತ್ತೂರು ಹಾಲೇಶ, ಪುರಸಭಾ ಅಧ್ಯಕ್ಷ ಎಚ್‌.ಎ. ಅಶೋಕ, ಲಿಂಗಾನಂದ, ನಿಚ್ಚವನಹಳ್ಳಿ ಭೀಮಪ್ಪ, ಹಗರಿಬೊಮ್ಮನಹಳ್ಳಿ ರಾಮಣ್ಣ, ಆಲೂರು ನಿಂಗರಾಜ, ಕೆಂಚಪ್ಪ ಕಂಚಿಕೇರಿ, ಇಂದ್ರಪ್ಪ ಹಲುವಾಗಲು, ಹೊಸಪೇಟೆಯ ಯಲ್ಲಪ್ಪ ಬಂಡಾರದರ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ