ವಿಧಾನ ಪರಿಷತ್‌ ನೈಯತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಆಯ್ಕೆ 

By Ravi JanekalFirst Published Mar 21, 2024, 11:20 PM IST
Highlights

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ನಡುವೆಯೇ ನೈರುತ್ಯ ಪದವೀಧರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಅವರನ್ನು ಆಯ್ಕೆ ಮಾಡಿಕ ಆದೇಶ ಹೊರಡಿಸಲಾಗಿದೆ. 

ಬೆಂಗಳೂರು (ಮಾ.21) ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ನಡುವೆಯೇ ನೈರುತ್ಯ ಪದವೀಧರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಅವರನ್ನು ಆಯ್ಕೆ ಮಾಡಿಕ ಆದೇಶ ಹೊರಡಿಸಲಾಗಿದೆ. 

ಲೋಕಸಭಾ ಚುನಾವಣೆ ನಡುವೆಯೇ ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಉಮೇದುವಾರಿಕೆಯ ಪ್ರಸ್ತಾವನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ.

ಸುರಪುರ ಉಪಚುನಾವಣೆಗೆ ಅಭ್ಯರ್ಥಿ ಪ್ರಕಟಿಸಿದ ಕಾಂಗ್ರೆಸ್‌

ಲೋಕಸಭಾ ಚುನಾವಣೆಗೆ ಮೊದಲೇ ವಿಧಾನ ಪರಿಷತ್‌ ನೈಯತ್ಯ ಪದವೀಧರ ಕ್ಷೇತ್ರಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನಲ್ಲಿ ತೀವ್ರ ಕಸರತ್ತು ನಡೆಸಿದ್ದ ಆಯನೂರು ಮಂಜುನಾಥ್ ಮತ್ತು ಎಸ್‌ಪಿ ದಿನೇಶ್ ಇಬ್ಬರಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆಂದು ಭಾರೀ ಕುತೂಹಲ ಹುಟ್ಟಿಸಿತ್ತು. ಇಬ್ಬರೂ ಸಹ ಮಾಧ್ಯಮಗಳ ಮುಂದೆ ನನಗೆ ಟಿಕೆಟ್ ಸಿಗುತ್ತದೆ ಎಂದೇ ಹೇಳುತ್ತಿದ್ದರು. ಇಬ್ಬರು ರಾಜ್ಯ ಮತ್ತು ರಾಷ್ಟ್ರಪಟ್ಟದಲ್ಲಿ ಓಡಾಟ ನಡೆಸಿ ಟಿಕೆಟ್ ಪಡೆಯುವ ಕಸರತ್ತು ನಡೆಸಿದ್ದರು. ಇದೀಗ ಕೊನೆಗೂ ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಪ್ರಕಟಣೆ ಹೊರಡಿಸಿದೆ.

click me!