ರಾಮಮಂದಿರ ಅನ್ನೋದು ಭಾರತದ ಕೋಟ್ಯಂತರ ಮಂದಿಯ ಭಾವನಾತ್ಮಕ ಸಂಬಂಧ. ಇಂಥ ವಿಷಯದಲ್ಲಿ ರಾಜಕಾರಣ ಮಾಡ್ತೀವಿ ಅನ್ನೋದಾದ್ರೆ ಅದರಂಥ ಮೂರ್ಖತನ ಬೇರೊಂದಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ ಕಿಡಿಕಾರಿದರು.
ಹಾಸನ (ಜ.11): ರಾಮಮಂದಿರ ಅನ್ನೋದು ಭಾರತದ ಕೋಟ್ಯಂತರ ಮಂದಿಯ ಭಾವನಾತ್ಮಕ ಸಂಬಂಧ. ಇಂಥ ವಿಷಯದಲ್ಲಿ ರಾಜಕಾರಣ ಮಾಡ್ತೀವಿ ಅನ್ನೋದಾದ್ರೆ ಅದರಂಥ ಮೂರ್ಖತನ ಬೇರೊಂದಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ ಕಿಡಿಕಾರಿದರು.
ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ಕಾಂಗ್ರೆಸ್ ಹೊರಗುಳಿಯುವುದಾಗಿ ಹೇಳಿಕೆ ನೀಡಿರುವ ವಿಚಾರ ಸಂಬಂಧ ಇಂದು ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಂಸದರು, ಅಯೋಧ್ಯಾ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಎಲ್ಲ ಎಂಪಿಗಳಿಗೂ ಆಹ್ವಾನ ಕೊಟ್ಟಿದ್ದಾರೆ. ವಿಶೇಷವಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರಿಗೂ ಪ್ರಧಾನಮಂತ್ರಿಯವರು ಖುದ್ದಾಗಿ ಆಹ್ವಾನ ಕೊಟ್ಟಿದ್ದಾರೆ. ಇಂಥ ವಿಷಯದಲ್ಲಿ ರಾಜಕಾರಣ ಮಾಡಬಾರದು ನಾನಂತೂ ಖಂಡಿತವಾಗಿ ಹೋಗುತ್ತೇನೆ ಎಂದರು.
ನಾವೂ ಶ್ರೀರಾಮಚಂದ್ರನ ಭಕ್ತರು: ಅಯೋಧ್ಯಾ ಮಂದಿರ ಉದ್ಘಾಟನೆಗೆ ನಮ್ಮ ವಿರೋಧ ಇಲ್ಲ: ಸಿಎಂ
ಅಯೋಧ್ಯಾ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗುವುದು ಬಿಡುವುದು ಅವರ ಪಕ್ಷಕ್ಕೆ ಬಿಟ್ಟದ್ದು. ಅವರ ನಿರ್ಣಯ ಯಾವ ರೀತಿ ಇಂಪ್ಯಾಕ್ಟ್ ಆಗುತ್ತದೆಂದು 2024 ರ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗುತ್ತೆ ಎಂದರು.
ಇನ್ನು ಅಯೋಧ್ಯ ರಾಮಜನ್ಮಭೂಮಿ ಮಂತ್ರಾಕ್ಷತೆ ವಿಚಾರ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಂಸದರು, ಅದು ಅವರ ಅನಿಸಿಕೆ. ಹಿಂದೊಮ್ಮೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹಕಾರ ಕೊಡ್ತೇನೆ ಎಂದು ಅವರೇ ಹೇಳಿದ್ರು. ಕೇಂದ್ರ ಕಾಂಗ್ರೆಸ್ ಬೇರೆ ರೀತಿ ಹೇಳುತ್ತಿದೆ, ರಾಜ್ಯ ಕಾಂಗ್ರೆಸ್ ಬೇರೆ ರೀತಿ ಹೇಳುತ್ತಿದೆ. ಎರಡು ತಪ್ಪು ಮಾಹಿತಿ ನೀಡುತ್ತಿದೆ ಅವರಲ್ಲೇ ಗೊಂದಲಗಳಿವೆ ಎಂದರು.
ಅಯೋಧ್ಯಾ ರಾಮಮಂದಿರ ಉದ್ಘಾಟನಾ : 'ಭಾರತದ ಹಬ್ಬ' ಎಂದು ಬಣ್ಣಿಸಿದ ಎಚ್‌ಡಿ ಕುಮಾರಸ್ವಾಮಿ
I.N.D.I.A ಒಕ್ಕೂಟದಲ್ಲಿ ಒಗ್ಗಟ್ಟಿಲ್ಲ ಎಂಬುದು ಅನೇಕ ವಿಷಯಗಳಲ್ಲಿ ಎದ್ದು ಕಾಣುತ್ತಿದೆ. ನಿತಿಶ್‌ಕುಮಾರ್ ಸಭೆಯಿಂದ ಹೊರಗೆ ಹೋಗ್ತಾರೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡ್ತಿವಿ ಅಂದಾಗ ಸ್ವಪಕ್ಷದಲ್ಲೇ ಆ ಜನಾಂಗಕ್ಕೆ ಬೆಂಬಲ ಕೊಡುತ್ತಿಲ್ಲ. ಅವರ ಪರಿಸ್ಥಿತಿ ಹೀಗಿರುವಾಗ ಖಂಡಿತವಾಗಿಯೂ 2024 ರ ಲೋಕಸಭಾ ಚುನಾವಣೆಯಲ್ಲಿ ವಿಫಲರಾಗುತ್ತಾರೆ. ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.