ರಾಮಮಂದಿರ ಉದ್ಘಾಟನೆ ಒಂದು ಸ್ಟಂಟ್; ಬಿಜೆಪಿ ವಿರುದ್ಧ ಸಚಿವ ಡಿ ಸುಧಾಕರ್ ಕಿಡಿ

By Ravi Janekal  |  First Published Dec 30, 2023, 1:51 PM IST

ರಾಮಮಂದಿರ ಉದ್ಘಾಟನೆ ಬಿಜೆಪಿಯವರು ಒಂದು ಸ್ಟಂಟ್‌. ಈ ಹಿಂದಿನ ಚುನಾವಣೆ ವೇಳೆ ಪುಲ್ವಾಮಾ ಘಟನೆ ತೋರಿಸಿದ್ದರು. ಇದೀಗ ರಾಮನ ಫೋಟೊ ಹಿಡಿದಿದ್ದಾರೆ ಎಂದು ಸಚಿವ ಡಿ ಸುಧಾಕರ್ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.


ಚಿತ್ರದುರ್ಗ (ಡಿ.30): ರಾಮಮಂದಿರ ಉದ್ಘಾಟನೆ ಬಿಜೆಪಿಯವರು ಒಂದು ಸ್ಟಂಟ್‌. ಈ ಹಿಂದಿನ ಚುನಾವಣೆ ವೇಳೆ ಪುಲ್ವಾಮಾ ಘಟನೆ ತೋರಿಸಿದ್ದರು. ಇದೀಗ ರಾಮನ ಫೋಟೊ ಹಿಡಿದಿದ್ದಾರೆ ಎಂದು ಸಚಿವ ಡಿ ಸುಧಾಕರ್ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇಂದು ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸ್ಟಂಟ್ ನೋಡಿದ್ದೇವೆ. ಎರಡು ಸಲ ಮೂರ್ಖರಾಗಿದ್ದೇವೆ. ಮತ್ತೆ ಮೂರನೇ ಸಲ ಮೂರ್ಖರಾಗಲು ಜನರು ದಡ್ಡರಾಗಲ್ಲ ಎಂಬ ಭರವಸೆ ಇದೆ. ಲೋಕಸಭಾ ಚುನಾವಣೆ ಹಿನ್ನೆಲೆ ರಾಮಮಂದಿರ ಉದ್ಘಾಟನೆ ಮಾಡ್ತಿರೋದು ಎಂಬುದು ಸತ್ಯ ಎಂದರು. 

Tap to resize

Latest Videos

undefined

ಮುಂದುವರಿದ ಮಹಿಳೆಯರ 'ಶಕ್ತಿ' ಪ್ರದರ್ಶನ; ಕಂಡಕ್ಟರ್, ಡ್ರೈವರ್ ಮೇಲೆಯೇ ಮನಬಂದಂತೆ ಹಲ್ಲೆ ನಡೆಸಿದ ರೌಡಿ ಗ್ಯಾಂಗ್!

ರಾಮಮಂದಿರಕ್ಕೆ ನಾನು, ಶಾಸಕ ರಘುಮೂರ್ತಿ ದುಡ್ಡು ಕೊಟ್ಟಿದ್ದೇವೆ. ಹಿಂದೆಲ್ಲಾ ಇಟ್ಟಿಗೆ ಸಹ ನೀಡಿದ್ದೇವೆ. ರಾಮ ಎಲ್ಲರಿಗೂ ದೇವರು, ಚುನಾವಣೆ ವೇಳೆ ದೇಗುಲ ಉದ್ಘಾಟನೆ ಗಿಮಿಕ್ ಮಾಡೋದು. ಭಾರತ ದೇಶದ ಧಾರ್ಮಿಕ ನಂಬಿಕೆ ಬಳಸಿಕೊಂಡು ಬಿಜೆಪಿಯವರು ಮತ ಗಾಳ ಹಾಕುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಎಲ್ಲಿತ್ತು ರಾಮ ಮಂದಿರ? ಪುಲ್ವಾಮ ದಾಳಿಯಲ್ಲಿ ಸುಮ್ಮ ಸುಮ್ಮನೆ ಯಾವುದೋ ಫ್ಲೈಟ್ ತೋರಿಸಿದ್ದರು. ಪಾಪ ಜನ ದೇಶ ಕಾಪಾಡುತ್ತಾರೆಂದು ನಂಬಿದರು. ಪುಲ್ವಾಮಾ ಘಟನೆಯಲ್ಲಿ ಎಷ್ಟು ಜನರು ಸತ್ತರು? ಪುಲ್ವಾಮಾ ಘಟನೆ ಕ್ರಿಯೇಟೆಡ್ ಎಂದು ಪೈಲೆಟ್ ಹೇಳಿಲ್ವಾ? ಎಂದು ಪ್ರಶ್ನಿಸಿದರು.

ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಆಗಿದೆ. ಜೆಡಿಎಸ್‌ನ ಸೆಕ್ಯುಲರ್ ತತ್ವ ಎಲ್ಲಿ ಹೋಯಿತು? ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವಿದೆ ಎಂದು ಸ್ವತಃ ಅವರದೇ ಪಕ್ಷದ ಶಾಸಕ ಯತ್ನಾಳ್ ಆರೋಪ ಮಾಡಿದ್ದಾರೆ. ಇವರ ಭ್ರಷ್ಟಾಚಾರ ಎಲ್ಲಿವರೆಗೆ ನೋಡಿಕೊಂಡಿರುತ್ತಾರೆ. ನಲವತ್ತು ಪರ್ಸೆಂಟ್ ಸರ್ಕಾರ ಎಂದೇ ಕುಖ್ಯಾತಿ ಗಳಿಸಿದ್ದು ಸತ್ಯ. ಬೆಲೆ ಏರಿಕೆ, ಭ್ರಷ್ಟಾಚಾರ ನೋಡಿಯೆ ಜನ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಲೋಕಸಭಾ ಚುನಾವಣೆಗೂ ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂದರು. ಇದೇ ವೇಳೆ ಬಸವರಾಜ ರಾಯರೆಡ್ಡಿ, ಬಿ.ಆರ್.ಪಾಟೀಲ್, ದೇಶಪಾಂಡೆಗೆ ಸಚಿವ ಸ್ಥಾನಮಾನ ನೀಡಿರುವ ಬಗ್ಗೆ ಸಮರ್ಥಿಸಿಕೊಂಡರು.

ಚೆಕ್‌ಬೌನ್ಸ್ ಕೇಸ್; ಸಚಿವ ಮಧು ಬಂಗಾರಪ್ಪ ಪರ ಪ್ರಿಯಾಂಕ್ ಖರ್ಗೆ ಬ್ಯಾಂಟಿಂಗ್!

ಇನ್ನು ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ ಸರ್ಕಾರದ ಬೇಜವಾಬ್ದಾರಿತನ ಎಂಬ ಎಚ್‌ಡಿ ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿದ ಸಚಿವರು, ನಾವು ಸಹ ಶಾಲೆ ವಿದ್ಯಾರ್ಥಿ ಆಗಿದ್ದಾಗ ಕಸಗುಡಿಸಿದ್ದೇವೆ. ಆದರೆ ಮಕ್ಕಳಿಂದ ಶೌಚಗುಂಡಿ ಕ್ಲೀನ್ ಮಾಡಿಸುವುದು ಸರಿಯಲ್ಲ ಮಕ್ಕಳಿಂದ ಶೌಚಗುಂಡಿ ಕ್ಲೀನ್ ವಿಚಾರ ತಡೆಗೆ ಕ್ರಮ ಕೈಗೊಳ್ಳುತ್ತೇವೆ ಎಂದರು.

click me!