
ಉಡುಪಿ(ಜೂ.02): ಮುಖ್ಯಮಂತ್ರಿಗಳು ಸಚಿವ ನಾಗೇಂದ್ರನನ್ನು ಕರೆದು ರಾಜೀನಾಮೆ ಕೊಡಲು ಹೇಳಿದ್ದಾರಂತೆ. ಆದರೆ ನನ್ನ ರಾಜೀನಾಮೆ ಕೇಳಿದರೆ ಎಲ್ಲರ ವಿಚಾರ ಬಹಿರಂಗ ಮಾಡುತ್ತೇನೆ ಎಂದು ನಾಗೇಂದ್ರ ಬೆದರಿಸಿದ್ದಾರೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದಿಗ್ಧತೆಯಲ್ಲಿದ್ದಾರೆ. ಸಚಿವರ ರಾಜೀನಾಮೆ ಪಡೆಯಲಾಗದಷ್ಟು ಸಿದ್ದರಾಮಯ್ಯ ದುರ್ಬಲರಾಗಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ ನಡೆಸಿದರು.
ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ಮುಖ್ಯಮಂತ್ರಿಗಳ ಮಾತಿಗೂ ಮನ್ನಣೆ ಕೊಡುವುದಿಲ್ಲ. ನನ್ನದೇ ನನಗೆ ದಾರಿ ಎಂಬಂತೆ ಸಚಿವರು ವರ್ತಿಸಿದ್ದಾರೆ. ತಕ್ಷಣ ಸಚಿವರ ರಾಜೀನಾಮೆ ಪಡೆಯಲು ಮುಖ್ಯಮಂತ್ರಿಗಳಿಗೇನು ತೊಂದರೆ? ಹೀಗಾದರೆ ನಿಮ್ಮ ರಾಜೀನಾಮೆಗೂ ನಾವು ಆಗ್ರಹಿಸಬೇಕಾಗುತ್ತದೆ ಎಂದರು.
ವಾಲ್ಮೀಕಿ ನಿಗಮದ ಹಗರಣ: ಎಂಡಿ, ಅಧಿಕಾರಿ ಅರೆಸ್ಟ್
ವಾಲ್ಮೀಕಿ ನಿಗಮದ ಹಗರಣದಲ್ಲಿ ರಾಜ್ಯ ಸರ್ಕಾರ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ನಿಗಮದ ಹಣ ಹೈದರಾಬಾದ್ ಮೂಲದ ಕಂಪನಿಗಳಿಗೆ ಹೋಗಿದೆ. ಇದು ರಾಜ್ಯವನ್ನು ಮೀರಿದ ಹಗರಣವಾದ್ದರಿಂದ ಅದರ ಕುರಿತು ಸಿಬಿಐ ತನಿಖೆ ಆಗಬೇಕು ಎಂದರು. ಆದರೆ ಸರ್ಕಾರ ಎಸ್‌ಐಟಿ ನೇಮಕ ಮಾಡಿ ತನಿಖೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.