Chamarajanagar: ಇನ್ಸ್‌ಪೆಕ್ಟರ್‌ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿಕೊಟ್ಟ ಪುಟ್ಟಸ್ವಾಮಿ!

Published : Jan 09, 2023, 07:24 PM IST
Chamarajanagar: ಇನ್ಸ್‌ಪೆಕ್ಟರ್‌ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿಕೊಟ್ಟ ಪುಟ್ಟಸ್ವಾಮಿ!

ಸಾರಾಂಶ

ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಜನಮನ್ನಣೆ ಗಳಿಸಿದ್ದ ಬಿ.ಪುಟ್ಟಸ್ವಾಮಿ ತಮ್ಮ ನೌಕರಿಗೆ ರಾಜೀನಾಮೆ ಕೊಟ್ಟಿದ್ದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಅಖಾಡ ರೆಡಿ ಮಾಡಿಕೊಂಡಿದ್ದಾರೆ. 

ದೇವರಾಜು ಕಪ್ಪಸೋಗೆ

ಚಾಮರಾಜನಗರ (ಜ.09): ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಜನಮನ್ನಣೆ ಗಳಿಸಿದ್ದ ಬಿ.ಪುಟ್ಟಸ್ವಾಮಿ ತಮ್ಮ ನೌಕರಿಗೆ ರಾಜೀನಾಮೆ ಕೊಟ್ಟಿದ್ದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಅಖಾಡ ರೆಡಿ ಮಾಡಿಕೊಂಡಿದ್ದಾರೆ. ಮೈಸೂರಿನ ಐಜಿಪಿ ಕಚೇರಿಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನ ವಿಭಾಗದಲ್ಲಿ ಸದ್ಯ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಪುಟ್ಟಸ್ವಾಮಿ ಸ್ವಯಂ ನಿವೃತ್ತಿ ತೆಗೆದುಕೊಳ್ಳಲು ಉದ್ಯೋಗಕ್ಕೆ ರಾಜೀನಾಮೆ ಸಲ್ಲಿಸಿದ್ದು ಸಂಕ್ರಾಂತಿ ನಂತರ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಲಿರುವ ಮಾತುಗಳು ಕೇಳಿಬಂದಿದೆ.

ಮೈಸೂರು ನಗರದಲ್ಲಿ ಪೊಲೀಸ್‌ ಕಾನ್ಸ್‌ಟೇಬಲ್ ಆಗಿ ವೃತ್ತಿ ಆರಂಭಿಸಿ ಬಳಿಕ ಪಿಎಸ್‌ಐ ಹುದ್ದೆಗೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ರಾಮಾಪುರ, ಕೊಳ್ಳೇಗಾಲ, ಚಾಮರಾಜನಗರದಲ್ಲಿ ಪಿಎಸ್‌ಐ, ಪಿಐ ಆಗಿ ಕರ್ತವ್ಯ ನಿರ್ವಹಿಸಿದ್ದು ಜನಸ್ನೇಹಿ ಆಡಳಿತದಿಂದ ಸಾಕಷ್ಟುಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಕ್ರಮ ಮದ್ಯ ಮಾರಾಟದ ವಿರುದ್ಧ ತೆಗೆದುಕೊಂಡ ಕಠಿಣ ಕ್ರಮಗಳಿಂದ ಮಹಿಳಾ ಅಭಿಮಾನಿಗಳ ಬಳಗವು ಇವರಿಗೆ ತುಸು ಹೆಚ್ಚಿದ್ದು ಚುನಾವಣೆಯಲ್ಲಿ ಪ್ಲಸ್‌ ಪಾಯಿಂಚ್‌ ಆಗುವ ಸಾಧ್ಯತೆ ಇದೆ.

Chamarajanagar: ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸದ್ದಿಲ್ಲದೇ ಸಂಘಟನೆ: ಬಿಪಿಎಸ್‌ ಟ್ರಸ್ವ್‌ ಎಂಬ ಸಂಸ್ಥೆಯ ಮೂಲಕ ಯಾವುದೇ ಪಕ್ಷದಡಿ ಬರದೇ ಸೇವಾ ಕಾರ್ಯಗಳ ಮೂಲಕ ಜನರನ್ನು ಸಂಘಟಿಸಿ ಸಾಕಷ್ಟುಮತಗಳನ್ನು ಬುಟ್ಟಿಗೆ ಹಾಕಿಕೊಂಡಿದ್ದಾರೆ. ದೇವಾಲಯಗಳ ಜೀರ್ಣೋದ್ಧಾರ, ಆರೋಗ್ಯ ತಪಾಸಣೆ, ವಾಹನ ಲೈಸೆನ್ಸ್‌, ಕಣ್ಣಿನ ತಪಸಣಾ ಶಿಬಿರ, ರಸ್ತೆ, ವಿದ್ಯಾರ್ಥಿಗಳಿಗೆ ಬ್ಯಾಗ್‌, ಕೊರೋನಾ ಕಿಚ್‌ ಸೇರಿದಂತೆ ಹಲವು ಜನಪರ ಕಾರ್ಯಗಳ ಮೂಲಕ ಜನರ ಮನ ಗೆದ್ದಿದ್ದು ಕೊಳ್ಳೇಗಾಲದಲ್ಲಿ ಟಫ್‌ ಫೈಟ್‌ ಕೊಡಲಿರುವ ನಿರೀಕ್ಷೆ ಗರಿಗೆದರಿದೆ.

ಸಾರಾ ಬಾಯಲ್ಲಿ ಅಭ್ಯರ್ಥಿಗಳ ಹೆಸರು ಬಹಿರಂಗ: ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಅವರ ವೀಡಿಯೋಯೊಂದು ಕನ್ನಡಪ್ರಭಕ್ಕೆ ಲಭ್ಯವಾಗಿದ್ದು ಚಾಮರಾಜನಗರ ಜಿಲ್ಲೆಯ ಅಭ್ಯರ್ಥಿಗಳ ಹೆಸರು ಫೈನಲ್ ಆಗಿದೆ ಎಂದು ಹೇಳಿದ್ದಾರೆ. ಹನೂರಿಗೆ ಎಂ.ಆರ್‌.ಮಂಜುನಾಥ್‌, ಚಾಮರಾಜನಗರಕ್ಕೆ ಮುಸ್ಲಿಂ ಕೋಟದಡಿ ಜೆಡಿಎಸ್‌ ಮಾಧ್ಯಮ ವಕ್ತಾರ ಸಯ್ಯದ್‌ ಅಕ್ರಂ, ಲಿಂಗಾಯತ ಕೋಟದಡಿ ಗುಂಡ್ಲುಪೇಟೆ ಕ್ಷೇತ್ರದಿಂದ ಕಡುಬೂರು ಮಂಜುನಾಥ್‌ ಹಾಗೂ ಕೊಳ್ಳೇಗಾಲಕ್ಕೆ ಇನ್ಸ್‌ಪೆಕ್ಟರ್‌ ಬಿ.ಪುಟ್ಟಸ್ವಾಮಿ ಎಂದು ಸಾರಾ ಮಹೇಶ್‌ ಹೇಳಿದ್ದಾರೆ.

Chamarajanagar: ಕ್ರಷರ್‌ ತ್ಯಾಜ್ಯ ಘಟಕವಾದ ಹೆದ್ದಾರಿ: ಪರಿಸರ ಇಲಾಖೆ ಮೌನ

ಎಲ್ಲಾ ಕ್ಲಿಯರ್‌ ಆಗಿದೆ, ಅಣ್ಣಾ ಹೇಳಿದ್ದಾರೆ ಕೆಲಸ ಮಾಡಿ ಹೋಗೆಂದು ಹನೂರು ಜೆಡಿಎಸ್‌ ಅಭ್ಯರ್ಥಿ ಮಂಜುನಾಥ್‌ಗೆ ಸಾರಾ ಮುಖಂಡರ ನಡುವೆಯೇ ಹೇಳಿದ್ದಾರೆ. ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದ್ದು ಜೆಡಿಎಸ್‌ ರಣಕಣ ಸಿದ್ಧಪಡಿಸಿದ್ದು ಚುನಾವಣೆ ರಂಗು ಜೋರಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ