ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಸ್ಪರ್ಧೆಗಿಳಿಯುವುದು ಸೂಕ್ತ ಎಂದು ಮಾಜಿ ಬಿಜೆಪಿ ಶಾಸಕ ಜಿ.ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ.
ಬಳ್ಳಾರಿ (ಆ.25): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಸ್ಪರ್ಧೆಗಿಳಿಯುವುದು ಸೂಕ್ತ ಎಂದು ಮಾಜಿ ಬಿಜೆಪಿ ಶಾಸಕ ಜಿ.ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ. ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಪಾಲಿಕೆಯ ಪ್ರತಿಪಕ್ಷದ ನಾಯಕ ಇಬ್ರಾಹಿಂಬಾಬು ಅವರ ಕಚೇರಿ ಉದ್ಘಾಟನಾ ಸಮಾರಂಭದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಟಿಕೆಟ್ ನೀಡುವುದು ಸೂಕ್ತ ಎಂಬುದು ನನ್ನ ಭಾವನೆ.
ಈ ಕುರಿತು ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು. ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದು, ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಮುಂದುವರಿಯಲಿದ್ದಾರೆ. ದೇಶದ ಆರ್ಥಿಕ ಹಾಗೂ ಸುರಕ್ಷತಾ ದೃಷ್ಟಿಯಿಂದ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ಅಗತ್ಯವೂ ಇದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದಲ್ಲಿ ಯಾರಲ್ಲೂ ಸಹಮತವಿಲ್ಲ.
ಮಲೆನಾಡಿನಲ್ಲಿ ಜನರ ನಿದ್ದೆಗೆಡಿಸಿದ ಜೀರುಂಡೆ ಸದ್ದು: ಜನರು ಹೈರಾಣು
ಹೀಗಾಗಿ ಬಿಜೆಪಿ ನೇತೃತ್ವದಲ್ಲಿ ಕೇಂದ್ರದಲ್ಲಿ ಮತ್ತೆ ಸರ್ಕಾರ ಬರುವುದು ಖಚಿತ ಎಂದರು. ನನ್ನ ರಕ್ತದ ಕಣಕಣದಲ್ಲೂ ಬಿಜೆಪಿಯಿದೆ. ಅದನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ನಾನು ಮಾಜಿ ಶಾಸಕ. ಡಿಕೆಶಿ ಅವರನ್ನು ಭೇಟಿ ಮಾಡಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಕೆಲಸವಿತ್ತು. ಹೀಗಾಗಿ ಅವರನ್ನು ಭೇಟಿ ಮಾಡಿದ್ದೆ. ಕಾಂಗ್ರೆಸ್ ಸೇರ್ಪಡೆ ಎನ್ನುವುದು ಕನಸಿನಲ್ಲೂ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್‌ನ ಗ್ಯಾರಂಟಿಗಳಿಂದ ನಮಗೆ ಸೋಲಾಗಿದೆ. ಆದರೆ, ನಾಡಿನ ಮತದಾರರ ಮನಸ್ಸು ಗೆದ್ದಿದ್ದೇವೆ. ನಮ್ಮ ಕೆಲಸಗಳು ಗೆದ್ದಿವೆ ಎಂದರು.
ನಾವಿಕನಿಲ್ಲದೆ ಬಿಜೆಪಿ ದೋಣಿ ಅಲುಗಾಡುತ್ತಿದೆ: ಸಚಿವ ಕೃಷ್ಣ ಭೈರೇಗೌಡ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೇರೆ ಪಕ್ಷವನ್ನು ಬೆಂಬಲಿಸಿದ್ದ ಪಾಲಿಕೆ ಸದಸ್ಯರು ಮತ್ತೆ ಪಕ್ಷಕ್ಕೆ ಸೇರುವ ವಿಚಾರದಲ್ಲಿ ನನ್ನ ವಿರೋಧವಿದೆ. ಈ ಕುರಿತು ಪಕ್ಷದ ಹಿರಿಯ ಮುಖಂಡರೇ ತೀರ್ಮಾನಿಸಲಿದ್ದಾರೆ ಎಂದು ಸೋಮಶೇಖರ ರೆಡ್ಡಿ ಹೇಳಿದರು. ಪಕ್ಷದ ಹಿರಿಯ ಮುಖಂಡರಾದ ಗುತ್ತಿಗನೂರು ವಿರುಪಾಕ್ಷಗೌಡ, ಕೆ.ಎ. ರಾಮಲಿಂಗಪ್ಪ ಇದ್ದರು.