ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ದಿಢೀರ್ ರಾಜೀನಾಮೆ: ಅಚ್ಚರಿ ಮೂಡಿಸಿದ ಬಿಎಸ್‌ವೈ ಆಪ್ತನ ನಡೆ

Published : Sep 27, 2021, 11:39 PM IST
ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ದಿಢೀರ್ ರಾಜೀನಾಮೆ: ಅಚ್ಚರಿ ಮೂಡಿಸಿದ ಬಿಎಸ್‌ವೈ ಆಪ್ತನ ನಡೆ

ಸಾರಾಂಶ

* ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ದಿಢೀರ್ ರಾಜೀನಾಮೆ * ಅಚ್ಚರಿ ಮೂಡಿಸಿದ ಬಿಎಸ್‌ವೈ ಆಪ್ತ ಸುರೇಶ್ ಗೌಡ ದಿಢೀರ್ ರಾಜೀನಾಮೆ * ರಾಜೀನಾಮೆ ಬಗ್ಗೆ ಸಾಮಾಜಿಕ ಜಾಲತಾಣಗಳ ಮಾಹಿತಿ ನೀಡಿದ ಸುರೇಶ್ ಗೌಡ *ಕಳೆದ ಒಂದುವರೆ ವರ್ಷದಿಂದ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದ ಮಾಜಿ ಶಾಸಕ ಸುರೇಶ್ ಗೌಡ

ತುಮಕೂರು, (ಸೆ.27): ತುಮಕೂರು (Tumakuru) ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಮಾಜಿ ಶಾಸಕ ಬಿ. ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ.

ದಿಢೀರ್ ಅಂತ ತುಮಕೂರು ಜಿಲ್ಲಾ ಬಿಜೆಪಿ(BJP) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಇಂದು (ಸೆ.27) ಸುರೇಶ್ ಗೌಡ (Suresh Gowda) ಅವರು ಸಾಮಾಜಿಕ ಜಾಲತಾಣಗಳ ಮಾಹಿತಿ ನೀಡಿದ್ದು, ಜನರು ತೋರಿಸಿದ ಪ್ರೀತಿ, ಕೊಟ್ಟ ಸಹಕಾರಕ್ಕೆ ಧನ್ಯವಾದ ಸಲ್ಲಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. 

'ಬಿಜೆಪಿಗೆ ಅತೀ ಹೆಚ್ಚು ಸ್ಥಾನದ ವಿಶ್ವಾಸ : ಮೋದಿ ಬೆಂಬಲಿಸಲು ಪೋಸ್ಟ್ ಕಾರ್ಡ್ ಅಭಿಯಾನ'

ಕಳೆದ ಒಂದುವರೆ ವರ್ಷದಿಂದ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದ ಮಾಜಿ ಶಾಸಕ ಸುರೇಶ್ ಗೌಡ ಅವರ ನಡೆ ಅಚ್ಚರಿ ಮೂಡಿಸಿದೆ. ಸುರೇಶ್ ಗೌಡ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರಿಸಿಕೊಂಡವರು.

ಸುರೇಶ್ ಗೌಡ ಅವರ ಫೇಸ್ಬುಕ್ ಪೋಸ್ಟ್
ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ. ಜಿಲ್ಲೆಯ ಜನರ ಸಹಕಾರಕ್ಕೆ ಧನ್ಯವಾದ ಪಕ್ಷದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ಇಂದು ರಾಜೀನಾಮೆ ನೀಡಿದ್ದು, ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ. 

ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭಾ ಚುನಾವಣೆ ಜತೆಗೆ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಒಂದಾಗಿತ್ತು. ಇದಕ್ಕೆಲ್ಲ ನನ್ನ ಗ್ರಾಮಾಂತರ ಕ್ಷೇತ್ರದ ಜನರ ಆರ್ಶೀವಾದ, ಕೊಟ್ಟ ಸಹಕಾರ, ಧೈರ್ಯವೇ ಕಾರಣ, ಈ ಸಂದರ್ಭದಲ್ಲಿ ನನ್ನ ಈ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ.

ಜಿಲ್ಲಾ ಘಟಕದ ಅಧ್ಯಕ್ಷನಾದ ಮೇಲೆ ಪಕ್ಷದ ಕೆಲಸಗಳ ಕಾರಣ ನನ್ನ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ ಎಂಬ ಕೊರಗು ಸದಾ ನನ್ನನ್ನು ಕಾಡುತ್ತಿತ್ತು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ. ಕೋವಿಡ್ ನಿಂದ ಆರ್ಥಿಕ ಹಿಂಜರಿತ, ನೀರಾವರಿ ಸಮಸ್ಯೆಯಿಂದ ಜನರು ಅನುಭವಿಸುತ್ತಿರುವ ಬವಣೆ, ಶಿಕ್ಷಣದ ಗುಣಮಟ್ಟದ ಕುಸಿತದಿಂದ ಕ್ಷೇತ್ರದ ಮಕ್ಕಳು ಅನುಭವಿಸುತ್ತಿರುವ ಯಾತನೆಯ ಹಿನ್ನೆಲೆಯಲ್ಲಿ ಅವರೊಂದಿಗೆ ಸದಾ ಸಮಯ ಇರಬೇಕೆಂದು ಮನಸ್ಸು ಹೇಳುತ್ತಿತ್ತು.

ನನ್ನ ಕ್ಷೇತ್ರದ ಜನರೇ ನನಗೆ ಎಲ್ಲವೂ ಆಗಿರುವುದರಿಂದ ಅವರೊಂದಿಗೆ ಇರಲು ರಾಜೀನಾಮೆ ನಿರ್ಧಾರ ಮಾಡಿದೆ ಎಂಬುದನ್ನು ನನ್ನ ಕ್ಷೇತ್ರದ ಜನರಿಗೆ ಈ ಮೂಲಕ ತಿಳಿಸಲು ಬಯಸುತ್ತೇನೆ. ಜಿಲ್ಲಾ ಘಟಕದ ಅಧ್ಯಕ್ಷನಾಗಿದ್ದಾಗ ಜಿಲ್ಲೆಯ ಮೂಲೆಮೂಲೆಗಳಿಂದ ಎಲ್ಲಾ ಜಾತಿಗಳ, ಧರ್ಮಗಳ ಜನರು ನನಗೆ ತೋರಿಸಿದ ಪ್ರೀತಿ, ಕೊಟ್ಟ ಸಹಕಾರಕ್ಕೆ ಧನ್ಯವಾದವನ್ನು ಈ ಮೂಲಕ ಅರ್ಪಿಸುತ್ತಿದ್ದೇನೆ. ಇದೇ ರೀತಿಯ ಪ್ರೀತಿ, ಹಾರೈಕೆ, ಬೆಂಬಲ ಇನ್ನೂ ಮುಂದೆಯೂ ನೀಡುವಂತೆ ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದು ಫೇಸ್ ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ