ಹಿರಿಯರ ಹಸ್ತಕ್ಷೇಪ: ಯುವ ಕಾಂಗ್ರೆಸ್‌ ಎಲೆಕ್ಷನ್‌ ರದ್ದು..?

Kannadaprabha News   | Asianet News
Published : Jan 22, 2021, 10:21 AM ISTUpdated : Jan 22, 2021, 10:39 AM IST
ಹಿರಿಯರ ಹಸ್ತಕ್ಷೇಪ: ಯುವ ಕಾಂಗ್ರೆಸ್‌ ಎಲೆಕ್ಷನ್‌ ರದ್ದು..?

ಸಾರಾಂಶ

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹಿರಿಯ ನಾಯಕರ ಹಸ್ತಕ್ಷೇಪಕ್ಕೆ ಹೈಕಮಾಂಡ್‌ ಬೇಸರ| ಚುನಾವಣೆಯನ್ನು ರದ್ದುಪಡಿಸುವ ಮನಸ್ಥಿತಿ ಹೈಕಮಾಂಡ್‌ಗೆ ಇಲ್ಲ| ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಆಯ್ಕೆ ನಡೆಯಬೇಕು ಎಂಬುದೇ ಹೈಕಮಾಂಡ್‌ನ ನಿಲುವು: ಬಿ.ವಿ. ಶ್ರೀನಿವಾಸ್‌| 

ಬೆಂಗಳೂರು(ಜ.22):  ಯುವ ಕಾಂಗ್ರೆಸ್‌ ಚುನಾವಣೆಯಲ್ಲಿ ಹಿರಿಯ ನಾಯಕರು ಮೂಗು ತೂರಿಸುವ ಘಟನೆಗಳು ರಾಜ್ಯವೂ ಸೇರಿದಂತೆ ದೇಶಾದ್ಯಂತ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಚುನಾವಣಾ ಪ್ರಕ್ರಿಯೆಯನ್ನೇ ರದ್ದುಗೊಳಿಸಲು ಹೈಕಮಾಂಡ್‌ ಮುಂದಾಗಿದೆ ಎಂಬ ದಟ್ಟವದಂತಿ ಹಬ್ಬಿದೆ.

ಆದರೆ, ಇದನ್ನು ಸ್ಪಷ್ಟವಾಗಿ ಅಲ್ಲಗಳೆಯುವ ಅಖಿಲ ಭಾರತೀಯ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಕನ್ನಡಿಗ ಬಿ.ವಿ. ಶ್ರೀನಿವಾಸ್‌ ಅವರು ಇಂತಹ ಯಾವ ಚಿಂತನೆಯೂ ಹೈಕಮಾಂಡ್‌ ಮಟ್ಟದಲ್ಲಿ ಇಲ್ಲ ಎಂದು ಹೇಳುತ್ತಾರೆ. ಇತ್ತೀಚೆಗೆ ರಾಜ್ಯದಲ್ಲಿ ನಡೆದಿದ್ದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಸ್ಥಾನ ಅಭ್ಯರ್ಥಿಗಳ ಪರ ಹಿರಿಯ ನಾಯಕರು ಪ್ರಚಾರದಲ್ಲಿ ತೊಡಗಬಾರದು ಎಂಬುದು ಚುನಾವಣೆಯ ನಿಯಮವಾಗಿತ್ತು. ಆದರೆ, ರಾಜ್ಯದಲ್ಲಿ ಕೆಲ ನಾಯಕರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು ಎಂದು ಆರೋಪಿಸಲಾಗಿದೆ.

ರೈಲು ನಿಲ್ಲಿಸುವ ತಾಕತ್ತು ಇಲ್ಲದ ಬಿಜೆಪಿ ಜನನಾಯಕರು: ಪ್ರಿಯಾಂಕ್‌ ಖರ್ಗೆ

ಈ ಬಗ್ಗೆ ಕೆಲ ಅಭ್ಯರ್ಥಿಗಳು ದೆಹಲಿಗೆ ತೆರಳಿ ರಾಜ್ಯ ನಾಯಕರ ಬಗ್ಗೆ ದೂರು ನೀಡಿದ್ದಾರೆ ಎಂದೂ ಹೇಳಲಾಗಿದೆ. ಇದೇ ರೀತಿಯ ಪ್ರಕರಣಗಳು ದೇಶದ ಇತರ ರಾಜ್ಯಗಳಲ್ಲೂ ನಡೆದಿವೆ. ಈ ಬಗ್ಗೆ ವ್ಯಾಪಕ ದೂರು ಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಚುನಾವಣೆ ಪ್ರಕ್ರಿಯೆಯನ್ನೇ ರದ್ದುಪಡಿಸಿ ಹೈಕಮಾಂಡ್‌ ಮೂಲಕ ನೇರ ನೇಮಕ ಪದ್ಧತಿ ಜಾರಿಗೆ ತರುವ ಮನಸ್ಸು ಮಾಡಿದೆ ಎಂದು ರಾಜ್ಯ ಯುವ ಕಾಂಗ್ರೆಸ್‌ ವಲಯದಲ್ಲಿ ಹಬ್ಬಿಸಲಾಗಿದೆ.

ಆದರೆ, ಇದನ್ನು ಸ್ಪಷ್ಟವಾಗಿ ನಿರಾಕರಿಸುವ ಬಿ.ವಿ.ಶ್ರೀನಿವಾಸ್‌, ಯುವ ಕಾಂಗ್ರೆಸ್‌ನ ವಿವಿಧ ಹುದ್ದೆಗಳಿಗೆ ಚುನಾವಣೆ ಮೂಲಕವೇ ಸಮರ್ಥರು ಆಯ್ಕೆಯಾಗಬೇಕು ಎಂಬುದು ರಾಹುಲ್‌ ಗಾಂಧಿ ಅವರ ಆಕಾಂಕ್ಷೆ. ಚುನಾವಣೆಯಲ್ಲಿ ಕೆಲ ವ್ಯತ್ಯಾಸಗಳು ನಡೆಯುತ್ತವೆ ಎಂದು ಚುನಾವಣೆಯನ್ನು ರದ್ದುಪಡಿಸುವ ಮನಸ್ಥಿತಿ ಹೈಕಮಾಂಡ್‌ಗೆ ಇಲ್ಲ. ಸಾಧ್ಯವಾದಷ್ಟು ಪಾರದರ್ಶಕವಾಗಿ ಹಾಗೂ ಪ್ರಜಾಸತ್ತಾತ್ಮಕವಾಗಿ ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಆಯ್ಕೆ ನಡೆಯಬೇಕು ಎಂಬುದೇ ಹೈಕಮಾಂಡ್‌ನ ನಿಲುವು. ಇದರಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಕ್ತಿ ಯೋಜನೆಯಡಿ 600 ಕೋಟಿಗೂ ಹೆಚ್ಚು ಮಹಿಳೆಯರ ಬಸ್ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
ಡಿ.ಕೆ.ಶಿವಕುಮಾರ್‌ ಒಂದು ಬಾರಿ ಸಿಎಂ ಆಗೇ ಆಗುತ್ತಾರೆ: ಶಾಸಕ ಎಸ್‌.ಟಿ.ಸೋಮಶೇಖರ್‌