
ಬೆಂಗಳೂರು (ಅ.31): ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಶುಕ್ರವಾರಕ್ಕೆ ಅಂತ್ಯವಾಗಲಿದೆ. ಅವಧಿ ವಿಸ್ತರಣೆಯ ನಿರ್ಧಾರ ಆಗಿಲ್ಲ. ಆನ್‌ಲೈನ್‌ನಲ್ಲಿ ಮಾಹಿತಿ ನೀಡುವವರಿಗೆ ನ.10 ವರೆಗೆ ಅವಕಾಶ ನೀಡಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರದ ಅಂತ್ಯಕ್ಕೆ ರಾಜ್ಯದಲ್ಲಿ (ಬೆಂಗಳೂರು ನಗರ ಹೊರತುಪಡಿಸಿ) 1,46,53,638 ಮನೆಗಳು ಹಾಗೂ 5,52, 57,205 (ಶೇ.101) ಜನರ ಸಮೀಕ್ಷೆ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಶೇ.48.32 ಸಮೀಕ್ಷೆ ಮುಗಿದೆ. ಇದಕ್ಕೆ ಕೆಲ ತಾಂತ್ರಿಕ ಕಾರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ ವಾಸವಾಗಿರುವರು ಬಹುತೇಕರು ಹೊರ ಜಿಲ್ಲೆಯಿಂದ ಬಂದವರಾಗಿದ್ದಾರೆ. ಸ್ವಂತ ಊರಿನಲ್ಲಿ ಮಾಹಿತಿ ಕೊಟ್ಟಿದ್ದು, ಬಾಡಿಗೆ ಮನೆಯಲ್ಲಿ ಕೊಡಲು ನಿರಾಕರಿಸಿರುವುದು ಕಂಡು ಬಂದಿದೆ ಎಂದು ತಿಳಿಸಿದರು. ಅಲ್ಲದೆ, ವಿದ್ಯುತ್ ಮೀಟರ್ ಸಹ ಹೆಚ್ಚಿಗೆ ಇರುವ ಪರಿಣಾಮ ಶೇಕಡಾವಾರು ಪ್ರಮಾಣ ಕಡಿಮೆ ತೋರಿಸುತ್ತಿದೆ. ಯಾಕೆ ಸಮೀಕ್ಷೆ ಕಡಿಮೆಯಾಗಿದೆ ಎಂಬ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ಶುಕ್ರವಾರ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ವಿವರಿಸಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶುಕ್ರವಾರ ಅಂತ್ಯವಾದರೂ ವಿವಿಧ ಕಾರಣದಿಂದ ಸಮೀಕ್ಷೆಯಲ್ಲಿ ಭಾಗವಹಿಸದವರಿಗೆ ಆನ್‌ಲೈನ್ ಮೂಲಕ ಸ್ವಯಂ ಮಾಹಿತಿ ನೀಡಲು ನ.10ರ ವರೆಗೆ ಅವಕಾಶ ನೀಡಲಾಗಿದೆ.ಆನ್‍ಲೈನ್ https://kscbcselfdeclaration.karnataka.gov.in ಲಿಂಕ್ ಮೂಲಕ ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.