ಮೋದಿ ಗ್ಯಾರಂಟಿ ಮುಂದೆ ಕಾಂಗ್ರೆಸ್‌ ಆಟ ನಡೆಯಲ್ಲ: ವೀರಣ್ಣ ಚರಂತಿಮಠ

Published : May 09, 2024, 06:00 AM IST
ಮೋದಿ ಗ್ಯಾರಂಟಿ ಮುಂದೆ ಕಾಂಗ್ರೆಸ್‌ ಆಟ ನಡೆಯಲ್ಲ: ವೀರಣ್ಣ ಚರಂತಿಮಠ

ಸಾರಾಂಶ

ಕಾಂಗ್ರೆಸ್ ಈ ಸಾರಿ ಚುನಾವಣೆಯಲ್ಲಿ ಜಾತಿ ಸಮೀಕರಣ ಮಾಡಿದರೂ ನಮ್ಮ ಜಿಲ್ಲೆಯಲ್ಲಿ ವರ್ಕೌಟ್‌ ಆಗಿಲ್ಲ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಂಸದ ಪಿ.ಸಿ.ಗದ್ದಿಗೌಡರ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ ಎಂದ ಮಾಜಿ ಶಾಸಕ ವೀರಣ್ಣ ಚರಂತಿಮಠ

ಬಾಗಲಕೋಟೆ(ಮೇ.09):  ಪ್ರಧಾನ ಮಂತ್ರಿ ನರೇಂದ್ರ ಮೋದಿ ಗ್ಯಾರಂಟಿ ವೇಗದಲ್ಲಿ ಕಾಂಗ್ರೆಸ್ ಗ್ಯಾರಂಟಿ ಆಟ ನಡೆದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿ ಜನ ನಂಬಿ ಮತ ಹಾಕಿದ್ದರು. ಆದರೇ ಒಂದು ವರ್ಷದಲ್ಲಿ ಅದರ ಮರ್ಮ ಅರಿತು ಲೋಕಸಭೆ ಚುನಾವಣೆಗೆ ಮೋದಿ ಗ್ಯಾರಂಟಿಗೆ ಜನ ಉತ್ತಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕಳೆದ ಚುನಾವಣೆಗಿಂತ ಈ ಸಾರಿ ಗದ್ದಿಗೌಡರ ಅತೀ ಹೆಚ್ಚು ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈ ಸಾರಿ ಚುನಾವಣೆಯಲ್ಲಿ ಜಾತಿ ಸಮೀಕರಣ ಮಾಡಿದರೂ ನಮ್ಮ ಜಿಲ್ಲೆಯಲ್ಲಿ ವರ್ಕೌಟ್‌ ಆಗಿಲ್ಲ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಂಸದ ಪಿ.ಸಿ.ಗದ್ದಿಗೌಡರ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ ಎಂದರು.

ಗೂಂಡಾಗಿರಿ ಸಂಸ್ಕೃತಿಯ ಕಾಂಗ್ರೆಸ್‌ಗೆ ಮತ ನೀಡಬೇಡಿ: ಮಾಜಿ ಸಚಿವ ಎಸ್‌ಕೆ ಬೆಳ್ಳುಬ್ಬಿ ಮನವಿ

ಕ್ಷೇತ್ರದಲ್ಲಿ ಬಿರು ಬಿಸಿಲಿನಲ್ಲಿಯೂ ಮತದಾರರು ವಯೋವೃದ್ಧರು, ಅಂಗವಿಕಲರು, ಯುವಕರು, ಯುವತಿಯರು ತಮ್ಮ ಮತದಾನದ ಹಕ್ಕನ್ನು ಮತಗಟ್ಟೆಗೆ ಬಂದು ಚಲಾಯಿಸಿದ್ದಾರೆ. ಇದು ಖುಷಿ ನೀಡಿದ್ದು, ಕಾರ್ಯಕರ್ತರು, ಪದಾಧಿಕಾರಿಗಳು, ಮುಖಂಡರು ಅವಿರತವಾಗಿ ಶ್ರಮಿಸಿದ್ದಾರೆ. ಇದರಿಂದ ಬಿಜೆಪಿ ಗೆಲುವು ನಿಶ್ಚಿತ ಎಂದು ಹರ್ಷ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಬಿದ್ದಿದ್ದರೂ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ. ಜಿಲ್ಲೆಯಲ್ಲಿ ಖಾಸಗಿ ಟ್ಯಾಂಕರ್‌ ಮೂಲಕ ಜನರು ನೀರು ಪೂರೈಕೆ ಮಾಡಿಕೊಳ್ಳುತ್ತಿದ್ದಾರೆ. ವಿದ್ಯುತ್‌ ಪೂರೈಕೆಯಲ್ಲಿ ವಿಫಲವಾಗಿದೆ. ರಾಜ್ಯ ಸರ್ಕಾರವು ಗ್ಯಾರಂಟಿ ಬಿತ್ತರಿಸುತ್ತಾ ಬರಗಾಲ ಕಾಮಗಾರಿ ಮರೆತಿದೆ. ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ರೇಸಾರ್ಟ್‌ ಪ್ರವಾಸ ಆರಂಭಿಸಿದ್ದಾರೆ. ಬಾಗಲಕೋಟೆ ನಗರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ. ಬಿಟಿಡಿಎ ಕಾರ್ಪಸ್ ಫಂಡ್ ₹384 ಕೋಟಿ ವಾಪಸ್ ಬರಲಿಲ್ಲ. ಹೊಸ ಕಾಮಗಾರಿಗಳು ಆರಂಭವಾಗಿಲ್ಲ. ಮೋದಿ ಟೀಕೆ ಮಾಡುವದರಲ್ಲಿ ಕಾಂಗ್ರೆಸ್ ಕಾಲ ಕಳೆದಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌
ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌