
ಬೆಳಗಾವಿ, (ಜುಲೈ.18): ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಕೋವಿಡ್-19 ತಗುಲಿರುವುದು ಶನಿವಾರ ದೃಢಪಟ್ಟಿದೆ. ಸದ್ಯ ಅವರನ್ನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನದ ಹಿಂದಷ್ಟೇ ಶಾಸಕ ಕೌಜಲಗಿ ಅವರು ತಾಲೂಕು ಮಟ್ಟದ ಕೋವಿಡ್ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದು, ಅವರ ಸಂಪರ್ಕದಲ್ಲಿದ್ದ ಅಧಿಕಾರಿಗಳಿಗೆ ಆತಂಕ ಶುರುವಾಗಿದೆ.
ಕೊರೋನಾದಿಂದ ಗುಣಮುಖರಾದ ಶಾಸಕ ಶರತ್ ಬಚ್ಚೇಗೌಡ: ಜನರಿಗೆ ಕಿವಿಮಾತು..!
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ತಾಲ್ಲೂಕು ವೈದ್ಯಾಧಿಕಾರಿ ಡಾ.ಎಸ್.ಎಸ್. ಸಿದ್ದಣ್ಣವರ, ಶಾಸಕರು ಗುರುವಾರ ನಡೆಸಿದ್ದ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದ ಚನ್ನಮ್ಮನ ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಸೇರಿದಂತೆ 20ಕ್ಕೂ ಹೆಚ್ಚು ಅಧಿಕಾರಿಗಳಿಗೆ ಹೋಮ್ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ ಎಂದು ತಿಳಿಸಿದರು.
ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಅವರಿಗೂ ಸಹ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಮತ್ತು ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿ ಕೂಡ ಕೊರೋನಾದಿಂದ ಗುಣಮುಖರಾಗಿದ್ದು, ಇನ್ನು ಕೆಲ ಶಾಸಕರು ಮತ್ತು ಸಂಸದರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.