ಬಜರಂಗದಳ ಬ್ಯಾನ್‌ ವಿಚಾರ ಪಕ್ಷದ ವೇದಿಕೆಯಲ್ಲಿ ಚರ್ಚಿಸುವೆ: ಜಗದೀಶ್‌ ಶೆಟ್ಟರ್‌

By Kannadaprabha NewsFirst Published May 5, 2023, 12:25 PM IST
Highlights

ಬಜರಂಗದಳ ಬ್ಯಾನ್‌ ವಿಚಾರವಾಗಿ ನಾನು ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇನೆ ಹೊರತು ಹೊರಗಡೆ ಏನೂ ಹೇಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕ ಜಗದೀಶ್‌ ಶೆಟ್ಟರ್‌ ಹೇಳಿದರು.
 

ಗದಗ (ಮೇ.05): ಬಜರಂಗದಳ ಬ್ಯಾನ್‌ ವಿಚಾರವಾಗಿ ನಾನು ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇನೆ ಹೊರತು ಹೊರಗಡೆ ಏನೂ ಹೇಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕ ಜಗದೀಶ್‌ ಶೆಟ್ಟರ್‌ ಹೇಳಿದರು. ಗದಗ ಜಿಲ್ಲೆಯ ನರಗುಂದ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯ ಪರ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿ, ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದೆ, ಈ ಬಗ್ಗೆ ನಾನು ಯಾ ವುದೇ ರೀತಿಯ ಬಹಿರಂಗ ಹೇಳಿಕೆ ಕೊಡುವುದಿಲ್ಲ. ಆದರೆ ಪಕ್ಷದ ವೇದಿಕೆಯಲ್ಲಿ ಇದರ ಬಗ್ಗೆ ಚರ್ಚಿಸುತ್ತೇನೆ ಎಂದರು.

ಪಕ್ಷದ ಹಿರಿಯ ನಾಯಕರಾದ ವೀರಪ್ಪ ಮೊಯ್ಲಿ ಅವರು, ಬಜರಂಗ ದಳ ಬ್ಯಾನ್‌ ಮಾಡಲ್ಲ. ಬ್ಯಾನ್‌ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲದಿರುವಾಗ ಏಕಾಏಕಿ ಬ್ಯಾನ್‌ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಣಾಳಿಕೆಯಲ್ಲಿ ಸಾಕಷ್ಟುವಿಚಾರಗಳಿವೆಳ. ಬೇರೆ ವಿಷಯಗಳ ಬಗ್ಗೆ ಚರ್ಚೆ ಮಾಡೋಣ. ಹಾಗೆ ಬ್ಯಾನ್‌ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇರುವಂಥದ್ದು ಎಂದು ಈಗಾಗಲೇ ಹಿರಿಯರು ಹೇಳಿದ್ದಾರೆ. ಅದರ ಮೇಲೆ ಹೆಚ್ಚಿನ ಚರ್ಚೆ ಮಾಡಲ್ಲ ಎಂದಷ್ಟೆಹೇಳಿದರು.

ಸಿದ್ಧಗಂಗಾ ಶ್ರೀಗಳು ಕೊಟ್ಟ ವಾಚ್‌ ಧರಿಸಿ ಸಿಎಂ ಬೊಮ್ಮಾಯಿ ಪ್ರಚಾರ

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ: ಕಳೆದ ಮೂವತ್ತು ವರ್ಷಗಳಿಂದ ಬಿಜೆಪಿಯಲ್ಲಿ ದುಡಿದಿದ್ದೇನೆ. ಆದರೆ ಬಿಜೆಪಿಯಯವರಿಗೆ ಸೀನಿಯರ್‌ ಲೀಡರ್‌ಗಳ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಆರೋಪಿಸಿದರು. ನಗರದ ಮಹಾಂತೇಶ ನಗರದ ಮಹಾಂತ ಭವನದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ದಿ.ಸುರೇಶ ಅಂಗಡಿ ಮತ್ತು ನಾನು ಕಾರ್ಯಕರ್ತರನ್ನು ಒಗ್ಗೂಡಿಸಿ ಬೆಳೆಸುವ ಕಾರ್ಯ ಮಾಡಿದ್ದೆವು. ಆದರೆ, ಬಿಜೆಪಿ ನಾಯಕರು ಯಾವುದನ್ನು ನೆನಪಿಡದೇ ನನ್ನ ಹಿಂದೆ ಹಾಕಿದರು. 

ಗೂಂಡಾಗಿರಿ ಭ್ರಷ್ಟಾಚಾರ ಮಾಡದೆ ಯಾವುದೇ ಕಳಂಕ ಇಲ್ಲದ ನನಗೆ ಟೀಕೆಟ್‌ ಕೊಡದ ಬಿಜೆಪಿಯು ಕ್ರಿಮಿನಲ್‌ಗಳಿಗೆ ಟಿಕೆಟ್‌ ಕೊಟ್ಟಿದ್ದಾರೆ ಎಂದು ಕಿಡಿ ಕಾರಿದರು. ಬಿಜೆಪಿಯ ತತ್ವ ಸಿದ್ಧಾಂತಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿವೆ. ಕಾಂಗ್ರೆಸ್‌ ನೊಂದವರ ಧ್ವನಿಯಾಗಲಿದೆ. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಹೊರಬಂದು ಕಾಂಗ್ರೆಸ್‌ ಸೇರಿದೆ. ಕಾಂಗ್ರೆಸ್‌ ಉತ್ತಮ ಸ್ಥಾನ ಕೊಟ್ಟಿದೆ. ಈ ಬಾರಿ ರಾಜ್ಯದ 130ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವ ಮೂಲಕ ಸ್ಪಷ್ಟಬಹುಮತದೊಂದಿಗೆ ಕಾಂಗ್ರೆಸ್‌ ಸರ್ಕಾರ ರಚನೆಯಾಗಲಿದೆ ಎಂದರು.

ಬಜರಂಗದಳವಲ್ಲ, ಕಾಂಗ್ರೆಸ್ಸೇ ಬ್ಯಾನ್‌ ಆಗುತ್ತೆ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್‌ ಅಭ್ಯರ್ಥಿ ಆಸೀಫ್‌ ಸೇಠ್‌ ಮಾತನಾಡಿದರು. ಮಾಜಿ ಸಚಿವ ಶಶಿಕಾಂತ ನಾಯಕ, ಮಾಜಿ ಶಾಸಕ ಫಿರೋಜ್‌ ಸೇಠ್‌, ವಿ.ಎಸ್‌.ಸಾಧುನವರ, ಅಶೋಕ ಸದಲಗಿ, ಸಂಜಯ ಪಟ್ಟಣಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

click me!