
ಬೆಂಗಳೂರು(ಆ.14): ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯರಿಲ್ಲದೆ ಕ್ಯಾಬಿನೆಟ್ ಮೀಟಿಂಗ್ ನಡೆಯುತ್ತಿದೆ. ರಾಜ್ಯದ ತಾಯಂದಿರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲ, ದೇಶದಲ್ಲಿ ಶೇ.50 ರಷ್ಟು ಮಹಿಳೆಯರಿದ್ದಾರೆ. ಮಹಿಳೆಯರಿ ಸಮಪಾಲು ನೀಡಬೇಕು. ಪ್ರಧಾನಿ ಮೋದಿಯವರು ಮಹಿಳೆಯರಿಗೆ ಮೀಸಲಾತಿ ಕೊಡಲು ಹೋದರೆ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದರು. ಇಲ್ಲೀಗ ಮಹಿಳೆಯರಿಗೆ ಸಚಿವ ಸ್ಥಾನ ಇಲ್ಲ, ಮೀಸಲಾತಿ ನೀಡಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸಚಿವ ಸಂಪುಟ ವಿಸ್ತರಣೆ ವೇಳೆ ಮಹಿಳೆಯ ಹೆಸರನ್ನು ಘೋಷಣೆ ಮಾಡಿ ಕೊನೆಗೆ ಕೈಬಿಟ್ಟಿದ್ದಾರೆ. ಆ ಮೂಲಕ ರಾಜ್ಯದ ಮಹಿಳೆಯರಿಗೆ ಅಪಮಾನ ಮಾಡುವ ಕೆಲಸ ಸಿಎಂ ಡಿಕೆ ಶಿವಕುಮಾರ್ ಮಾಡಿದ್ದಾರೆ. ಮಹಿಳೆಯರಿಲ್ಲದೆ ಸಚಿವ ಸಂಪುಟ ಸಭೆ ನಡೆತಿರೋದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು ಎಂದರು.
ಇನ್ನು ಆರೆಸ್ಸೆಸ್ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಹೇಳಿಕೆ ಪ್ರಸ್ತಾಪಿಸಿದ ವಿಜಯೇಂದ್ರ ಅವರು, ಸಿಎಂ ಆಗಲಿ, ಪ್ರಿಯಾಂಕ್ ಖರ್ಗೆ ಅವರಿಗೆ ನಾನು ನೇರವಾಗಿ ಸವಾಲು ಹಾಕುತ್ತೇನೆ. ನಿಮಗೆ ತಾಕತ್ತು ಇದ್ರೆ ಆರೆಸ್ಸೆಸ್ ಬ್ಯಾನ್ ಮಾಡಿ ನೋಡೋಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಿಯಾಂಕ್ ಖರ್ಗೆ ತಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆಯಾಗಲಿ, ತಮ್ಮ ಇಲಾಖೆಗೆ ಸಂಬಂಧಿಸಿದ ಬಗ್ಗೆಯಾಗಲಿ ಚಿಂತಿಸುತ್ತಿಲ್ಲ. ದಿನ ಬೆಳಗಾದರೆ ಆರೆಸ್ಸೆಸ್ ಬಗ್ಗೆಯೇ ಮಾತಾಡ್ತಾರೆ. ಪ್ರಿಯಾಂಕ್ ಖರ್ಗೆ ಅವರಿಗೆ ಆರೆಸ್ಸೆಸ್ ಬಗ್ಗೆ ಮಾತಾಡುವ ಚಟ ಇದ್ದರೆ ಇದಕ್ಕೆ ಒಂದು ಖಾತೆ ತೆಗೆದುಕೊಳ್ಳಲಿ ಎಂದು ಲೇವಡಿ ಮಾಡಿದರು.
ಯಾವ ಆಧಾರದ ಮೇಲೆ ಆರೆಸ್ಸೆಸ್ ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಅಂತಾರೆ? ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಕ್ಷೇತ್ರ ಯಾವುದು ಡೆವೆಲಪ್ ಆಗಿದೆ? ಶಿಕ್ಷಣ, ಮೂಲಭೂತ ಸೌಕರ್ಯ? ಕಾನೂನು ಸುವ್ಯವಸ್ಥೆ? ಯಾವುದರಲ್ಲೂ ಉದ್ದಾರವಾಗಿಲ್ಲ. ಅಲ್ಲಿನ ಅಭಿವೃದ್ಧಿ ಬಗ್ಗೆ ಯೋಚನೆ ಇಲ್ಲ. ಕೇವಲ ಆರೆಸ್ಸೆಸ್ ಬಗ್ಗೆ ಮಾತು. ಆರೆಸ್ಸೆಸ್ ಬ್ಯಾನ್ ಮಾಡಲು ಪ್ರಿಯಾಂಕ್ ಖರ್ಗೆ ಅವರ ತಂದೆ ಕೇಂದ್ರದಲ್ಲಿ ಗೃಹಸಚಿವರಿದ್ದಾಗಲೇ ಸಾಧ್ಯವಾಗಿಲ್ಲ. ಇನ್ನು ಇವರು ಬ್ಯಾನ್ ಮಾಡಲು ಆಗುತ್ತದೆಯೇ? ತಾಕತ್ತು ಇದ್ದರೆ ಆರೆಸ್ಸೆಸ್ ಬ್ಯಾನ್ ಮಾಡಲಿ ಎಂದು ಸವಾಲು ಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.