Karnataka Politics: ಜೆಡಿಎಸ್‌ ಕೋರ್‌ ಕಮಿಟಿಗೆ ಕಾಶೆಂಪೂರ ಅಧ್ಯಕ್ಷ

Kannadaprabha News   | Asianet News
Published : Jan 27, 2022, 11:25 AM IST
Karnataka Politics: ಜೆಡಿಎಸ್‌ ಕೋರ್‌ ಕಮಿಟಿಗೆ ಕಾಶೆಂಪೂರ ಅಧ್ಯಕ್ಷ

ಸಾರಾಂಶ

*  ಸಮಿತಿಯಲ್ಲಿ ಸಂಸದ ಪ್ರಜ್ವಲ್‌ಗೆ ಸ್ಥಾನ *  ರೇವಣ್ಣ, ನಿಖಿಲ್‌ ಜೆಡಿಎಸ್‌ ಕೋರ್‌ ಕಮಿಟಿಯಲ್ಲಿ ಇಲ್ಲ *  ಬೂತ್‌ ಮಟ್ಟದಲ್ಲಿ ಜೆಡಿಎಸ್‌ ಸಂಘಟಿಸಿ  

ಬೆಂಗಳೂರು(ಜ.27):  ಪಕ್ಷದ ಸಂಘಟನೆ, ಬಲವರ್ಧನೆ ಮಾಡಲು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ(Bandeppa Kashempur) ಅಧ್ಯಕ್ಷತೆಯಲ್ಲಿ ಜೆಡಿಎಸ್‌ ಕೋರ್‌ ಕಮಿಟಿ(JDS Core Committee) ರಚನೆ ಮಾಡಲಾಗಿದ್ದು, ಇಂದು(ಗುರುವಾರ) ಸಮಿತಿಯ ಮೊದಲ ಸಭೆ ನಡೆಯಲಿದೆ. ಕಮಿಟಿಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ(Prajwal Revanna) ಸೇರಿದಂತೆ 20 ಸದಸ್ಯರಿಗೆ ಸ್ಥಾನ ನೀಡಲಾಗಿದೆ. ಆದರೆ, ಮಾಜಿ ಸಚಿವ ಎಚ್‌.ಡಿ.ರೇವಣ್ಣ(HD Revanna) ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ(Nikhil Kumaraswamy) ಅವರಿಗೆ ಅವಕಾಶ ನೀಡಲಾಗಿಲ್ಲ.

ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ(HD Devegowda), ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಮತ್ತು ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಅವರು ಕೋರ್‌ ಕಮಿಟಿಗೆ ವಿಶೇಷ ಆಹ್ವಾನಿತರಾಗಿದ್ದಾರೆ.

Karnataka Politics ಸಿಎಂ ಮನೆ ಮುಂದೆ ಹೋದ ರೇವಣ್ಣ, ಎದುರೇಟು ಕೊಟ್ಟ ಸಚಿವ ಅಶ್ವತ್ಥನಾರಾಯಣ

ಸಂಸದ ಪ್ರಜ್ವಲ್‌ ರೇವಣ್ಣ, ಶಾಸಕರಾದ ವೆಂಕಟರಾವ್‌ ನಾಡಗೌಡ, ಸಿ.ಎಸ್‌.ಪುಟ್ಟರಾಜು, ಎಂ. ಕೃಷ್ಣಾರೆಡ್ಡಿ, ರಾಜಾ ವೆಂಕಟಪ್ಪ ನಾಯ್ಕ, ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ, ವಿಧಾನಪರಿಷತ್‌ ಸದಸ್ಯರಾದ ಬಿ.ಎಂ.ಫಾರೂಕ್‌, ಕೆ.ಎ.ತಿಪ್ಪೇಸ್ವಾಮಿ, ಮಾಜಿ ಶಾಸಕರಾದ ವೈ.ಎಸ್‌.ವಿ.ದತ್ತ, ಕೆ.ಎಂ.ತಿಮ್ಮರಾಯಪ್ಪ, ಶಾರದಾ ಪೂರ‍್ಯನಾಯಕ್‌, ವಿಧಾನಪರಿಷತ್‌ ಮಾಜಿ ಸದಸ್ಯ ಟಿ.ಎ.ಶರವಣ, ಮುಖಂಡರಾದ ನಾಸೀರ್‌ ಭಗವಾನ್‌, ಹನುಮಂತ ಬಸಪ್ಪ ಮಾವಿನಮರದ, ರೂತ್‌ ಮನೋರಮಾ, ಸುಧಾಕರ್‌ ಎಸ್‌.ಶೆಟ್ಟಿ, ವಿ.ನಾರಾಯಣಸ್ವಾಮಿ, ಸಮೃದ್ಧಿ ಮಂಜುನಾಥ್‌ ಸಮಿತಿಯ ಸದಸ್ಯರಾಗಿದ್ದಾರೆ.

ಇಂದು ಮೊದಲ ಸಭೆ:

ಗುರುವಾರ ನಡೆಯುವ ಮೊದಲ ಸಭೆಯಲ್ಲಿ ಬಿಬಿಎಂಪಿ ಚುನಾವಣೆ(BBMP Election) ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಪಕ್ಷದ ಸಂಘಟನೆ, ಬಲವರ್ಧನೆಗೆ ರೂಪಿಸಿರುವ ಯೋಜನೆಗಳು, ಜೆಡಿಎಸ್‌ ಅಧಿಕಾರವಧಿಯಲ್ಲಿ ಅನುಷ್ಠಾನಗೊಳಿಸಿರುವ ಯೋಜನೆಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವುದು, ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ರೂಪಿಸಬೇಕಾದ ಕಾರ್ಯತಂತ್ರಗಳು ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಜೆಡಿಎಸ್‌ ಕಡೆಗಣಿಸಿ ಯಾರೂ ಏನೂ ಮಾಡಲಾಗದು: ಎಚ್‌ಡಿಕೆ

ಮುಂದಿನ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವನ್ನು ಕಡೆಗಣಿಸಿ ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಗುರುವಾರ ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಸಾರ್ವತ್ರಿಕ ಚುನಾವಣೆಗೆ ಪಕ್ಷವು ಸಿದ್ಧತೆ ಕೈಗೊಂಡಿದೆ. ಪಕ್ಷದ ಶ್ರಮ ಏನು ಎಂಬುದನ್ನು ತೋರಿಸುತ್ತೇನೆ. ನಮ್ಮನ್ನು ನಿರ್ಲಕ್ಷಿಸಿ ಯಾರೂ ಏನೂ ಮಾಡಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೂ ನಾವೇ ಬೇಕು ಎಂದು ತಿಳಿಸಿದರು.

Janata Jaladhare ಜೆಡಿಎಸ್ ‘ಜನತಾ ಜಲಧಾರೆ’ಗೆ ಕೊರೋನಾ ಶಾಕ್

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪೂರ್ಣ ಬಹುಮತ ಗಳಿಸುವುದಕ್ಕಾಗಿಯೇ ಪಕ್ಷದ ಸಂಘಟನೆಯನ್ನು ಈಗಿನಿಂದಲೇ ಬಲಪಡಿಸುವ ಉದ್ದೇಶ ಹೊಂದಿದ್ದೇವೆ. ಇದಕ್ಕಾಗಿಯೇ ಪಕ್ಷದ ಹಿರಿಯ ಶಾಸಕ ಬಂಡೆಪ್ಪ ಕಾಶೆಂಪೂರ್‌ ನೇತೃತ್ವದಲ್ಲಿ ಕೋರ್‌ ಕಮಿಟಿಯನ್ನು ರಚಿಸಲಾಗಿದೆ. ಜತೆಗೆ ಮಾಜಿ ಸಚಿವ ಎನ್‌.ಎಂ.ನಬಿ ಅವರನ್ನು ನೂತನ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದರು.

ಬೂತ್‌ ಮಟ್ಟದಲ್ಲಿ ಜೆಡಿಎಸ್‌ ಸಂಘಟಿಸಿ

ಕೋಲಾರ(Kolar): ಮುಂಬರುವ ರಾಜ್ಯ ವಿಧಾನಸಭೆಗೆ ಪಕ್ಷವನ್ನು ಪಕ್ಷದ ಮುಖಂಡರು-ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಸಂಘಟನೆಗೆ ಒತ್ತು ನೀಡಬೇಕೆಂದು ಜೆಡಿಎಸ್‌ ಮುಖಂಡ ವಕ್ಕಲೇರಿ ರಾಮು ಕರೆ ನೀಡಿದರು. ಕೋಲಾರ ತಾಲೂಕಿನ ಕಡಗಟ್ಟೂರಿನಲ್ಲಿ ನಡೆದ ‘ಜೆಡಿಎಸ್‌ ಸಮ್ಮಿಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ದೇಶದಲ್ಲಿ ಅಭಿವೃದ್ದಿ ಕಾಣಬೇಕಾದರೆ ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಸಾಧ್ಯ. ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್‌ ಸ್ಪಷ್ಟಬಹುತದೊಂದಿಗೆ ಅಧಿಕಾರಕ್ಕೆ ಬರೋದಿಲ್ಲ ಎಂಬುದು ಈ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಈಗಾಗಲೇ ಅರಿವಾಗಿದೆ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್