ಬನ್ನೇರುಘಟ್ಟ ಉದ್ಯಾನವನದಲ್ಲಿ ಸೌರ ವಿದ್ಯುತ್‌ ಸ್ಥಾವರ: ಸಚಿವ ಈಶ್ವರ್ ಖಂಡ್ರೆ

Published : Oct 09, 2025, 10:35 PM IST
Eshwar Khandre

ಸಾರಾಂಶ

ದೇಶದಲ್ಲೇ ಪ್ರಥಮ ಪರಿಸರ ಸ್ನೇಹಿ ವಿದ್ಯುತ್ ಸೌಲಭ್ಯದ ಜೈವಿಕ ಉದ್ಯಾನಕ್ಕೆ ಮುಂದಿನ ವಾರ ಚಾಲನೆ ನೀಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಮಾನವ-ಪ್ರಾಣಿ ಸಂಘರ್ಷ ತಪ್ಪಿಸಿ: ಕರ್ನಾಟಕವು ಆನೆಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ.

ಬೆಂಗಳೂರು (ಅ.09): ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಇಂದಿನ ಮತ್ತು ಭವಿಷ್ಯದ ಇಂಧನ ಅಗತ್ಯವನ್ನು ಸೌರ ವಿದ್ಯುತ್ ನಿಂದಲೇ ಪೂರೈಸುವ ಉದ್ದೇಶದಿಂದ ಒಂದು ಮೆಗಾವ್ಯಾಟ್ ಕ್ಯಾಪ್ಟಿವ್ ಸೌರ ವಿದ್ಯುತ್ ಸ್ಥಾವರ ಸ್ಥಾಪಿಸಲಾಗಿದೆ. ದೇಶದಲ್ಲೇ ಪ್ರಥಮ ಪರಿಸರ ಸ್ನೇಹಿ ವಿದ್ಯುತ್ ಸೌಲಭ್ಯದ ಜೈವಿಕ ಉದ್ಯಾನಕ್ಕೆ ಮುಂದಿನ ವಾರ ಚಾಲನೆ ನೀಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಮಾನವ-ಪ್ರಾಣಿ ಸಂಘರ್ಷ ತಪ್ಪಿಸಿ: ಕರ್ನಾಟಕವು ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಹುಲಿ ಮತ್ತು ಚಿರತೆಗಳ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ವನ್ಯಜೀವಿಗಳನ್ನು ಸರಂಕ್ಷಣೆ ಮಾಡಿದ್ದರಿಂದಲೇ ಈ ಸ್ಥಾನದಲ್ಲಿರುವುದು. ಇದೇ ರೀತಿ ಎಲ್ಲಾ ವ್ಯನ್ಯ ಪ್ರಾಣಿಗಳನ್ನು ಸಂರಕ್ಷಿಸಿ ಒಂದನೇ ಸ್ಥಾನಕ್ಕೆ ಮುಟ್ಟಬೇಕು. ಇನ್ನು ಮಾನವ ಮತ್ತು ಪ್ರಾಣಿ ಸಂಘರ್ಷಗಳನ್ನು ಕಡಿಮೆ ಮಾಡಬೇಕು. ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಏಕೆ ಬರುತ್ತಿವೆ ಎಂಬುದರ ಕಾರಣ ತಿಳಿಯುವ ನಿಟ್ಟಿನಲ್ಲಿ ಸಂಶೋಧನೆಗಳು ಆಗಬೇಕು. ಮಾನವ-ಪ್ರಾಣಿ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಗರಿಷ್ಠ ಪ್ರಯತ್ನ ಹಾಕಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಹುಲಿ, ಆನೆಗಳ ಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಅರಣ್ಯ ಸಂಪತ್ತು ಸಂರಕ್ಷಣೆ ಜೊತೆ ಪ್ರಾಣಿಗಳ ಸಂತಾನ ಹೆಚ್ಚಿಸಬೇಕು. ದಿನೇ ದಿನೆ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

15,000 ಎಕ್ರೆ ಹೊಸದಾಗಿ ಅರಣ್ಯ ಅಧಿಸೂಚನೆ

ನಾನು ಅರಣ್ಯ ಸಚಿವನಾದ ಬಳಿಕ ರಾಜ್ಯದಲ್ಲಿ 15 ಸಾವಿರ ಎಕರೆ ಪ್ರದೇಶವನ್ನು ಹೊಸದಾಗಿ ಅರಣ್ಯ ಎಂದು ಅಧಿಸೂಚನೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 250 ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸಲಾಗಿದೆ. ಮುಂದಿನ ಪೀಳಿಗೆಗೆ ಹಸಿರು ಹೊದಿಕೆ ಉಳಿಸುವ ಸಲುವಾಗಿ ಮತ್ತು ಶ್ವಾಸತಾಣಗಳನ್ನು ಸಂರಕ್ಷಿಸುವ ಸಲುವಾಗಿ ಬೆಂಗಳೂರು ಹೆಸರುಘಟ್ಟ ಕೆರೆ ಬಳಿಯ 5,678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲಾಗಿದೆ. ಜೊತೆಗೆ ಮಾತಪ್ಪನ ಹಳ್ಳಿಯಲ್ಲಿ 153 ಎಕರೆ ಪ್ರದೇಶದಲ್ಲಿ ಬೃಹತ್ ಜೈವಿಕ ಉದ್ಯಾನ ನಿರ್ಮಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ರಾಜ್ಯ ಅರಣ್ಯ ಪಡೆಗಳ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: 'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ' - ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ