
ಮಂಗಳೂರು, (ಜುಲೈ.05): ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಆಪ್ತರೊಬ್ಬರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ
ಕರ್ನಾಟಕದ ಬಿಜೆಪಿ ಶಾಸಕರೊಬ್ಬರಿಗೆ ವಕ್ಕರಿಸಿದ ಕೊರೋನಾ
ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಿಗೆ ಕೊರೋನಾ ಅಟ್ಯಾಕ್ ಆಗಿದೆ. ಸೋಂಕಿತ ಬಿಜೆಪಿ ಮಖಂಡ ಶಾಸಕ ರಾಜೇಶ್ ನಾಯ್ಕ್ ಅವರ ಹಲವು ಕಾರ್ಯಕ್ರಮಗಳಲ್ಲಿ ಪ್ರತಿನಿತ್ಯ ಭಾಗವಹಿಸಿದ್ದಾರೆ. ಇದರಿಂದ ಶಾಸಕ ರಾಜೇಶ್ ನಾಯ್ಕ್ ಕೊರೋನಾ ಭೀತಿ ಶುರುವಾಗಿದೆ.
ಅಷ್ಟೇ ಅಲ್ಲದೇ ಕೆಲ ದಿನಗಳ ಹಿಂದಷ್ಟೇ ಸೋಂಕಿತನ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಭಾಗವಹಿಸಿದ್ದವರಿಗೂ ಸದ್ಯ ಕೊರೋನಾ ಆತಂಕ ಮನೆಮಾಡಿದೆ.
ಮಾಜಿ ಕೇಂದ್ರ ಸಚಿವರಿಗೂ ತಗುಲಿದ ಕೊರೋನಾ: ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು
ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯವರೇ ಆದ ಮಂಗಳೂರು ಉತ್ತರ ಕ್ಷೇತ್ರದ ಭರತ್ ಶೆಟ್ಟ ಹಾಗೂ ಇದೇ ಜಿಲ್ಲೆ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರಿಗೆ ಕೊರೋನಾ ವಕ್ಕರಿಸಿದೆ. ಇದರ ಬೆನ್ನಲ್ಲೇ ಇದೀಗ ಶಾಸಕ ರಾಜೇಶ್ ನಾಯ್ಕ್ ಸಹ ಆತಂಕದಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.