'ಸತ್ಯವಂತರಿಗಿದು ಕಾಲವಲ್ಲ..' ಉಚ್ಛಾಟನೆ ಬೆನ್ನಲ್ಲೇ ಪುರಂದರದಾಸರ ಕೀರ್ತನೆ ಬರೆದು ಕುಟುಕಿದ ಯತ್ನಾಳ್‌!

ಬಿಜೆಪಿಯಿಂದ ಉಚ್ಛಾಟನೆಯಾದ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮೂಲಕ ಬಿಜೆಪಿ ನಾಯಕರನ್ನು ಕುಟುಕಿದ್ದಾರೆ. ಕುಟುಂಬ ರಾಜಕಾರಣ, ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಕ್ಕೆ ನನ್ನನ್ನು ಉಚ್ಛಾಟಿಸಿದ್ದಾರೆ ಎಂದು ಹೇಳಿದ್ದಾರೆ.

basanagouda patil yatnal first reaction after Expelled From BJP san

ಬೆಂಗಳೂರು (ಮಾ.26): ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾರ್ಮಿಕ ಟ್ವೀಟ್‌ ಮಾಡಿ ಬಿಜೆಪಿ ನಾಯಕರನ್ನು ಕುಟುಕಿದ್ದಾರೆ. ಕುಟುಂಬ ರಾಜಕಾರಣ, ಭ್ರಷ್ಟಾಚಾರ, ಪಕ್ಷದಲ್ಲಿ ಬದಲಾವಣೆ, ಏಕವ್ಯಕ್ತಿ ನಾಯಕತ್ವವನ್ನು ಬದಲಾವಣೆ ಮಾಡಿ ಎಂದು ಹೇಳಿದ್ದಕ್ಕೆ ಪಕ್ಷ ನನ್ನನ್ನು ಉಚ್ಛಾಟನೆ ಮಾಡಿದೆ. ಅದರೊಂದಿಗೆ ಸತ್ಯವಂತರಿಗಿದು ಕಾಲವಲ್ಲ ಎಂದು ಪುರಂದರದಾಸರ ಕೀರ್ತನೆ ಬರೆದು ಕುಟುಕಿದ್ದಾರೆ.

'ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ.'ಇದ್ದಿದ್ದು ಇದ್ದ ಹಾಗೆ ನಾನು ಹೇಳೀರುವ ವಿಚಾರಕ್ಕೆ' ಪಕ್ಷವು ನನಗೆ ಪ್ರತಿಫಲ ನೀಡಿದೆ.

Latest Videos

ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ. ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಹಿಂದುತ್ವದ ವಿರುದ್ಧದ ನನ್ನ ಹೋರಾಟವನ್ನು ತಡೆಯುವುದಿಲ್ಲ. ನಾನು ನನ್ನ ಜನರಿಗೆ ಅದೇ ಹುರುಪು ಮತ್ತು ದೃಢತೆಯಿಂದ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ.

ಎಲ್ಲಾ ಕಾರ್ಯಕರ್ತರಿಗೆ, ಹಿತೈಷಿಗಳಿಗೆ, ಸ್ನೇಹಿತರಿಗೆ, ಪರಿಚಯಸ್ಥರಿಗೆ, ಸ್ವಾಮೀಜಿಗಳಿಗೆ, ಮಾಧ್ಯಮಗಳಿಗೆ, ಬೆಂಬಲದ ಆಧಾರಸ್ತಂಭವಾಗಿರುವ ನನ್ನ ಕುಟುಂಬಕ್ಕೆ ಮತ್ತು ಸರ್ವಶಕ್ತನಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ

ನಾನು ಇದನ್ನು ಬರೆಯುವಾಗ, ಪುರಂದರ ದಾಸರು ಹೇಳಿದ್ದನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ.

ಸತ್ಯವಂತರಿಗಿದು ಕಾಲವಲ್ಲ
ದುಷ್ಟಜನರಿಗೆ ಸುಭಿಕ್ಷಕಾಲ ||

ಉಪಕಾರ ಮಾಡಿದರೆ ಅಪಕರಿಸುವ ಕಾಲ

ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ
ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ

ಸತ್ಯವಂತರಿಗಿದು ಕಾಲವಲ್ಲ

Breaking: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ; ಶಾಸಕ ಸ್ಥಾನಕ್ಕೂ ಬರುತ್ತಾ ಕುತ್ತು!

ಇನ್ನು ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ ಬೆನ್ನಲ್ಲಿಯೇ ಯತ್ನಾಳ್‌ ಪರವಿದ್ದ ಕೆಲ ನಾಯಕರಿಗೂ ಆತಂಕ ಶುರುವಾಗಿದೆ. ಇನ್ನೊಂದೆಡೆ ವಿಜಯಪುರದ ಶಾಸಕ ಕಚೇರಿಯ ಎದುರು ಹಾಕಿದ್ದ ಬಿಜೆಪಿ ಧ್ವಜವನ್ನು ತೆಗೆದುಹಾಕಲಾಗಿದೆ. ಇನ್ನೊಂದೆಡೆ ಉಚ್ಛಾಟನೆ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇದನ್ನು ನಾನು ಸಂಭ್ರಮಿಸಲಾರೆ ಎಂದಿದ್ದಾರೆ. 

ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ: ಯತ್ನಾಳ್ ಉಚ್ಛಾಟನೆಗೆ ವಿಜಯೇಂದ್ರ ಮೊದಲ ಪ್ರತಿಕ್ರಿಯೆ

The party has expelled me for 6 years for speaking against dynasty politics, corruption, reforms within the party, remove one man upmanship & request to develop North Karnataka.

The party has rewarded me for 'Calling a Spade, a Spade'

Certain vested interests have played their…

— Basanagouda R Patil (Yatnal) (@BasanagoudaBJP)
vuukle one pixel image
click me!