ನೋಟಿಸ್‌ಗೆ ಡೋಂಟ್ ಕೇರ್, ಮತ್ತೆ ಸಿಎಂ ವಿರುದ್ಧ ಗುಡುಗಿದ ಯತ್ನಾಳ್

By Suvarna News  |  First Published Feb 14, 2021, 4:46 PM IST

ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿರುವುದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಆದರೂ ಸಿಎಂ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ.


ತುಮಕೂರು, (ಫೆ.14): ಹೈಕಮಾಂಡ್ ನೋಟೀಸ್‌ಗೆ ಕ್ಯಾರೇ ಎನ್ನದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. 

ತುಮಕೂರಿನಲ್ಲಿ ಮಾತನಾಡಿದ ಯತ್ನಾಳ್,  ಯಡಿಯೂರಪ್ಪನವರಿಗೆ ಮೀಸಲಾತಿ ನೀಡಲು ಇಷ್ಟವಿಲ್ಲ. ಇಷ್ಟವಿದ್ದಿದ್ದರೆ ಹೀಗೆ ವಿಳಂಬ ಮಾಡುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

Tap to resize

Latest Videos

ವಿಜಯೇಂದ್ರ 8 ದಿನ ದಿಲ್ಲಿಯಲ್ಲಿ ಯಾಕಿದ್ರು? ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಇವತ್ತಿನವರೆಗೂ ಆಯೋಗಕ್ಕೆ ನೀಡಿರುವ ಪತ್ರ ನೋಟಿಫಿಕೇಶನ್ ಆಗಿಲ್ಲ. ಸಿಎಂ ಅವರಿಗೆ ಮನಸ್ಸಿದ್ದರೆ ಪಂಚಮಸಾಲಿ, ವೀರಶೈವ ಲಿಂಗಾಯತ ಮೀಸಲಾತಿ ನೀಡಬಹುದಿತ್ತು. ಈ ಅಧಿಕಾರ ಸಿಎಂ ಕೈಲೇ ಇರುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಅವರಿಗೆ ಇಷ್ಟವಿಲ್ಲ ಎಂದರು.

ವೀರಶೈವ-ಲಿಂಗಾಯತ ಸಮುದಾಯಗಳನ್ನು ಯಡಿಯೂರಪ್ಪ ತಮ್ಮ ರಾಜಕೀಯ ಅಸ್ತ್ರಕ್ಕಾಗಿ, ಕೇವಲ ತಮ್ಮ ಮಗನ ಭವಿಷ್ಯಕ್ಕಾಗಿ, ತಮ್ಮ ಕುರ್ಚಿಗಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಗುಡುಗಿದರು.

ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿರುವುದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಆದರೂ ಸಿಎಂ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ.

click me!