
ವಿಜಯಪುರ, (ಅ.19): ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯ (By Election) ಕಾವು ರಂಗೇರಿದ್ದು, ತಮ್ಮ ಅಭ್ಯರ್ಥಿಗಳ ಗೆಲುವಿಗೆ ಘಟಾನುಘಟಿ ನಾಯಕರುಗಳು ಅಖಾಡಕ್ಕಿಳಿದಿದ್ದಾರೆ.
ಭರ್ಜರಿ ಪ್ರಚಾರದ ಮಧ್ಯೆ ಆರೋಪ-ಪ್ರತ್ಯಾರೋಪಗಳು ಸಹ ಜೋರಾಗಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಎಚ್‌ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.
ಉರಿಯುವ ಬೆಂಕಿಗೆ ಅಫೀಮು ಸುರಿದ ಬಿಜೆಪಿ ಶಾಸಕ ಯತ್ನಾಳ್
ಇಂದು (ಅ.19) ವಿಜಯಪುರ (Vijayapura) ಜಿಲ್ಲೆಯ ಆಲಮೇಲದಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ನನಗೆ ಎಲ್ಲ ಗೊತ್ತಿದೆ. ಎಚ್‌ಡಿಕೆ ರಹಸ್ಯ ನನ್ನ ಬಳಿ ಇದೆ. ಆ ಕುರಿತು ಬಾಯಿ ಬಿಟ್ಟರೆ ಅದು ಬೇರೆಯದೇ ಆಗುತ್ತದೆ ಎಚ್ಚರಿಕೆ ನೀಡಿದರು.
ಇನ್ನು ಇದೇ ವೇಳೆ ವಿ. ಸೋಮಣ್ಣ ಅವರಿಗೆ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನ ನೀಡಬೇಕು ಎಂದು ಪ್ರಚಾರ ಸಭೆ ವೇದಿಕೆ ಮೇಲೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಯತ್ನಾಳ್ ಮನವಿ ಮಾಡಿದರು.
ಹಳೆ ಮೈಸೂರು ಭಾಗದ ಹೊಣೆಯನ್ನು ಸೋಮಣ್ಣ ಅವರಿಗೆ ನೀಡಬೇಕು. ಸೋಮಣ್ಣ ಅವರಿಗೆ ತಾಕತ್ತಿದೆ. ಅವರು ಕೆಲಸ ಮಾಡುತ್ತಾರೆ. ಬರೀ ಬೆನ್ನುಹತ್ತಿ ಓಡಾಡುವವರಿಗೆ ಅವಕಾಶ ಕೊಡಬೇಡಿ ಎಂದರು.
ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ
ಒಳಸಂಚು ಸಿದ್ದರಾಮಯ್ಯನವರ ಹುಟ್ಟು ಗುಣ, ನಮ್ಮದಲ್ಲ. 2009ರಲ್ಲಿ ಬೈಎಲೆಕ್ಷನ್ನಲ್ಲಿ ಸಿದ್ದರಾಮಯ್ಯ ಬಿ.ಎಸ್. ಯಡಿಯೂರಪ್ಪ ಜತೆ ಕೈಜೋಡಿಸಿದ್ದರು. ಯಡಿಯೂರಪ್ಪ ಜೊತೆ ಸಿದ್ದರಾಮಯ್ಯ ಕೈ ಜೋಡಿಸಿದ್ದರು ಎಂದು ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.