ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಭರವಸೆ ಈಡೇರಿಸಿಲ್ಲ: ಬಸವಜಯ ಮೃತ್ಯುಂಜಯ ಶ್ರೀ

By Kannadaprabha News  |  First Published Jan 5, 2024, 3:39 PM IST

ಬೆಳಗಾವಿ ಅಧಿವೇಶನದ ವೇಳೆ ಪಂಚಮಸಾಲಿ ಸಮಾಜದ ಮುಖಂಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಭರವಸೆ ಈಡೇರಿಸಿಲ್ಲ. ಕೂಡಲೇ ಸರ್ಕಾರ 2ಎ ಮೀಸಲಾತಿ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು.


ಬ್ಯಾಡಗಿ (ಜ.05): ಬೆಳಗಾವಿ ಅಧಿವೇಶನದ ವೇಳೆ ಪಂಚಮಸಾಲಿ ಸಮಾಜದ ಮುಖಂಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಭರವಸೆ ಈಡೇರಿಸಿಲ್ಲ. ಕೂಡಲೇ ಸರ್ಕಾರ 2ಎ ಮೀಸಲಾತಿ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ಯಾವುದೇ ಕಾರಣಕ್ಕೂ ಸಮಾಜಕ್ಕೆ ಅನ್ಯಾಯವಾದಲ್ಲಿ ಸುಮ್ಮನಿರಲು ಸಾಧ್ಯವಿಲ್ಲ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳು ಹೇಳಿದರು. ಮೋಟೆಬೆನ್ನೂರು ಬಳಿ ಜ.12 ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಸಾಮೂಹಿಕ ಇಷ್ಟಲಿಂಗ ಪೂಜೆ ಪ್ರತಿಭಟನೆ ಹಿನ್ನೆಲೆ ಗುರುವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ವಿಧಾನಸಭೆಯಲ್ಲಿ 50ಕ್ಕೂ ಹೆಚ್ಚು ಶಾಸಕರನ್ನು ಹೊಂದಿದ್ದರೂ ಇಂದಿಗೂ 2ಎ ಮೀಸಲಾತಿ ಕಲ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ, ಸರ್ಕಾರದ ನಿರ್ಲಕ್ಷ್ಯ ಧೋರಣೆಗಳು ಇಂದು ನಮ್ಮನ್ನು ಬೀದಿಗೆ ತಂದು ನಿಲ್ಲಿಸಿವೆ. ಸಮಾಜ ನೋವು ಅನುಭವಿಸುತ್ತಿದೆ ಎಂದು ವಿಷಾಧಿಸಿದರು. ಮೀಸಲಾತಿ ದೊರಕಿಸಿಕೊಳ್ಳುವವರೆಗೂ ಹೋರಾಟ ಮುಂದುವರೆಯಲಿದೆ. ಸಮುದಾಯದ ಜನರು ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಈ ವೇಳೆ ವೀರಶೈವ ಪಂಚಮಸಾಲಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಆರ್. ಬಳ್ಳಾರಿ, ತಾಲೂಕು ಘಟಕದ ಸಂಚಾಲಕ ಎಸ್.ಬಿ. ಲಕ್ಕಣ್ಣವರ, ಮರಡೆಪ್ಪ ಹೆಡಿಯಾಲ, ಶಿವಯೋಗಿ ಗಡಾದ, ಶಂಭಣ್ಣ ಮಲಗಾರ ಇತರರಿದ್ದರು.

Latest Videos

undefined

ಶಿಕ್ಷಣಕ್ಕೆ ವಿಶ್ವವೇ ಧಾರವಾಡದತ್ತ ತಿರುಗಿ ನೋಡುವಂತಾಗಬೇಕು: ಅರವಿಂದ ಬೆಲ್ಲದ

ಬಿಜೆಪಿಯಲ್ಲಿ ಯತ್ನಾಳ ಹತ್ತಿಕ್ಕುವ ಷಡ್ಯಂತ್ರ: ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿ ನಾಯಕರನ್ನು ಷಡ್ಯಂತ್ರದ ಮೂಲಕ ರಾಜಕೀಯವಾಗಿ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಬಿಜೆಪಿಯಲ್ಲಿ ಕುತಂತ್ರಿಗಳ ಮಾತು ಕೇಳಿ ಕೇಂದ್ರ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರನ್ನು ರಾಜಕೀಯವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿಕಾರಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ನಾಯಕರನ್ನು ಷಡ್ಯಂತ್ರದ ಮೂಲಕ ರಾಜಕೀಯವಾಗಿ ಹತ್ತಿಕ್ಕಲಾಗುತ್ತಿದೆ. ಹೀಗೆ, ನಿರ್ಲಕ್ಷ್ಯ ವಹಿಸಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಬಿಜೆಪಿಯನ್ನು ಕಟ್ಟಿರುವವರಲ್ಲಿ ಬಸನಗೌಡ ಪಾಟೀಲ ಯತ್ನಾಳ ಕೂಡ ಒಬ್ಬರು. ಹಿಂದೆ ಕೇಂದ್ರದಲ್ಲಿ ಸಚಿವರಾಗಿದ್ದವರು. ಆದರೆ, ಬಿಜೆಪಿಯಲ್ಲಿ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಭಾವನೆ ನಮ್ಮ ಸಮಾಜದಲ್ಲಿ ಮೂಡಿದೆ. ಯತ್ನಾಳ ಅವರು ನೋವಿನಿಂದ ಹೇಳಿಕೆ ನೀಡಿದ್ದಾರೆ. 

ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ: ಸಚಿವ ತಿಮ್ಮಾಪೂರ ಪುತ್ರ!

ಅದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅ‍ವರು ಕೂಡಲೇ, ಯತ್ನಾಳ ಅವರೊಂದಿಗೆ ಮಾತುಕತೆ ನಡೆಸಿ, ಅನ್ಯಾಯ ಸರಿಪಡಿಸಬೇಕು. ಈ ಸಂಬಂಧ ಅಗತ್ಯ ಬಿದ್ದರೆ ನಡ್ಡಾ ಅವರ ಬಳಿಗೆ ಸಮಾಜದ ನಿಯೋಗವೊಂದನ್ನು ಕಳುಹಿಸಲಾಗುವುದು ಎಂದರು. ನಮ್ಮ ಸಮಾಜದ ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ನಾಯಕರಿಗೆ ಅನ್ಯಾಯವಾದ ವೇಳೆ ಅವರ ಬೆಂಬಲಕ್ಕೆ ನಾವು ನಿಲ್ಲುತ್ತೇವೆ. ಬಿಜೆಪಿಯಲ್ಲಿ ಕುತಂತ್ರಿಗಳ ಮಾತು ಕೇಳಿ, ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟಿಸಿದರೆ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ. ಯತ್ನಾಳ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿರುವುದು ತಪ್ಪೇ ಎಂದು ಪ್ರಶ್ನಿಸಿದರು.

click me!