ಬೈ ಎಲೆಕ್ಷನ್‌ನಲ್ಲಿ ಬಂಡಾಯ: ಕರ್ನಾಟಕ ಬಿಜೆಯಿಂದ ಮಾಜಿ ಶಾಸಕ ಉಚ್ಛಾಟನೆ!

By Suvarna NewsFirst Published Apr 17, 2021, 3:52 PM IST
Highlights

ಉಪಚುನಾವಣೆಯಲ್ಲಿ ಪಕ್ಷದ ವಿರುದ್ಧವೇ ಬಂಡಾಯ ಸಾರಿದ್ದ ಮಾಜಿ ಶಾಸಕರೊಬ್ಬರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು, (ಏ.17): ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷದ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಖೂಬಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಖೂಬಾಗೆ ಟಿಕೆಟ್ ನೀಡದೇ ಶರಣು ಸಲಗಾರ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಇದರಿಂದ ಬೇಸರಗೊಂಡಿದ್ದ ಮಲ್ಲಿಕಾರ್ಜುನ ಖೂಬಾ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು.

ಈ ಹಿನ್ನೆಲೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಖೂಬಾ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಿ ಆದೇಶ ಹೊರಡಿಸಲಾಗಿದೆ.

ಸಿಎಂ ಯಡಿಯೂರಪ್ಪ ಕಾರಿಗೆ ಮುತ್ತಿಗೆ ಯತ್ನ

ಈ ಕುರಿತಂತೆ ರಾಜ್ಯ ಬಿಜೆಪಿಯ ಶಿಸ್ತು ಸಮಿತಿಯ ಅಧ್ಯಕ್ಷರಾದಂತ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದು, ಪಕ್ಷದಿಂದ ಎಲ್ಲಾ ರೀತಿಯ ಕೊನೆಯ ಗಳಿಗೆಯ ಪ್ರಯತ್ನಗಳು ನಡೆದಾಗಲೂ ಕೂಡ ನೀವು ಚುನಾವಣಾ ಕಣದಿಂದ ಹಿಂದೆ ಸರಿಯಲಿಲ್ಲ. ಈ ಕಾರಣ, ಪಕ್ಷ ವಿರೋಧಿ ಚಟುವಟಿಕೆಗಾಗಿ ನಿಮ್ಮನ್ನು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂಬುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

click me!