Breaking: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಕರ್ನಾಟಕದ ಶಾಸಕ ನಿಧನ..!

Published : Sep 24, 2020, 04:17 PM ISTUpdated : Sep 24, 2020, 04:35 PM IST
Breaking: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಕರ್ನಾಟಕದ ಶಾಸಕ ನಿಧನ..!

ಸಾರಾಂಶ

ಮಹಾಮಾರಿ ಕೊರೋನಾಗ ಒಬ್ಬರಿಂದೊಬ್ಬರಂತೆ ರಾಜಕೀಯ ನಾಯಕನ್ನು ಬಲಿ ಪಡೆದುಕೊಳ್ಳುತ್ತಿದೆ. ನಿನ್ನೆ ಅಷ್ಟೇ  ಸುರೇಶ್ ಅಂಗಡಿ ಸೋಂಕಿನಿಂದ ಸಾವನ್ನಪ್ಪಿದ್ರೆ, ಇದೀಗ ಕರ್ನಾಟಕದ ಮತ್ತೋರ್ವ ಶಾಸಕ ನಿಧನರಾಗಿದ್ದಾರೆ.

ಬೆಂಗಳೂರು, (ಸೆ.24): ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ (65) ನಿಧನರಾಗಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅವರು ಇಂದು (ಗುರುವಾರ) ಕೊನೆಯುಸಿರೆಳೆದಿದ್ದಾರೆ.

ರಾಜ್ಯ ರಾಜಕಾರಣಿಗಳನ್ನು ದಿಗ್ಬ್ರಮೆಗೊಳಿಸಿದ ಸುರೇಶ್‌ ಅಂಗಡಿ ಹಠಾತ್‌ ನಿಧನ

ಒಂದು ವಾರದ ಹಿಂದೆ ಅವರಿಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಾಸಕ ನಾರಾಯಣರಾವ್ ಅವರಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆಯಿದ್ದು, ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

ದಿಢೀರ್ ಆರೋಗ್ಯ ಹದಗೆಟ್ಟಿದ್ದು ಕೃತಕ ಉಸಿರಾಟ (ವೆಂಟಿಲೇಟರ್) ವ್ಯವಸ್ಥೆ ಮಾಡಲಾಗಿತ್ತು.ಇದೀಗ ಚಿಕಿತ್ಸೆಗೂ ಸೂಕ್ತವಾಗಿ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

ಬಿ. ನಾರಾಯಣರಾವ್ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಿಂದ ಮೊದಲ ಬಾರಿಗೆ ಗೆಲುವು ಸಾಧಿಸಿದ್ದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಆಪ್ತ ವಲುದಲ್ಲಿ ಗುರುತಿಸಿಕೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ