ಬಸವರಾಜ ಬೊಮ್ಮಾಯಿ ವಿಪಕ್ಷ ನಾಯಕ?

Published : Jul 01, 2023, 06:03 AM IST
ಬಸವರಾಜ ಬೊಮ್ಮಾಯಿ ವಿಪಕ್ಷ ನಾಯಕ?

ಸಾರಾಂಶ

ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು ಒಂದೂವರೆ ತಿಂಗಳಾದರೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ತಲೆಕೆಡಿಸಿಕೊಳ್ಳದ ಬಿಜೆಪಿ ವರಿಷ್ಠರು ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ಘೋಷಣೆಗೆ ಮನಸ್ಸು ಮಾಡಿದ್ದಾರೆ.

ಬೆಂಗಳೂರು(ಜು.01):  ಸೋಮವಾರದಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಹೆಸರು ಶನಿವಾರ ಅಥವಾ ಭಾನುವಾರ ಘೋಷಣೆ ಮಾಡುವ ಸಾಧ್ಯತೆಯಿದೆ.

ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು ಒಂದೂವರೆ ತಿಂಗಳಾದರೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ತಲೆಕೆಡಿಸಿಕೊಳ್ಳದ ಬಿಜೆಪಿ ವರಿಷ್ಠರು ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ಘೋಷಣೆಗೆ ಮನಸ್ಸು ಮಾಡಿದ್ದಾರೆ.

ಪಕ್ಷಕ್ಕೆ ಮುಜುಗರ ತರುವ ಬಿಜೆಪಿಗರ ಬಾಯಿಗೆ ಬೀಗ..!

ಹತ್ತಾರು ಲೆಕ್ಕಾಚಾರ, ಅಭಿಪ್ರಾಯಗಳನ್ನು ಮುಂದಿಟ್ಟುಕೊಂಡು ವರಿಷ್ಠರು ಹಲವು ಹಂತದಲ್ಲಿ ರಾಜ್ಯ ಘಟಕದ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿರುವುದು ಕುತೂಹಲ ಮೂಡಿಸಿದೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ವರಿಷ್ಠರ ಪರವಾಗಿ ಪಕ್ಷದ ಶಾಸಕರು ಹಾಗೂ ಮುಖಂಡರಿಂದ ಪ್ರತ್ಯೇಕವಾಗಿ ಅಭಿಪ್ರಾಯ ಆಲಿಸಿದ್ದಾರೆ.

ಈ ಪೈಕಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಮುಂಚೂಣಿಯಲ್ಲಿದೆ. ನಂತರದ ಸ್ಥಾನದಲ್ಲಿ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವರಾದ ಆರ್‌.ಅಶೋಕ್‌, ವಿ.ಸುನೀಲ್‌ಕುಮಾರ್‌, ಶಾಸಕ ಅರವಿಂದ ಬೆಲ್ಲದ ಅವರ ಹೆಸರುಗಳು ಪ್ರಸ್ತಾಪವಾಗಿವೆ. ಪಕ್ಷದ ವರಿಷ್ಠರು ಬೊಮ್ಮಾಯಿ ಅವರ ಬಗ್ಗೆ ಒಲವು ಹೊಂದಿದ್ದರೂ ಕಾರ್ಯಕರ್ತರ ಮಟ್ಟದಲ್ಲಿ ಅವರಿಗೆ ತೀವ್ರ ವಿರೋಧ ವ್ಯಕ್ತವಾಗಿರುವುದರಿಂದ ಕಾದು ನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ