
ಬೆಂಗಳೂರು, (ಮಾ.13): ಕರ್ನಾಟಕ ವಿಧಾನಸಭಾ ಚುನಾವಣೆಗೆ(Karnataka Assembly Elections) ಇನ್ನೂ ಒಂದು ವರ್ಷ ಬಾಕಿ ಇದ್ದು, ಪಂಚರಾಜ್ಯ ಚುನಾವಣೆ ಮುಗಿದಿದ್ದೇ ತಡ ಇದೀಗ ಎಲ್ಲರ ಚಿತ್ತ ಕರ್ನಾಟಕದತ್ತ ನೆಟ್ಟಿದೆ.
ಹೌದು..ಚುನಾವಣೆ ಇನ್ನೂ ಒಂದು ವರ್ಷ ಇರುವಾಗಲೇ ಕರ್ನಾಟಕದಲ್ಲಿ ನಾನಾ ರಾಜಕೀಯ ಲೆಕ್ಕಾಚಾರಗಳು ಶುರುವಾಗಿದೆ. ಇದರ ಮಧ್ಯೆ ಅವಧಿಗೂ ಮುನ್ನವೇ ಕರ್ನಾಟಕ ಚುನಾವಣೆ ಎದುರಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
Karnataka Politics: ಕರ್ನಾಟಕದಲ್ಲಿ ಅವಧಿಗೆ ಮುನ್ನವೇ ಚುನಾವಣೆ?
ಇನ್ನು ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆ ಜೋರಾಗುತ್ತಿದ್ದರಿಂದ ಇದಕ್ಕೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರತಿಕ್ರಿಯಿಸಿದ್ದು,ಅವಧಿಪೂರ್ವ ಚುನಾವಣೆ ಬಗ್ಗೆ ಚರ್ಚೆಯೇ ನಡೆದಿಲ್ಲ. ಈ ಬಗ್ಗೆ ವರಿಷ್ಠರು ನಮಗೆ ಯಾವುದೇ ಸೂಚನೆ ಕೊಟ್ಟಿಲ್ಲ. ನಮ್ಮ ಪಕ್ಷವನ್ನು ಬಿಟ್ಟು ಯಾರೂ ಕೂಡ ಹೋಗೋದಿಲ್ಲ. ಬೇರೆ ಪಕ್ಷದಿಂದ ಬಿಜೆಪಿಗೆ ಬರೋರನ್ನ ಕಾದು ನೋಡಿ ಎಂದರು.
ವಿಪಕ್ಷ ನಾಯಕರು ಅವಧಿಗೂ ಮೊದಲೇ ಚುನಾವಣೆ ನಡೆಯಲಿದೆ ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರು ಸಚಿವ ಸಂಪುಟ ವಿಸ್ತರಣೆ, ಸಚಿವ ಸ್ಥಾನದ ಆಕಾಂಕ್ಷಿಗಳಾಗಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇಳಿದರು.
ಅವಧಿಪೂರ್ಣ ಚುನಾವಣೆ ಚರ್ಚೆ ಮಾಧ್ಯಮಗಳಲ್ಲಿ ನಡೀತಿದೆ. ನಮ್ಮ ಪಕ್ಷದಲ್ಲಿ ಅವಧಿಪೂರ್ಣ ಚುನಾವಣೆ ಬಗ್ಗೆ ಚರ್ಚೆ ನಡೀತಿಲ್ಲ. ಯಾವುದೇ ಹಂತದಲ್ಲೂ, ಎಲ್ಲೂ ಕೂಡಾ ಪಕ್ಷದಲ್ಲಿ ಚರ್ಚೆ ನಡೀತಿಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದರು.
ವರಿಷ್ಠರು ಇನ್ನೂ ಸೂಚನೆ ಕೊಟ್ಟಿಲ್ಲ. ವರಿಷ್ಠರ ಸೂಚನೆ ಕೊಟ್ಟ ಮೇಲೆ ದೆಹಲಿಗೆ ಹೋಗುತ್ತೇನೆ. ವರಿಷ್ಠರು ಯಾವಾಗ ಹೇಳ್ತಾರೋ ಆಗ ಸಚಿವ ಸಂಪುಟ ಪುನಾರಚನೆ ಮಾಡಲಾಗುತ್ತದೆ. ಇದೇ ಮಾ. 30, 31 ರಂದು ಕರ್ನಾಟಕ ಬಿಜೆಪಿಯ ಕಾರ್ಯಕಾರಿಣಿ ಸಭೆ ಇದೆ. ೀ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಪ್ರವಾಸ ಸೇರಿ ಎಲ್ಲ ವಿಚಾರಗಳು ಚರ್ಚೆ ಆಗುತ್ತವೆ ಎಂದು ಮಾಹಿತಿ ನೀಡಿದರು.
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ(BJP) ಸಾಧಿಸಿದ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ(Karnataka) ಅವಧಿ ಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಕುರಿತು ವದಂತಿ ಹಬ್ಬಿದೆ. ಆದರೆ, ಆಡಳಿತ ಪಕ್ಷ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್‌ನ(Congress) ಮೂಲಗಳು ಇಂತಹ ಸಾಧ್ಯತೆಯನ್ನು ಅಲ್ಲಗಳೆಯುತ್ತವೆ. ಜೆಡಿಎಸ್ ನಾಯಕ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು(HD Devegowda) ‘ಅವಧಿಪೂರ್ವ ಚುನಾವಣೆಗೆ ನಾವು ಸಿದ್ಧ’ ಎಂದರೂ, ‘ಈ ರೀತಿ ಮಾಡುವುದು ಸುಲಭವಲ್ಲ’ ಎನ್ನುವ ಮೂಲಕ ಇಂಥ ಸಾಧ್ಯತೆ ಕ್ಷೀಣ ಎಂಬ ಸಂದೇಶ ನೀಡಿದ್ದಾರೆ.
ಪರಿಪೂರ್ಣ ಆಡಳಿತ ನಡೆಸಿ ಅಂತಿಮ ವರ್ಷ ಜನಪ್ರಿಯ ಬಜೆಟ್(Budget) ಮಂಡಿಸಿ ಜನರ ಮನ ಗೆಲ್ಲುವ ಅವಕಾಶವಿರುವಾಗ ಅವಧಿ ಪೂರ್ವ ಚುನಾವಣೆಗೆ ಹೋಗುವ ಅಗತ್ಯವೇನಿದೆ ಎಂಬ ಪ್ರಶ್ನೆ ಬಿಜೆಪಿ ಮೂಲಗಳಿಂದ ಕೇಳಿ ಬಂದರೆ, ಕಾಂಗ್ರೆಸ್ ಮೂಲಗಳು ಕೂಡ ಇಂತಹ ಸಾಧ್ಯತೆಯನ್ನು ಅಲ್ಲಗಳೆಯುತ್ತವೆ. ಖುದ್ದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರೇ ಇಂತಹ ಬೆಳವಣಿಗೆ ಸಾಧ್ಯವಿಲ್ಲ. ಜಿಲ್ಲಾ ಪಂಚಾಯ್ತಿ ಚುನಾವಣೆ ಮಾಡದವರು ಅವಧಿ ಪೂರ್ವ ಚುನಾವಣೆ ಮಾಡ್ತಾರಾ ಎಂದು ಪ್ರಶ್ನಿಸುವ ಮೂಲಕ ಈ ವದಂತಿಯನ್ನು ನಿರಾಕರಿಸಿದ್ದಾರೆ.
ವದಂತಿಗೆ ಕಾರಣ ಪಂಚರಾಜ್ಯ ಯಶಸ್ಸು:
ಪಂಚರಾಜ್ಯ ಚುನಾವಣೆಯ ಫಲಿತಾಂಶ ಹೊರ ಬಿದ್ದ ನಂತರ ಭಾರಿ ಹುಮ್ಮಸ್ಸಿನಲ್ಲಿರುವ ಬಿಜೆಪಿ ಗುಜರಾತ್ ಚುನಾವಣೆ ಜತೆಗೆ ಅಂದರೆ ನವೆಂಬರ್- ಡಿಸೆಂಬರ್‌ನಲ್ಲಿ ಕರ್ನಾಟಕದಲ್ಲೂ ಚುನಾವಣೆ(Election) ನಡೆಸುವ ಚಿಂತನೆ ಹೊಂದಿದೆ ಎಂಬುದು ಈ ವದಂತಿಯ ಸಾರ. ರಾಷ್ಟ್ರ ಮಟ್ಟದಲ್ಲಿ ಮೋದಿ(Narendra Modi) ಪರ ಅಲೆಯಿರುವಾಗ ಅದನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮತ್ತೆ ಅಧಿಕಾರ ಗಿಟ್ಟಿಸುವ ಉದ್ದೇಶದಿಂದ ಇಂತಹ ಚಿಂತನೆ ಹೊಂದಿದೆ ಎಂಬುದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.