ಧರ್ಮಸ್ಥಳ ಕೇಸ್ ದೂರುದಾರನ ಮೇಲೆ ಒತ್ತಡ ಹೇರಿದವರ ಬಗ್ಗೆಯೂ ತನಿಖೆಯಾಗಲಿ; ಬಸವರಾಜ ಬೊಮ್ಮಾಯಿ

Published : Jul 21, 2025, 04:11 PM ISTUpdated : Jul 21, 2025, 04:14 PM IST
Basavaraj Bommai

ಸಾರಾಂಶ

ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಯನ್ನು ಸ್ವಾಗತಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ದೂರುದಾರರ ಮೇಲಿನ ಒತ್ತಡದ ಬಗ್ಗೆಯೂ ತನಿಖೆಯಾಗಬೇಕು ಮತ್ತು ದೇವಾಲಯದ ಭಕ್ತರ ನಂಬಿಕೆಗೆ ಧಕ್ಕೆಯಾಗಬಾರದು ಎಂದಿದ್ದಾರೆ. ಸಣ್ಣ ವ್ಯಾಪಾರಿಗಳಿಗೆ GST ನೋಟಿಸ್‌ನಿಂದಾದ ಸಮಸ್ಯೆಯನ್ನು ಸಿಎಂ ಬಗೆಹರಿಸುವಂತೆ ಆಗ್ರಹಿಸಿದರು

ಬೆಂಗಳೂರು (ಜು.21): ಧರ್ಮಸ್ಥಳ ಪ್ರಕರಣದ ಕುರಿತು ಎಸ್ ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು. ಇದೀಗ ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂಬದುರ ಬಗ್ಗೆ ತನಿಖೆಯಾಗಬೇಕು. ಎಸ್‌ಐಟಿ ತನಿಖೆ ಧರ್ಮಸ್ಥಳ ದೇವಾಲಯದ ಮೇಲಿನ ನಂಬಿಕೆಯನ್ನು ಕೆಡಿಸುವಂತಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂದು ಹೇಳಬೇಕು, ಈ ಬಗ್ಗೆ ತನಿಖೆಯಾಗಬೇಕು. ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ‌ ಪೊಲಿಸರು ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ, ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು.

ಜಿಎಸ್‌ಟಿ ಬಗ್ಗೆ ಸಿಎಂ ನುಣುಚಿಕೊಳ್ಳಬಾರದು

ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆಯವರು ನೊಟಿಸ್ ಕೊಟ್ಟಿದ್ದು ಸಣ್ಣ ವ್ಯಾಪಾರಸ್ಥರಿಗೆ ದೊಡ್ಡ ಆಘಾತವಾಗಿದೆ. ಈಗ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಮೇಲೆ ಜವಾಬ್ದಾರಿ ಹೊತ್ತುಹಾಕಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ. ಜಿಎಸ್‌ಟಿ ಕೌನ್ಸಿಲ್ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ಜವಾಬ್ದಾರಿ ಇದೆ. ರಾಜ್ಯದ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಹೊಣೆ ಮತ್ತು ನಿರ್ವಹಣೆಯನ್ನು ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯವರು ನೋಡುತ್ತಾರೆ. ಈಗ ಸಣ್ಣ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿರುವುದರಿಂದ ಅವರ ವ್ಯಾಪಾರ ಬಂದ ಆಗಿರುವುದು ದೊಡ್ಡ ಹೊಡೆತ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಣ್ಣ ವ್ಯಾಪಾರಸ್ಥ ಮುಖಂಡರನ್ನು ಕರೆದು ಮಾತನಾಡಬೇಕು. ಸಿಎಂ ಹಣಕಾಸು ಸಚಿವರಾಗಿದ್ದು ಅವರು ಇದನ್ನು ಬಗೆ ಹರಿಸಬೇಕು. ಹಾಗೂ ಮುಂದಿನ ದಿನಗಳಲ್ಲಿ ವ್ಯಾಪಾರಸ್ಥರು ಕಾನೂನು ಬದ್ದವಾಗಿ ತೆರಿಗೆ ಕಟ್ಟಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ಎಲ್ಲ ಗೊತ್ತಿದ್ದು ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳೇ ನೊಟೀಸ್ ಕೊಡಿಸಿದ್ದಾರೆ‌. ಇಲ್ಲಿ ಯಾರೂ ಯಾರ ಬಾಯಿಗೆ ಮೊಸರು ಒರೆಸುವ ಪ್ರಶ್ನೆ ಇಲ್ಲ. ಅವರು ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಬೆಂಗಳೂರು ಮಹತ್ವ ಕಳೆದುಕೊಳ್ಳಬಾರದು

ಬೆಂಗಳೂರು 5 ಮಹಾನಗರ ಪಾಲಿಕೆಯಾಗಿ ವಿಭಜನೆ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ವಿಭಜನೆ ಮಾಡುವುದರಿಂದ ಅದರ ಮಹತ್ವ ಕಡಿಮೆ ಆಗಬಾರದು. ದೇಶದ ನಾಲ್ಕು ಮಹಾನಗರಕ್ಕಿಂತ ಪ್ರಖ್ಯಾತಿ ಇರುವ ನಗರ ಅಂದರೆ ಬೆಂಗಳೂರು. ವಿದೇಶದಲ್ಲಿಯೂ ಇದರ ಮಹತ್ವ ಇದೆ. ಇದೀಗ ನಗರ ವಿಭಜನೆಯಿಂದ ಅಭಿವೃದ್ಧಿಯಲ್ಲಿ ತಾರತಮ್ಯ ಆಗದಂತೆ ನೋಡಿಕೊಳ್ಳಬೇಕು. ಕೇವಲ ರಾಜಕೀಯ ಉದ್ದೇಶದಿಂದ ಪ್ರತ್ಯೇಕ ಪಾಲಿಕೆ ಮಾಡುವುದು ಸರಿಯಲ್ಲ. ಈಗಾಗಲೇ ಬಿಬಿಎಂಪಿಗೆ 110 ಹಳ್ಳಿಗಳನ್ನು ಸೇರಿಸಲಾಗಿತ್ತು. ಅವು ಇನ್ನೂ ಅಭಿವೃದ್ಧಿ ಆಗಿಲ್ಲ. ಈಗ ಅವೆಲ್ಲ ಒಂದೇ ಪಾಲಿಕೆಗೆ ಸೇರಿದರೆ ಅವು ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದರು.

ದೊಡ್ಡ ಬದಲಾವಣೆ:

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬರುವ ದಿನಗಳಲ್ಲಿ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆ ಆಗುತ್ತದೆ. ಯಾರು ಏನೇ ಹೇಳಿದರು. ಆಗುವ ಬೆಳವಣಿಗೆಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು. ಇದೇ ವೇಳೆ ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರು ಒಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಒಟ್ಟು ಗೂಡಿಸುವ ಅಗತ್ಯವಿಲ್ಲ. ಅವರು ಮೊದಲಿನಿಂದಲೂ ಒಟ್ಟಾಗಿದ್ದಾರೆ. ರಾಜಕೀಯಕ್ಕೆ ಬರುವ ಮುಂಚಿನಿಂದಲೂ ಅವರ ಸ್ನೇಹ ಗಾಢವಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ - ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ