ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ವೇಳೆ ಸರ್ಕಾರವು ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.
ಬೆಂಗಳೂರು (ಆ.15): ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ವೇಳೆ ಸರ್ಕಾರವು ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ತಮಿಳುನಾಡಿಗೆ ನೈಋುತ್ಯ ಮತ್ತು ಈಶಾನ್ಯ ಮನ್ಸೂನ್ ಮಳೆಯಾಗುತ್ತಿರುವುದರಿಂದ ನಾವು ನೀರು ಬಿಡಲು ಸಾಧ್ಯವಿಲ್ಲ.
ಈ ವಾಸ್ತವಾಂಶದ ಮೇಲೆ ನಾವು ಗಟ್ಟಿನಿಲುವು ತೆಗೆದುಕೊಳ್ಳಬೇಕು. ತಮಿಳುನಾಡು ಮತ್ತೆ ಕ್ಯಾತೆ ತೆಗೆದಿರುವುದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ. ತಮಿಳುನಾಡು ಸುಪ್ರೀಂಕೋರ್ಚ್‌ಗೆ ಹೋಗಬಹುದೆಂದು ಮಾಧ್ಯಮದಲ್ಲಿ ಗಮನಿಸಿದ್ದೇವೆ. ಈ ವಿಚಾರದಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ಲೆಕ್ಕಿಸದೆ ಸಿಡಬ್ಲೂಡಿಟಿ ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಟು ಕುರುವೈ ಪ್ರದೇಶ ಬೆಳೆಗೆ ನೀರನ್ನು ಒದಗಿಸಿದೆ.
ಸೇವಾ ಮನೋಭಾವದ ವೈದ್ಯರು ಸಂಖ್ಯೆ ಹೆಚ್ಚಾಗಲಿ: ಸಚಿವ ಪರಮೇಶ್ವರ್
ಇದನ್ನು ನಮ್ಮ ಅಧಿಕಾರಿಗಳು ಸಿಡಬ್ಲೂಎಂಎದಲ್ಲಿ ಪ್ರತಿಭಟಿಸಿದೆ ಸುಮ್ಮನೆ ಇದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ. ಈಗಿರುವ ನಮ್ಮ ನಾಲ್ಕು ಜಲಾಶಯಗಳ ನೀರಿನ ಮಟ್ಟಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ತದೆ. ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದ ಖಾರಿಫ್ ಬೆಳೆಗಳಿಗೆ ನೀರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೀಡು ಮಾಡುತ್ತದೆ. ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಗುತ್ತಿಗೆದಾರರ ‘ಬಿಲ್’ ಕಮಿಷನ್ ಆರೋಪಕ್ಕೆ ಸಚಿವರ ಆಕ್ರೋಶ: ಗುತ್ತಿಗೆದಾರರ ಬಿಲ್ ಪಾವತಿಗೆ ಕಮಿಷನ್ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವರು, ‘ಬಿಜೆಪಿ ನಾಯಕರು ಸೋಲಿನ ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ಗುತ್ತಿಗೆದಾರರೊಂದಿಗೆ ಅವರಿಗೆ ಸಹಭಾಗಿತ್ವ ಇದೆಯೇ’ ಎಂದು ಪ್ರಶ್ನಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಲೋಕೋಪಯೋಗಿ ಸಚಿವ ಡಾ. ಎಚ್.ಸಿ.ಮಹದೇವಪ್ಪ, ‘ಗುತ್ತಿಗೆದಾರರ ಬಿಲ್ ಪಾವತಿಗೆ ಕಮಿಷನ್ ಕೇಳಿದ ಕುರಿತು ಬಿಜೆಪಿ ನಾಕರು ಮಾಡುತ್ತಿರುವ ಆರೋಪ ಸುಳ್ಳು. ಸೋಲಿನ ಹತಾಶೆಯಿಂದಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಜನರ ಗಮನ ಸೆಳೆಯಲು ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಅಧಿಕಾರದಲ್ಲಿದ್ದಾಗ ಸರಿಯಾಗಿ ಕೆಲಸ ಮಾಡಲಿಲ್ಲ. ತಮ್ಮ ಆಡಳಿತದ ಕುರಿತು ಜನರ ಬಳಿ ಹೇಳಿಕೊಳ್ಳುವುದು ಏನೂ ಇಲ್ಲ.
ಮಳೆಗಾಗಿ ಪ್ರಾರ್ಥಿಸಿ ಬಾಲಕರಿಗೆ ಮದುವೆ: ಹಾಡು-ಕುಣಿತದ ಮೂಲಕ ಪ್ರಾರ್ಥನೆ
ಹೀಗಾಗಿ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ಹೇಳಿದರು. ‘ಬಿಲ್ ಪಾವತಿ ಸಂಬಂಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸರ್ಕಾರಕ್ಕೆ ಡೆಡ್‌ಲೈನ್ ಕೊಡಲು ಅವರೇನು ಸಾಂವಿಧಾನಿಕ ಹುದ್ದೆಯಲ್ಲಿಲ್ಲ. ಬಿಲ್ ಪಾವತಿಗೆ ಮನವಿ ಮಾಡಿಕೊಳ್ಳಲಿ. ಸಮಸ್ಯೆ ಇರುವುದನ್ನು ಬಗೆಹರಿಸಿ ಬಿಲ್ ಪಾವತಿಸುತ್ತೇವೆ. ಇನ್ನು, ಬಿಬಿಎಂಪಿ ಗುತ್ತಿಗೆದಾರರು ‘ಕಮಿಷನ್ ಕೇಳಿಲ್ಲ ಎಂದರೆ ಅಜ್ಜಯ್ಯ ಮಠದಲ್ಲಿ ಬಂದು ಆಣೆ ಮಾಡಿ’ ಎಂದು ಹೇಳುತ್ತಾರೆ. ಅಲ್ಲಿಗೆ ಬಂದರೆ ಸತ್ಯ ಹೊರಗೆ ಬರುತ್ತದೆಯೇ? ಅದೆಲ್ಲ ಮೂಢನಂಬಿಕೆಯಷ್ಟೇ. ಸಂವಿಧಾನದ ಮೇಲೆ ನಂಬಿಕೆ ಇಡಬೇಕು. ಕೆಲಸ ಮಾಡಿರುವುದನ್ನು ಪರೀಕ್ಷಿಸುವುದು ತಪ್ಪಾ? ಎಂದು ಪ್ರಶ್ನಿಸಿದರು.