
ಹುಬ್ಬಳ್ಳಿ (ಆ.12): ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರೂ ಮುಖ್ಯಮಂತ್ರಿ ಅವರು ಒತ್ತಡ ಹೇರಿ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಕೊಡುವಂತೆ ಮಾಡಿದರು. ರಾಜೀನಾಮೆ ಪತ್ರವನ್ನೂ ಟೈಪ್ ಮಾಡಿಸಿಕೊಂಡು ಬಂದು ಸಹಿ ಮಾಡುವಂತೆ ಒತ್ತಡ ಹಾಕಿದರು ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ಆ.14ರಂದು ರಾಜೀನಾಮೆ ನೀಡುವುದಾಗಿ ಹೇಳಿದ್ದೆ. ಈ ಕುರಿತು ಒಪ್ಪಂದವೂ ಆಗಿತ್ತು. ಆ.7ರಂದೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಾಕಷ್ಟು ಒತ್ತಡ ಹೇರಿದ್ದರಿಂದ ಅನಿವಾರ್ಯವಾಗಿ ರಾಜೀನಾಮೆ ನೀಡಬೇಕಾಯಿತು ಎಂದರು. ನಾನು ಆಸ್ಪತ್ರೆಯಲ್ಲಿದ್ದಾಗಲೂ ದೂರವಾಣಿ ಮೂಲಕ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದರು. ನನ್ನ ಮುಂದೆಯೇ ರಾಜೀನಾಮೆ ಪತ್ರವನ್ನು ಟೈಪ್ ಮಾಡಿಸಿಕೊಂಡು ಬಂದು ಅದಕ್ಕೆ ಸಹಿ ಮಾಡುವಂತೆ ಒತ್ತಾಯಿಸಿದರು. ಪರಿಸ್ಥಿತಿಯ ಕಾರಣದಿಂದಾಗಿ ರಾಜೀನಾಮೆ ನೀಡಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ನಡೆ ತಮ್ಮ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಇನ್ನು ಮುಂದೆ ಸಾಮಾನ್ಯ ಸದಸ್ಯನಾಗಿ ಸದನದಲ್ಲಿ ಭಾಗವಹಿಸುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.