Basavaraj Patil Marum victory: ಮಹಾರಾಷ್ಟ್ರ ವಿಧಾನಪರಿಷತ್‌ಗೆ ಕಲಬುರಗಿಯ ಕನ್ನಡಿಗ ಆಯ್ಕೆ

Kannadaprabha News   | Kannada Prabha
Published : Jun 24, 2026, 07:52 AM IST
Kannadiga from Kalaburagi elected to Maharashtra Legislative Council

ಸಾರಾಂಶ

ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕ ಬಸವರಾಜ ಪಾಟೀಲ ಮರುಮ್ ಅವರು ಧಾರಾಶಿವ-ಲಾತೂರ-ಬೀಡ ವಿಧಾನ ಪರಿಷತ್ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆಳಂದ ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್ ಪಾಟೀಲ್ ಅವರ ಸಹೋದರರಾದ ಇವರ ಗೆಲುವನ್ನು ಆಳಂದದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಆಳಂದ (ಕಲಬುರಗಿ):  ಆಳಂದ ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್ ಪಾಟೀಲ್ ಸಹೋದರ, ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕ ಬಸವರಾಜ ಪಾಟೀಲ ಮರುಮ್(Basavaraj Patil) ಅವರು ಧಾರಾಶಿವ- ಲಾತೂರ- ಬೀಡ ಜಿಲ್ಲೆಗಳ ಸ್ಥಳೀಯ ಸಂಘ–ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರದಲ್ಲಿ 850 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಆಳಂದಲ್ಲಿ ವಿಜಯೋತ್ಸವ

ಈ ಗೆಲುವು ಆಳಂದದಲ್ಲಿ ಸಂಭ್ರಮ ಮತ್ತು ಸಡಗರ ಮೂಡಿಸಿದ್ದು, ಕುಟುಂಬಸ್ಥರು, ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಉತ್ಸಾಹದಿಂದ ವಿಜಯೋತ್ಸವ ಆಚರಿಸಿದರು. 2 ಬಾರಿ ಶಾಸಕರಾಗಿ ಹಾಗೂ ಒಮ್ಮೆ ಸಚಿವರಾಗಿ ಮಹಾರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ಬಸವರಾಜ ಪಾಟೀಲ ಮರುಮ್ ಅವರು, ಈ ಗೆಲುವಿನ ಮೂಲಕ ವಿಧಾನ ಪರಿಷತ್ ಸದಸ್ಯರಾಗಿ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.

ಕುಟುಂಬಕ್ಕೆ ಹೆಮ್ಮೆ

ವಿಜಯೋತ್ಸವದಲ್ಲಿ ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್, ‘ನಮ್ಮ ಮನೆತನದ ಕುಡಿ ಶಾಸಕರಾಗಿ, ಸಚಿವರಾಗಿ ಅನುಪಮ ಸೇವೆ ಸಲ್ಲಿಸಿ, ಈಗ ಮತ್ತೊಮ್ಮೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವುದು ನಮ್ಮ ಇಡೀ ಕುಟುಂಬಕ್ಕೆ ಅಪಾರ ಹೆಮ್ಮೆ ಮತ್ತು ಸಂತಸ ತಂದಿದೆ. ಅವರ ಜನಪ್ರಿಯತೆ ಮತ್ತು ಸಮಾಜ ಸೇವೆ ಮತದಾರರು ಮತ್ತೊಮ್ಮೆ ಗುರುತಿಸಿ ಅಭೂತಪೂರ್ವ ಬೆಂಬಲ ನೀಡಿದ್ದಾರೆ’ ಎಂದು ಭಾವುಕರಾಗಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Viral Trisha Post: ಸಿಎಂ ವಿಜಯ್ ಹುಟ್ಟುಹಬ್ಬಕ್ಕೆ ತ್ರಿಷಾ ಸ್ಪೆಷಲ್ ವಿಶ್; ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ!
ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!